ರಾಜಸ್ಥಾನ | 15 ಹಳ್ಳಿಗಳಲ್ಲಿ ಮಹಿಳೆಯರು ಸ್ಮಾರ್ಟ್‌ಫೋನ್ ಬಳಸುವುದನ್ನು ನಿಷೇಧಿಸಿದ ಖಾಪ್ ಪಂಚಾಯತ್!

Date:

ರಾಜಸ್ಥಾನದ ಜಲೋರ್ ಜಿಲ್ಲೆಯ ಸ್ಥಳೀಯ ಖಾಪ್ ಪಂಚಾಯತ್ 15 ಹಳ್ಳಿಗಳಲ್ಲಿ ಮಹಿಳೆಯರು ಸ್ಮಾರ್ಟ್‌ಫೋನ್ ಬಳಸುವುದನ್ನು ನಿಷೇಧಿಸಿದ್ದು, ಜನವರಿ 26ರಿಂದ ಈ ನಿರ್ಬಂಧ ಜಾರಿಗೆ ಬರಲಿದೆ. ಸದ್ಯ ಈ ವಿವಾದಾತ್ಮಕ ಆದೇಶ ತೀವ್ರ ಚರ್ಚೆ ಗ್ರಾಸವಾಗುತ್ತಿದೆ. ಅದೂ ಗ್ರಾಮದ ಪುರುಷರು ಸೇರಿಕೊಂಡು ಮಹಿಳೆಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

- Advertisement -

ಖಾಪ್ ಪಂಚಾಯತ್ ಆದೇಶದಡಿಯಲ್ಲಿ ಮಹಿಳೆಯರು ಮದುವೆಗಳು, ಸಾರ್ವಜನಿಕ ಸಭೆಗಳು ಅಥವಾ ನೆರೆಹೊರೆಯವರನ್ನು ಭೇಟಿ ಮಾಡುವಾಗ ಕ್ಯಾಮೆರಾ ಇರುವ ಸ್ಮಾರ್ಟ್‌ಫೋನ್‌ಗಳನ್ನು ಕೊಂಡೊಯ್ಯಲು ಅನುಮತಿಯಿಲ್ಲ. ಕರೆ ಮಾಡಲು ಸಹಾಯವಾಗಲು ಕೀಪ್ಯಾಡ್ ಫೋನ್‌ಗಳನ್ನು ಬಳಸಲು ಮಾತ್ರ ಅವಕಾಶವಿದೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಅತ್ಯಾಚಾರಕ್ಕೆ ಒಳಗಾದ ಮಹಿಳೆಯರನ್ನೇ ದೂಷಿಸುವ ಸಮಾಜ, ‘ವಿಕ್ಟಿಮ್ ಬ್ಲೇಮಿಂಗ್’ ನಿಲ್ಲುವುದು ಯಾವಾಗ?

ಕಳೆದ ಭಾನುವಾರ ಘಾಜಿಪುರ ಗ್ರಾಮದಲ್ಲಿ ನಡೆದ ಸುಂಧಮಾತಾ ಪ್ರದೇಶದ ಚೌಧರಿ ಸಮುದಾಯದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಮುದಾಯದ ಅಧ್ಯಕ್ಷ ಸುಜನರಾಮ್ ಚೌಧರಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಪುರುಷರು ಸೇರಿಕೊಂಡು ಮೊಬೈಲ್ ಫೋನ್ ಬಳಕೆಯ ಬಗ್ಗೆ ಚರ್ಚಿಸಿದ್ದಾರೆ. ಪಂಚ ಹಿಮ್ಮತಾರಾಮ್ ಎಂಬವರು ಔಪಚಾರಿಕವಾಗಿ ನಿರ್ಣಯವನ್ನು ಓದಿದ್ದು, ದೇವರಾಂ ಕರ್ನೋಲ್ ಈ ನಿರ್ಣಯವನ್ನು ಪ್ರಸ್ತಾಪಿಸಿದ್ದರು ಎಂದು ಸಮುದಾಯದ ಸದಸ್ಯರು ಹೇಳಿಕೊಂಡಿದ್ದಾರೆ.

ಜಾಲೋರ್ ಜಿಲ್ಲೆಯ ಈ ಪ್ರದೇಶದ ವ್ಯಾಪ್ತಿಗೆ ಬರುವ ಗಾಜಿಪುರ, ಪಾವ್ಲಿ, ಕಲ್ರಾ, ಮನೋಜಿಯಾ ವಾಸ್, ರಾಜಿಕಾವಾಸ್, ದತ್ಲಾವಾಸ್, ರಾಜ್‌ಪುರ, ಕೋಡಿ, ಸಿದ್ರೋಡಿ, ಅಲ್ರಿ, ರೋಪ್ಸಿ, ಖಾನದೇವಲ್, ಸವಿಧರ್, ಭಿನ್ಮಲ್‌ನ ಹಥ್ಮಿ ಕಿ ಧನಿ ಮತ್ತು ಖಾನ್‌ಪುರ ಗ್ರಾಮಗಳಲ್ಲಿ ನಿಷೇಧವನ್ನು ಜಾರಿಗೊಳಿಸಲಾಗುತ್ತಿದೆ.

