ಛತ್ತೀಸ್‌ಗಢದಲ್ಲಿ ಕೋಮು ಹಿಂಸಾಚಾರ: ಮುಸ್ಲಿಮರ ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Date:

ಹಳೆಯ ವಿವಾದದ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಮುಸ್ಲಿಮರು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 10 ಮನೆಗಳು ಮತ್ತು ನಾಲ್ಕು ವಾಹನಗಳು ಸುಟ್ಟುಹೋಗಿವೆ. ಪೊಲೀಸರು ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಗರಿಯಾಬಂದ್‌ ಜಿಲ್ಲೆಯ ದುತ್ಕಾಯ ಗ್ರಾಮದಲ್ಲಿ ಭಾನುವಾರ ರಾತ್ರಿ ಹಿಂಸಾಚಾರ ನಡೆದಿದೆ. ಗ್ರಾಮದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಪ್ರಮುಖ ಆರೋಪಿ ಆರಿಫ್‌ನನ್ನು ಶಿವ ದೇವಾಲಯಕ್ಕೆ ಹಾನಿ ಮಾಡಿದ ಆರೋಪ ಮತ್ತು ಗ್ರಾಮಸ್ಥರ ದೂರಿನ ಆಧಾರದ ಮೇಲೆ ಕಳೆದ ವರ್ಷ ಬಂಧಿಸಲಾಗಿತ್ತು. ಆತ ಇತ್ತೀಚೆಗೆ ಜಾಮೀನು ಪಡೆದು, ಜೈಲಿನಿಂದ ಹೊರಬಂದಿದ್ದ. ತನ್ನ ಬಂಧನಕ್ಕೆ ಕಾರಣರಾದವರ ವಿರುದ್ಧ ಆರಿಫ್‌ ಮತ್ತು ಆತನ ಸಹಚರರು ಆರಂಭದಲ್ಲಿ ಗಲಾಟೆ ನಡೆಸಿದ್ದಾರೆ. ಬಳಿಕ, ಪರಿಸ್ಥಿತಿ ಉದ್ವಿಘ್ನನಗೊಂಡಿದೆ. ಹಿಂದು ಸಮುದಾಯದ ಕೆಲವರು ಮುಸ್ಲಿಮರ ಮೇಲೆ ದಾಳಿ ನಡೆಸಿದ್ದಾರೆ. ಗಲಾಟೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದವರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ಪೊಲೀಸರು ವಿವರಿಸಿದ್ದಾರೆ.

“ಆರಿಫ್‌ ಸುಮಾರು ಒಂದೂವರೆ ವರ್ಷಗಳ ಹಿಂದೆ ಗ್ರಾಮದ ಶಿವ ದೇವಾಲಯವನ್ನು ಧ್ವಂಸಗೊಳಿಸಿದ್ದ. ಆತ ಈಗ ಜಾಮೀನಿನ ಮೇಲೆ ಹೊರಗಿದ್ದಾನೆ. ಹಿಂದಿನ ವೈಷಮ್ಯದಿಂದ ಗ್ರಾಮಸ್ಥರ ಮೇಲೆ ದಾಳಿ ನಡೆಸಿದ್ದಾನೆ” ಎಂದು ಗ್ರಾಮದ ನಿವಾಸಿ ಜಿತೇಂದ್ರ ಕುಮಾರ್ ಯಾದವ್ ಹೇಳಿರುವುದಾಗಿ ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಗಂಭೀರತೆ ಕಳೆದುಕೊಂಡು ಮೀಮ್ಸ್ ಮಟ್ಟಕ್ಕಿಳಿಯಿತೇ ಕೇಂದ್ರ ಬಜೆಟ್‌!

ಹಿಂಸಾಚಾರದಲ್ಲಿ ಮನೆ ಕಳೆದುಕೊಂಡ ಜರಿನಾಶಹನಾಜ್ ಮತ್ತು ದೌಲತ್ ಬಿ ಅವರು ಘಟನೆ ಬಗ್ಗೆ ವಿವರಿಸಿದ್ದು, “ಗ್ರಾಮದಲ್ಲಿ ನಡೆದ ಆರಂಭಿಕ ದಾಳಿಯ ನಂತರ, ಗುಂಪೊಂದು ವೇಗವಾಗಿ ಸೇರಲು ಪ್ರಾರಂಭಿಸಿತು. ಗುಂಪಿನಲ್ಲಿದ್ದವರು ನಮ್ಮ ಮನೆಗಳಿಗೆ ಹೋಗುವ ಎರಡೂ ರಸ್ತೆಗಳು ನಿರ್ಬಂಧಿಸಿದರು. ನಮ್ಮ ಮನೆಗಳಿಗೆ ಬೆಂಕಿ ಹಚ್ಚಿದರು. ನಾವು 112ಗೆ ಕರೆ ಮಾಡಿ ಪೊಲೀಸರನ್ನು ಸಂಪರ್ಕಿಸಿದೆವು. ಪೊಲೀಸರು ಬರುವಷ್ಟರಲ್ಲಿ ನಮ್ಮ ಮನೆಗಳು ಸುಟ್ಟುಹೋಗಿದ್ದವು. ಪೊಲೀಸರ ಸಹಾಯದಿಂದ ನಾವು ನಮ್ಮ ಜೀವಗಳನ್ನು ಉಳಿಸಿಕೊಂಡು ರಾಯ್‌ಪುರಕ್ಕೆ ತಲುಪಿದೆವು” ಎಂದು ಹೇಳಿದ್ದಾರೆ.

ಗುಂಪಿನಲ್ಲಿದ್ದವರು ಮಹಿಳೆಯರು, ಮಕ್ಕಳು ಹಾಗೂ ವೃದ್ಧರನ್ನೂ ಥಳಿಸಿದ್ದಾರೆ. ಮನೆಗಳಿಗೆ ಬೆಂಕಿ ಹಚ್ಚಿದಾಗ, ಮಹಿಳೆಯರು ಮತ್ತು ಮಕ್ಕಳು ಒಳಗೆ ಇದ್ದರು. ಪೊಲೀಸರು ಅವರೆಲ್ಲರನ್ನೂ ರಕ್ಷಿಸಿ, ಹೊರ ತಂದರು” ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗರಿಯಾಬಂದ್‌ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ವೇದ್‌ಬ್ರತ್ ಸಿರ್ಮೌರ್, “ಆರೋಪಿ ಆರಿಫ್ ಖಾನ್, ಇಮ್ರಾನ್ ಮತ್ತು ಸಲೀಂ ಅವರನ್ನು ಬಂಧಿಸಲಾಗಿದೆ. ಬೆಂಕಿ ಹಚ್ಚಿದ ಗುಂಪಿನಲ್ಲಿದ್ದವರನ್ನು ಗುರುತಿಸಲು ವೀಡಿಯೊ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಹಿಂಸಾಚಾರದಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ...