ಡೆಹ್ರಾಡೂನ್‌ನಲ್ಲಿ ಹತ್ಯೆ ಬೆನ್ನಲ್ಲೇ ಕೋಮು ಉದ್ವಿಗ್ನತೆ, ಬಿಗಿ ಬಂದೋಬಸ್ತ್

Date:

ಕೃಷಿ ಜಮೀನಿಗೆ ನೀರು ಹರಿಸುವ ವಿಚಾರವಾಗಿ ನೆರೆಹೊರೆಯವರ ನಡುವೆ ಉಂಟಾದ ವಿವಾದವು ಓರ್ವನ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ಶನಿವಾರ ಸಂಜೆ ನಡೆದಿದೆ. ಈ ಘಟನೆಯ ಬಳಿಕ ಪ್ರದೇಶದಲ್ಲಿ ತೀವ್ರ ಕೋಮು ಉದ್ವಿಗ್ನತೆ ಸೃಷ್ಟಿಯಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಭಾರೀ ಸಂಖ್ಯೆಯಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

- Advertisement -

ಮೃತರನ್ನು ವಿನೋದ್ ಕುಮಾರ್ ಎಂದು ಗುರುತಿಸಲಾಗಿದೆ. ವಿನೋದ್ ಕುಮಾರ್ ಮತ್ತು ಅವರ ನೆರೆಹೊರೆಯವರಾದ ಇಮ್ತಿಯಾಜ್ ಅವರ ಕುಟುಂಬದ ನಡುವೆ ಜಮೀನಿಗೆ ನೀರು ಹರಿಸುವ ವಿಚಾರವಾಗಿ ದೀರ್ಘಕಾಲದಿಂದ ತಕರಾರು ಇತ್ತು. ಶನಿವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ಈ ವಿಚಾರ ವಿಕೋಪಕ್ಕೆ ಹೋಗಿ, ಆರೋಪಿಗಳು ವಿನೋದ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದರ ಪರಿಣಾಮವಾಗಿ ವಿನೋದ್ ಮೃತಪಟ್ಟಿದ್ದು, ದೂರುದಾರರಾದ ಅವರ ಸಹೋದರ ಅಶೋಕ್ ಕುಮಾರ್ ಸೇರಿದಂತೆ ಕುಟುಂಬದ ಇತರ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಘಟನೆ ಕುರಿತು ಅಶೋಕ್ ಕುಮಾರ್ ಅವರು ಅಧಿಕೃತ ದೂರು ನೀಡಿದ್ದಾರೆ. ‘ರಜ್ಜಾಕ್, ಇಮ್ತಿಯಾಜ್, ಅಮನ್, ಯೂನುಸ್, ಶಹಬಾಜ್, ಶರಫಲ್ ಅಲಿ, ಮಾಸೂಮ್, ಆದಿಲ್, ಶಮೂನ್, ಸಲ್ಮಾನ್, ಜಾವೇದ್, ಇಂತಜಾರ್ ಸೇರಿದಂತೆ ಸುಮಾರು 30-35 ಮಂದಿಯ ಗುಂಪು ಮರದ ದಿಮ್ಮಿ, ದೊಣ್ಣೆ ಹಾಗೂ ಸುತ್ತಿಗೆಯೊಂದಿಗೆ ಏಕಾಏಕಿ ನಮ್ಮ ಮನೆಗೆ ನುಗ್ಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದರು’ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ, ಕೊಲೆ ಯತ್ನ ಹಾಗೂ ಗಲಭೆ ಸೃಷ್ಟಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಫಿಫಾ ಜಗತ್ತಿನಲ್ಲಿ ಭಾರತದ ಹೆಜ್ಜೆಗುರುತು – ಕನ್ನಡಿಗ ಕೆಂಪಯ್ಯನವರ ಮರೆಯಲಾಗದ ಸಾಧನೆ

ಸಹಸ್‌ಪುರ್ ವಿಭಾಗದ ಪೊಲೀಸ್ ಅಧಿಕಾರಿ (ಸಿಒ) ಅನುಜ್ ಕುಮಾರ್ ಪ್ರತಿಕ್ರಿಯಿಸಿ, “ಕೋಮು ಪ್ರಚೋದಕ ಭಾಷಣ ಮಾಡಿರುವ ವೀಡಿಯೊಗಳು ನಮ್ಮ ಗಮನಕ್ಕೆ ಬಂದಿದ್ದು, ಆ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ಸದ್ಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ನಾಲ್ಕು ಪೊಲೀಸ್ ಠಾಣೆಗಳ ಸಿಬ್ಬಂದಿ, ಇಬ್ಬರು ಸಿಒಗಳು ಹಾಗೂ ಅಪರಾಧ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯನ್ನು (ಎಸ್‌ಪಿ) ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...