ಇನ್ನು ಪುರುಷರು ಸೇರಿಕೊಂಡು ಮಹಿಳೆಯರ ಮೇಲೆ ಹೇರಿರುವ ಈ ನಿರ್ಬಂಧದ ಪ್ರಕಾರ ಶಿಕ್ಷಣ ಪಡೆಯುತ್ತಿರುವ ಹುಡುಗಿಯರು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ಮನೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಬಳಸಬಹುದಾಗಿದೆ. ಆದರೆ ಮನೆಯಿಂದ ಹೊರಗೆ ಸ್ಮಾರ್ಟ್‌ಫೋನ್‌ಗಳನ್ನು ನಿಷೇಧಿಸಲಾಗಿದೆ.

ಇದಕ್ಕೆ ಕಾರಣವನ್ನೂ ಸುಜನರಾಮ್ ಚೌಧರಿ ವಿವರಿಸಿದ್ದಾರೆ. “ಮಹಿಳೆಯರು ಅತಿಯಾಗಿ ಸ್ಮಾರ್ಟ್‌ಫೋನ್ ಬಳಸುವುದರಿಂದ ಅವರೊಂದಿಗೆ ವಾಸಿಸುವ ಮಕ್ಕಳೂ ಸ್ಕ್ರೀನ್‌ ನೋಡುತ್ತಾರೆ. ಇದು ಮಕ್ಕಳ ದೃಷ್ಟಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಈ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಹೇರಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ. ಆದರೆ ಮನೆಯಲ್ಲಿರುವ ಪುರುಷರು ಸ್ಮಾರ್ಟ್‌ಫೋನ್ ಬಳಸಿದಾಗ ಮಕ್ಕಳು ನೋಡುವುದಿಲ್ಲವೇ ಎಂಬ ಪ್ರಶ್ನೆಯನ್ನು ಈಗ ನೆಟ್ಟಿಗರು ಎತ್ತಿದ್ದಾರೆ. ಇನ್ನು ಕೆಲವರು ಈ ನಿಯಮ “ಗಂಡು ಮಕ್ಕಳ ಮೇಲೆಯೂ ಅನ್ವಯವಾಗುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಮಾತೃತ್ವ ರಜೆ ಒಂದು ವರ್ಷಕ್ಕೆ ಏರಿಸಿ: ಇದು ಕರುಣೆಯಲ್ಲ, ಮಹಿಳೆಯರ ಘನತೆಯ ಹಕ್ಕು

ಇನ್ನು ಜಾಲೋರ್ ಖಾಪ್ ಪಂಚಾಯತ್ ಈ ಹಿಂದೆಯೂ ಇದೇ ರೀತಿ ವಿವಾದಾತ್ಮಕ ಆದೇಶಗಳನ್ನು ನೀಡಿದೆ. ಕಳೆದ ವರ್ಷ, ಯುವ ದಂಪತಿಗಳು ಪ್ರೇಮ ವಿವಾಹವಾದ ನಂತರ ಎರಡು ಕುಟುಂಬಗಳ ಸಾಮಾಜಿಕ ಬಹಿಷ್ಕಾರಕ್ಕೆ ಸ್ಥಳೀಯ ಹಿರಿಯರು ಆದೇಶಿಸಿದ್ದರು. ಸಮುದಾಯಕ್ಕೆ ಮತ್ತೆ ಪ್ರವೇಶಿಸಬೇಕಾದರೆ 12 ಲಕ್ಷ ರೂಪಾಯಿ ದಂಡ ಪಾವತಿಸಬೇಕೆಂದು ಹೇಳಿದ್ದರು. ನಂತರ ದಂಪತಿಗಳು ಭಿನ್ಮಲ್ ಪೊಲೀಸರನ್ನು ಸಂಪರ್ಕಿಸಿದ್ದು ಪೊಲೀಸರು ಮಧ್ಯಪ್ರವೇಶಿಸಿ ರಾಜಿ ಮಾಡಿಕೊಳ್ಳಲು ಮಾತುಕತೆ ನಡೆಸಿದ್ದರು. ಆದರೂ ಕೆಲವರು ಬಹಿಷ್ಕಾರವನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದರು.

ಅದಕ್ಕೂ ಹಿಂದೆ ಜೂನ್‌ನಲ್ಲಿ ಜಾಲೋರ್‌ನಲ್ಲಿ ಜಾತಿ ಪಂಚಾಯತ್ ಒಂದೇ ಕುಟುಂಬದ ಎರಡು ಬಣಗಳ ನಡುವಿನ ದೇವಾಲಯದ ಭೂಮಿಗೆ ಸಂಬಂಧಿಸಿದ ದೀರ್ಘಕಾಲದ ವಿವಾದಕ್ಕೆ ಸಂಬಂಧಿಸಿದಂತೆ 55 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರವನ್ನು ಘೋಷಿಸಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ನಂತರ ಬಾಗ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಲಿಂಗದ ಆಧಾರದ ಮೇಲೆ ಯಾವುದೇ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯ ಅಥವಾ ತಂತ್ರಜ್ಞಾನದ ಬಳಕೆಯನ್ನು ನಿರ್ಬಂಧಿಸುವುದು, ಸ್ಮಾರ್ಟ್‌ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ. ಸೈಬರ್ ಸುರಕ್ಷತೆ (Cyber Security) ಮತ್ತು ತಂತ್ರಜ್ಞಾನದ ಸರಿಯಾದ ಬಳಕೆಯ ಬಗ್ಗೆ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...