ಕೋಮುದ್ವೇಷಿ ಕೃತ್ಯ | ಯುವಕನನ್ನು ಹೊಡೆದು ಕೊಂದ ಕೋಮುವಾದಿ ದುರುಳರು

Date:

ಕೋಮುವಾದಿ ಗುಂಪೊಂದು 21 ವರ್ಷದ ಯುವಕನನ್ನು ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಮನೇರ್ ಪ್ರದೇಶದಲ್ಲಿ ನಡೆದಿದೆ. ಅದೂ, ಘಟನೆಯು ಪೊಲೀಸ್‌ ಠಾಣೆಯಿಂದ ಕೆಲವೇ ಮೀಟರ್‌ ದೂರದಲ್ಲಿ ಕೃತ್ಯ ನಡೆದಿದ್ದು, ಕಾನೂನು-ಸುವ್ಯವಸ್ಥೆಯ ಬಗ್ಗೆ ಗಂಭೀರ ಕಳವಳ ಹುಟ್ಟುಹಾಕಿದೆ.

- Advertisement -

ಜಾಮನೇರ್ ತಾಲೂಕಿನ ಛೋಟಿ ಬೆಟವಾಡ್‌ ಗ್ರಾಮದ ನಿವಾಸಿ ಸುಲೇಮಾನ್ ರಹೀಮ್ ಖಾನ್ ಎಂಬ ಯುವಕನನ್ನು ಜಾಮನೇರ್ ಪೊಲೀಸ್‌ ಠಾಣೆಯ ಬಳಿ, ಕೋಮುವಾದಿ ಗುಂಪು ಬರ್ಬರವಾಗಿ ಹತ್ಯೆಗೈದಿದೆ ಎಂದು ‘ಮಖ್ತೂಬ್ ಮೀಡಿಯಾ’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಪೊಲೀಸ್‌ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿನ ಕೆಫೆಯಲ್ಲಿ ಸುಲೇಮಾನ್ ಮತ್ತು ಓರ್ವ ಯುವತಿ ಕುಳಿದಿದ್ದರು. ಅಲ್ಲಿಗೆ ಬಂದ, 10-15 ಮಂದಿಯ ಕೋಮುವಾದಿ ಗುಂಪು, ಸುಲೇಮಾನ್ ಅವರನ್ನು ವಾಹನದಲ್ಲಿ ಅಪಹರಿಸಿತು. ವಿವಿಧ ಸ್ಥಳಗಳಿಗೆ ಕರೆದೊಯ್ದು, ಹಲ್ಲೆ ನಡೆಸಿದೆ. ಬಳಿಕ, ಆತನ ಮನೆಯ ಎದುರು ಬಿಸಾಡಿ ಹೋಗಿದೆ” ಎಂದು ವರದಿಯಾಗಿದೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಸುಮಾರ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆತನ ಕುಟುಂಬಸ್ಥರು ಮುಂದಾಗಿದ್ದಾರೆ. ಆದರೆ, ಅವರ ಮೇಲೂ ದುರುಳರ ಗುಂಪು ಹಲ್ಲೆ ನಡೆಸಿದೆ. ಸುಲೇಮಾನ್ ಅವರ ತಂದೆ, ತಾಯಿ ಮತ್ತು ಸಹೋದರಿಗೂ ಗಾಯಗಳಾಗಿವೆ. ಆದಾಗ್ಯೂ, ಸುಲೇಮಾನ್‌ ಅವರನ್ನು ಜಲಗಾಂವ್ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ದಾರಿ ಮಧ್ಯೆಯೇ ಅತ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸುಲೇಮಾನ್ ಮೇಲೆ ಕಬ್ಬಣದ ರಾಡ್‌ಗಳಿಂದ ಹಲ್ಲೆ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ, ಆರೋಪಿಗಳ ಬಂಧನಕ್ಕೆ ಹುಟುಕಾಟ ನಡೆಯುತ್ತಿದೆ. ದಾಳಿಗೆ ನಿಖರವಾದ ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧೀಕ್ಷಕ ಮಹೇಶ್ವರ ರೆಡ್ಡಿ ಮಾಹಿತಿ ನೀಡಿದ್ದಾರೆ.

12ನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಸುಲೇಮಾನ್, ಪೊಲೀಸ್‌ ಇಲಾಖೆಗೆ ಕೆಲಸಕ್ಕೆ ಸೇರಲು ಬಯಸಿದ್ದರು. ಅದಕ್ಕಾಗಿ, ಸಿದ್ದತೆ ನಡೆಸುತ್ತಿದ್ದರು. ಅವರ ಮೇಲೆ ದಾಳಿ ನಡೆದ ದಿನ, ಆತನ ಪೊಲೀಸ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಜಾಮನೇರ್‌ಗೆ ಹೋಗಿದ್ದರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...