ಪರಿಹಾರ ಬರೀ ಆರ್ಥಿಕ ಸಹಾಯವಲ್ಲ, ಸಾಮಾಜಿಕ ನ್ಯಾಯದ ಸಂಕೇತ: ಉತ್ತರಾಖಂಡ ಹೈಕೋರ್ಟ್‌

Date:

ಪರಿಹಾರವು ಬರೀ ಆರ್ಥಿಕ ಸಹಾಯವಲ್ಲ, ಇದು ಸಾಮಾಜಿಕ ನ್ಯಾಯದ ಸಂಕೇತವಾಗಿದೆ ಎಂದು ಉತ್ತರಾಖಂಡ ಹೈಕೋರ್ಟ್ ಹೇಳಿದೆ. ಹಾಗೆಯೇ ಮೃತರ ಕುಟುಂಬಕ್ಕೆ ಪೂರ್ಣ ಪರಿಹಾರವನ್ನು ನೀಡುವಂತೆ ವಿಮಾ ಕಂಪನಿಗೆ ಸೂಚಿಸಿದೆ.

- Advertisement -

2024ರ ಅಪಘಾತ ಪ್ರಕರಣದಲ್ಲಿ ಮೃತ ವ್ಯಕ್ತಿಗೆ ಅಧಿಕ ಪರಿಹಾರವನ್ನು ಪ್ರಶ್ನಿಸಿ ವಿಮಾ ಕಂಪನಿಯೊಂದು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಲೋಕ್ ಮೆಹ್ರಾ ಅವರ ಏಕ ಪೀಠವು ವಜಾಗೊಳಿಸಿದೆ. ಹಾಗೆಯೇ ಮೃತ ವ್ಯಕ್ತಿಯ ಕುಟುಂಬಕ್ಕೆ 53,93,600 ರೂ. ಪರಿಹಾರ ನೀಡುವುದು ನ್ಯಾಯಯುತ ಮತ್ತು ಸಮರ್ಥನೀಯ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಇದನ್ನು ಓದಿದ್ದೀರಾ? ಉತ್ತರಾಖಂಡ | ಪುರೋಲ ‘ಮಹಾಪಂಚಾಯತ್’; ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

ನೈನಿತಾಲ್‌ನ ಮೋಟಾರು ಅಪಘಾತ ಕ್ಲೈಮ್‌ಗಳ ನ್ಯಾಯಮಂಡಳಿ(MACT) ಮೃತರ ಕುಟುಂಬಕ್ಕೆ ವಾರ್ಷಿಕ ಶೇ.6ರಷ್ಟು ಬಡ್ಡಿಯೊಂದಿಗೆ 53.93 ಲಕ್ಷ ರೂ. ಪರಿಹಾರವನ್ನು ಪಾವತಿಸಬೇಕೆಂದು ವಿಮಾ ಕಂಪನಿಗೆ 2024ರ ನವೆಂಬರ್‌ನಲ್ಲಿ ನಿರ್ದೇಶಿಸಿತ್ತು. ಈ ಮೊತ್ತವು ಅತ್ಯಧಿ ಮತ್ತು ನ್ಯಾಯಸಮ್ಮತವಲ್ಲ ಎಂದು ಹೇಳಿರುವ ವಿಮಾನ ಕಂಪನಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಈ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, “ಮೋಟಾರು ವಾಹನ ಕಾಯ್ದೆಯು ಮೃತರ ಕುಟುಂಬಕ್ಕೆ ತ್ವರಿತ ಮತ್ತು ಸಾಕಷ್ಟು ಪರಿಹಾರವನ್ನು ನೀಡುವ ಗುರಿಯನ್ನು ಹೊಂದಿರುವ ಕಲ್ಯಾಣ ಶಾಸನವಾಗಿದೆ. ಇದು ಕುಟುಂಬಕ್ಕೆ ಸಹಾಯವಾಗುತ್ತದೆ. ನ್ಯಾಯಮಂಡಳಿಯ ತೀರ್ಪು ಕಾನೂನುಬದ್ಧವಾಗಿ ಸದೃಢ ಮತ್ತು ಸಮತೋಲಿತವಾಗಿದೆ” ಎಂದು ಹೇಳಿದೆ.

ಹಾಗೆಯೇ ಅಪಘಾತ ಪರಿಹಾರ ನೀಡುವಾಗ ನ್ಯಾಯಾಲಯಗಳು ಉದಾರ ಮತ್ತು ಮಾನವೀಯ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದೂ ನ್ಯಾಯಮೂರ್ತಿಗಳು ಒತ್ತಿ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...