ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಂಗನಾ ರಣಾವತ್‌ ವಿರುದ್ಧ ರಾಷ್ಟ್ರಪತಿಗೆ ದೂರು

Date:

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್‌ ವಿರುದ್ಧ ಕಾನೂನು ಮತ್ತು ಸಂಸದೀಯ ಕ್ರಮ ಕೈಗೊಳ್ಳುವಂತೆ ಕೋರಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ವಕೀಲೆ ದೀಪಿಕಾ ಪುಷ್ಕರ್ ನಾಥ್ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ಸಲ್ಲಿಸಿದ್ದಾರೆ.

- Advertisement -

ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ರಕ್ಷಾ ಬಂಧನ ಮತ್ತು ಉಡುಪಿನ ಕುರಿತ ಚರ್ಚೆಯ ಸಂದರ್ಭದಲ್ಲಿ, ಕಂಗನಾ ರಣಾವತ್‌ ಅವರು ಮುಸ್ಲಿಂ ಸಮುದಾಯದ ಬಗ್ಗೆ ಸಾರ್ವಜನಿಕವಾಗಿ ಆಕ್ಷೇಪಾರ್ಹ ಹಾಗೂ ಅವಮಾನಕರ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಹಾಗೂ ಅಸಹಿಷ್ಣುತೆಯನ್ನು ಪ್ರಚೋದಿಸುವಂತಿದೆ ಎಂದು ವಕೀಲೆ ದೀಪಿಕಾ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ನನ್ನ ಬೆಡ್‌ರೂಮ್ ಕನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ತಿರುಗೇಟು

ಜನಪ್ರತಿನಿಧಿಯಾಗಿ ಸಂಸದ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ಸಾರ್ವಜನಿಕವಾಗಿ ಇಂತಹ ಹೇಳಿಕೆಗಳನ್ನು ನೀಡುವುದು ಸಂವಿಧಾನದ ಮೌಲ್ಯಗಳಿಗೆ ಮತ್ತು ಸೌಹಾರ್ದತೆಗೆ ವಿರುದ್ಧವಾಗಿದೆ. ಆದ್ದರಿಂದ ಅವರ ವಿರುದ್ಧ ಸೂಕ್ತ ಕಾನೂನು ತನಿಖೆ ಮತ್ತು ಸಂಸದೀಯ ನಿಯಮಾವಳಿಗಳ ಅಡಿಯಲ್ಲಿ ಕ್ರಮ ಜರುಗಿಸಬೇಕು ಎಂದು ರಾಷ್ಟ್ರಪತಿ ಭವನಕ್ಕೆ ನೀಡಿದ ಮನವಿಯಲ್ಲಿ ಮನವಿ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...