ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಇಳಿಕೆ; ಎಟಿಎಫ್‌ ಬೆಲೆ ಏರಿಕೆ!

Date:

ಹೋಟೆಲ್‌, ಉಪಹಾರ ಗೃಹ ಸೇರಿದಂತೆ ವಾಣಿಜ್ಯ ಬಳಕೆಗೆ ಬಳಸುವ 19 ಕೆ.ಜಿ.ಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಶನಿವಾರದಿಂದ ಪ್ರತಿ ಸಿಲಿಂಡರ್‌ಗೆ 192 ರೂ. ಇಳಿಕೆ ಮಾಡಿದೆ. ಇದೇ ವೇಳೆ, ವಿಮಾನಗಳಿಗೆ ಬಳಸುವ ಏವಿಯೇಷನ್ ಟರ್ಬೈನ್ ಫ್ಯುಯೆಲ್‌ (ATF) ದರವನ್ನೂ ಪ್ರತಿ ಲೀಟರ್‌ಗೆ 5 ರೂ. ಹೆಚ್ಚಿಸಿದೆ.

- Advertisement -

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಟಣೆಯ ಪ್ರಕಾರ, ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 2,930 ರೂ.ನಿಂದ 2,738 ರೂ.ಗೆ ಇಳಿಕೆಯಾಗಿದೆ. ಅಂತೆಯೇ, ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯು 3,021 ರೂ.ಗಳಿಂದ 2,821 ರೂ.ಗೆ ಇಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದರ ಜೊತೆಗೆ, 5 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 808.50 ರೂ.ನಿಂದ 762 ರೂ.ಗೆ ಇಳಿಸಲಾಗಿದೆ.

ಈ ಹಿಂದೆ, ಜುಲೈ 1ರಂದು ಕೂಡ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 183.50 ರೂ. ಕಡಿತ ಮಾಡಲಾಗಿತ್ತು. ಆದರೆ, ಜುಲೈನಲ್ಲಿ ಇಳಿಕೆ ಕಂಡಿದ್ದ ಎಟಿಎಫ್ ದರವನ್ನು ಇದೀಗ ಮತ್ತೆ ಹೆಚ್ಚಿಸಲಾಗಿದೆ. ಪ್ರಸ್ತುತ, ಎಟಿಎಫ್ ದರ ಲೀಟರ್‌ಗೆ 110 ರೂ.ನಿಂದ 115 ರೂ.ಗೆ ಏರಿಕೆಯಾಗಿದೆ.

ಮಧ್ಯಪ್ರಾಚ್ಯದಲ್ಲಿ ಉಂಟಾದ ಬಿಕ್ಕಟ್ಟಿನ ಪರಿಣಾಮವನ್ನು ಉಲ್ಲೇಖಿಸಿ ಜೂನ್ ತಿಂಗಳಲ್ಲಿ ವಾಣಿಜ್ಯ ಎಲ್‌ಪಿಜಿ ದರಗಳನ್ನು ಕೇಂದ್ರ ಸರ್ಕಾರವು ದಾಖಲೆಯ ಮಟ್ಟಕ್ಕೆ ಏರಿಕೆ ಮಾಡಿತ್ತು. ಫೆಬ್ರವರಿಯಲ್ಲಿ 19 ಕೆ.ಜಿ. ಸಿಲಿಂಡರ್‌ ಬೆಲೆ 1,740.50 ರೂ. ಇದ್ದದ್ದು, ಜೂನ್ ವೇಳೆಗೆ 3,113.50 ರೂ.ಗೆಏರಿಕೆಯಾಗಿತ್ತು. ಜುಲೈ ಮತ್ತು ಆಗಸ್ಟ್ ತಿಂಗಳ ದರ ಇಳಿಕೆಯ ನಂತರ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡುಬಂದಿದೆ.

ಇನ್ನು, ಗೃಹ ಬಳಕೆಯ 14.2 ಕೆ.ಜಿ. ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇದು ಯಥಾಸ್ಥಿತಿಯಲ್ಲಿ 942 ರೂ.ನಲ್ಲೇ ಮುಂದುವರಿದಿದೆ. ಗೃಹ ಬಳಕೆಯ ಸಿಲಿಂಡರ್‌ ದರವನ್ನು ಕೊನೆಯದಾಗಿ ಜೂನ್ 7ರಂದು 29 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಅದಕ್ಕೂ ಮೊದಲು ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದ ಉಂಟಾದ ಪೂರೈಕೆ ಸಮಸ್ಯೆಯ ಹಿನ್ನೆಲೆಯಲ್ಲಿ ಮಾರ್ಚ್‌ನಲ್ಲಿ 60 ರೂ. ಹೆಚ್ಚಳ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...