ಕೇರಳ | ಕೋಮು ವಿಭಜನೆ ಪ್ರಚೋದಿಸುವ ಭಾಷಣ; ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ದಾಖಲು

Date:

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ಪ್ರಚಾರವನ್ನು ಕೋಮು ವಿಭಜನೆ ಉತ್ತೇಜಿಸುವ ಭಾಷಣದ ಮೂಲಕವೇ ಬಿಜೆಪಿ ಶುರು ಮಾಡಿದೆ. ಇದೀಗ ಈ ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ದಾಖಲಾಗಿದೆ.

- Advertisement -

ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಬಿ ಗೋಪಾಲಕೃಷ್ಣನ್ ಕೋಮು ವಿಭಜನೆ ಪ್ರಚೋದಿಸುವ ಭಾಷಣ ಮಾಡಿದ್ದು, ಇದರ ವಿರುದ್ಧ ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ ಕೆಎಸ್‌ಯು ಕೇರಳ ಹೈಕೋರ್ಟ್‌ ಮೆಟ್ಟಿಲೇರಿದೆ. ಹಾಗೆಯೇ ಕೆಎಸ್‌ಯು ದೂರುಗಳನ್ನೂ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಕೇರಳ | ಕೋಮು ವಿಭಜನೆ ಉತ್ತೇಜಿಸುವ ಭಾಷಣದ ಮೂಲಕವೇ ಬಿಜೆಪಿ ಪ್ರಚಾರ ಶುರು

“ಗುರುವಾಯೂರಿನಲ್ಲಿ ಐದು ದಶಕಗಳಿಗೂ ಅಧಿಕ ಕಾಲದಿಂದ ಹಿಂದೂ ಶಾಸಕರನ್ನು ಆಯ್ಕೆ ಮಾಡಲಾಗಿಲ್ಲ” ಎಂದು ಗೋಪಾಲಕೃಷ್ಣನ್ ಭಾಷಣದ ವೇಳೆ ಹೇಳಿದ್ದಾರೆ. ಹಾಗೆಯೇ ಎಡ ಪ್ರಜಾಸತ್ತಾತ್ಮಕ ರಂಗ ಮತ್ತು ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ ಎರಡೂ ಕ್ಷೇತ್ರದಲ್ಲಿ ಹಿಂದೂ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದನ್ನು ಪ್ರಜ್ಞಾಪೂರ್ವಕವಾಗಿ ತಪ್ಪಿಸಿದೆ ಎಂದು ಆರೋಪಿಸಿದ್ದಾರೆ.

ಇನ್ನು ಗುರುವಾಯೂರಪ್ಪನ ಭೂಮಿಯನ್ನು ಮರಳಿ ಪಡೆಯುವ ಜವಾಬ್ದಾರಿ ನಮ್ಮದು ಎಂದು ಘೋಷಿಸಿಕೊಂಡರು. ದೇವರ ನಾಡನ್ನು ಹೆಸರಿಸದ ಶಕ್ತಿಗಳು ವರ್ಷಗಳಿಂದ ನಿಯಂತ್ರಿಸುತ್ತಿದೆ ಎಂದರು. ಪ್ರಚಾರದ ವೇಳೆ ಧರ್ಮವನ್ನು ನಡುವೆ ತಂದಿದ್ದಕ್ಕೆ ಸದ್ಯ ಇತರೆ ಪಕ್ಷಗಳ ವಾಗ್ದಾಳಿಗೆ ಬಿಜೆಪಿ ಗುರಿಯಾಗಿದೆ.

ಅಭ್ಯರ್ಥಿಯನ್ನು ಅನರ್ಹಗೊಳಿಸಬೇಕು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಕೇರಳ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ ಎಂದು ಕೆಎಸ್‌ಯು ತ್ರಿಶೂರ್ ಜಿಲ್ಲಾಧ್ಯಕ್ಷ ಗೋಕುಲ್ ಗುರುವಾಯೂರ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಈ ಹೇಳಿಕೆಗಳು ಮತದಾರರ ಮೇಲೆ ಪ್ರಭಾವ ಬೀರಲು ಕೋಮು ವಿಭಜನೆಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ ಎಂದು ಆರೋಪಿಸಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಮುಖ್ಯಸ್ಥರು, ರಾಜ್ಯ ಚುನಾವಣಾ ಅಧಿಕಾರಿಗಳು ಮತ್ತು ಗುರುವಾಯೂರ್ ಎಸಿಪಿಗೆ ದೂರು ಸಲ್ಲಿಸಲಾಗಿದೆ ಎಂದೂ ತಿಳಿಸಿದ್ದಾರೆ. ಈ ಆರೋಪಗಳ ಬಗ್ಗೆ ಬಿಜೆಪಿ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...