ಬಾಲ್ ಟ್ಯಾಂಪರಿಂಗ್ ಆರೋಪ; ಆರ್ ಅಶ್ವಿನ್ ವಿರುದ್ಧ ದೂರು

Date:

ಪ್ರಸ್ತುತ ನಡೆಯುತ್ತಿರುವ ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿನ (ಟಿಎನ್‌ಪಿಎಲ್) ಪಂದ್ಯದಲ್ಲಿ ಭಾರತ ತಂಡದ ಮಾಜಿ ಸ್ಟಾರ್ ಬೌಲ್ ಆರ್ ಅಶ್ವಿನ್ ಅವರು ಬಾಲ್ ಟ್ಯಾಂಪರಿಂಗ್ (ವಿರೂಪ) ಮಾಡಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಅಶ್ವಿನ್ ವಿರುದ್ಧ ‘ಮಧುರೈ ಪ್ಯಾಂಥರ್ಸ್’ ತಂಡ ಆರೋಪ ಮಾಡಿದೆ.

- Advertisement -

ಜೂನ್ 14ರಂದು ಅಶ್ಚಿನ್ ಇರುವ ತಂಡ ‘ದಿಂಡಿಗಲ್ ಡ್ರಾಗನ್ಸ್’ ಮತ್ತು ‘ಮಧುರೈ ಪ್ಯಾಂಥರ್ಸ್‌’ ನಡುವೆ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಅಶ್ವಿನ್ ಮತ್ತು ಅವರ ಫ್ರಾಂಚೈಸಿಯವರು ಬಾಲ್‌ಅನ್ನು ವಿರೂಪಗೊಳಿಸಿದ್ದಾರೆ ಎಂದು ಮಧುರೈ ಪ್ಯಾಂಥರ್ಸ್ ಆರೋಪಿಸಿದೆ. ಟಿಎನ್‌ಪಿಎಲ್ ಆಡಳಿತ ಮಂಡಳಿಗೆ ದೂರು ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಾಲ್‌ಅನ್ನು ಭಾರವಾಗಿಸಲು ರಾಸಾಯನಿಕವಾಗಿ ಸಂಸ್ಕರಿಸಿದ ಟವೆಲ್‌ಗಳನ್ನು ಬಳಸಲಾಗಿದೆ. ಹೀಗಾಗಿಯೇ, ಬಾಲ್‌ಅನ್ನು ಹೊಡೆದಾಗ ಲೋಹೀಯ ಶಬ್ದ ಕೇಳಿಬಂದಿದೆ” ಎಂದು ತಂಡವು ಆರೋಪಿಸಿದೆ.

ಆರೋಪಗಳಿಗೆ ಪೂರಕವಾದ ಪುರಾವೆಗಳನ್ನು ಒದಗಿಸುವಂತೆ ಟಿಎನ್‌ಪಿಎಲ್ ಆಡಳಿತವು ತಂಡಕ್ಕೆ ಸೂಚಿಸಿದೆ.

ಈ ಲೇಖನ ಓದಿದ್ದೀರಾ?: ಇರಾನ್-ಇಸ್ರೇಲ್ ಸಂಘರ್ಷ ಶುರುವಾಗಿದ್ದು ಎಲ್ಲಿಂದ? ಇತಿಹಾಸದ ಹಿನ್ನೋಟ!

ದೂರಿನ ಬಗ್ಗೆ ಪ್ರತಿಕ್ರಿಯಿಸಿರುವ ಟಿಎನ್‌ಪಿಎಲ್ ಸಿಇಒ ಪ್ರಸನ್ನ ಕಣ್ಣನ್, “ನಿಯಮದಂತೆ ಪಂದ್ಯ ನಡೆದ 24 ಗಂಟೆಗಳ ಒಳಗೆ ದೂರು ಸಲ್ಲಿಸಬೇಕು. ಆದರೆ, ಅವರು ತಡವಾಗಿ ದೂರು ನೀಡಿದ್ದಾರೆ. ಆದರೂ, ದೂರು ಸ್ವೀಕರಿಸಿದ್ದೇವೆ. ದೂರುದಾರರಿಂದ ಪುರಾವೆ ಕೇಳಲಾಗಿದೆ.ಆರೋಪಗಳಲ್ಲಿ ಯಾವುದೇ ಸತ್ಯ ಕಂಡುಬಂದರೆ, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ TNPLನ 9ನೇ ಆವೃತ್ತಿಯು 2025ರ ಜೂನ್ 5ರಂದು ಆರಂಭವಾಗಿದ್ದು, ಜುಲೈ 6ರವರೆಗೆ ನಡೆಯಲಿದೆ. ಟೂರ್ನಿಯಲ್ಲಿ 8 ತಂಡಗಳಿದ್ದು, ಒಟ್ಟು 32 ಪಂದ್ಯಗಳು ನಡೆಯಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...