ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 195.50 ರೂ. ದಿಢೀರ್ ಏರಿಕೆ: ಬೆಂಗಳೂರಿನಲ್ಲಿ ಎಷ್ಟು?

Date:

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ಜಾಗತಿಕ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗಿದ್ದು, ಇದರ ಬಿಸಿ ಇದೀಗ ಗ್ರಾಹಕರಿಗೆ ತಟ್ಟಿದೆ. ಬುಧವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 195.50 ರೂ.ಗಳಷ್ಟು ಹೆಚ್ಚಿಸಲಾಗಿದೆ.

- Advertisement -

​ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಮಾಹಿತಿಯ ಪ್ರಕಾರ, ದೆಹಲಿಯಲ್ಲಿ 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಈಗ 2,078.50 ರೂ.ಗಳಿಗೆ ತಲುಪಿದೆ.
​
ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ದರವು ಭಾರಿ ಏರಿಕೆ ಕಂಡಿದ್ದು 2,161 ರೂ.ಗಳಿಗೆ ತಲುಪಿದೆ. ಇಂಧನ ಮತ್ತು ಅನಿಲ ದರ ಏರಿಕೆಯಿಂದಾಗಿ ನಗರದಲ್ಲಿ ಪೆಟ್ರೋಲ್ ಪಂಪ್‌ಗಳ ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರುತ್ತಿದ್ದು, ಆಟೋರಿಕ್ಷಾಗಳ ಸೇವೆ ವ್ಯತ್ಯಯವಾಗುವ ಆತಂಕ ಎದುರಾಗಿದೆ. ಇದರಿಂದಾಗಿ ಪ್ರಯಾಣಿಕರು ಆಟೋಗಾಗಿ ಕಾಯುವ ಸಮಯ ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಫೆಬ್ರವರಿ 28ರಂದು ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಪ್ರಾರಂಭವಾದ ನಂತರ ಆಗಿರುವ ಎರಡನೇ ದರ ಏರಿಕೆ ಇದಾಗಿದೆ. ಇದಕ್ಕೂ ಮುನ್ನ, ಮಾರ್ಚ್ 1ರಂದು 19 ಕೆ.ಜಿ ಸಿಲಿಂಡರ್‌ಗೆ 114.50 ರೂ.ಗಳಷ್ಟು ದರ ಹೆಚ್ಚಿಸಲಾಗಿತ್ತು.

ಸಾಮಾನ್ಯ ಗ್ರಾಹಕರಿಗೆ ತುಸು ನಿರಾಳ ಎನ್ನುವಂತೆ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ (14.2-ಕೆ.ಜಿ) ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮಾರ್ಚ್ 7ರಂದು ಗೃಹ ಬಳಕೆಯ ಸಿಲಿಂಡರ್ ದರವನ್ನು 60 ರೂ.ಗಳಷ್ಟು ಹೆಚ್ಚಿಸಲಾಗಿತ್ತು, ಸದ್ಯ ಅದೇ ದರ ಮುಂದುವರಿದಿದೆ.

ಇದನ್ನು ಓದಿದ್ದೀರಾ? ‘ಮೈಬಣ್ಣದ ಕಾರಣಕ್ಕೆ ನನ್ನನ್ನು ಕಡೆಗಣಿಸಿದರು’- ಕಹಿ ನೆನಪುಗಳನ್ನು ಬಿಚ್ಚಿಟ್ಟ ಮಾಜಿ ಲೆಗ್ ಸ್ಪಿನ್ನರ್ ಶಿವರಾಮಕೃಷ್ಣನ್
​
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ಪ್ರತಿ ತಿಂಗಳ ಮೊದಲ ದಿನದಂದು ಎಟಿಎಫ್ (ವಿಮಾನಯಾನ ಇಂಧನ – ATF) ಮತ್ತು ಎಲ್‌ಪಿಜಿ ದರಗಳನ್ನು ಪರಿಷ್ಕರಿಸುತ್ತವೆ.

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಭುಗಿಲೆದ್ದಾಗಿನಿಂದ ಜಾಗತಿಕ ತೈಲ ಬೆಲೆಗಳು ಬರೋಬ್ಬರಿ ಶೇಕಡಾ 50ರಷ್ಟು ಏರಿಕೆಯಾಗಿವೆ. ಇದು ಜಾಗತಿಕ ಮಟ್ಟದಲ್ಲಿ ಇಂಧನ ಪೂರೈಕೆ ಸರಪಳಿಯಲ್ಲಿ ಭಾರಿ ವ್ಯತ್ಯಯವನ್ನು ಉಂಟುಮಾಡಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಸದ್ಯ ಯಾವುದೇ ಬದಲಾವಣೆಯಿಲ್ಲ. ಕಳೆದ ವರ್ಷದ ಮಾರ್ಚ್‌ನಲ್ಲಿ ಪ್ರತಿ ಲೀಟರ್‌ಗೆ 2 ರೂ. ಇಳಿಕೆ ಮಾಡಿದ ಬಳಿಕ ದರಗಳು ಸ್ಥಿರವಾಗಿವೆ. ಪ್ರಸ್ತುತ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಹಾಗೂ ಡೀಸೆಲ್ ಬೆಲೆ 87.62 ರೂ. ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...