ವೆಲ್ಲಪ್ಪಳ್ಳಿ ನಟೇಶನ್‌ಗೆ ಘೋಷಿಸಲಾದ ‘ಪದ್ಮಭೂಷಣ’ ಪ್ರಶಸ್ತಿ ಹಿಂಪಡೆಯುವಂತೆ ದೂರು

Date:

ಕೇರಳದ ವೆಲ್ಲಪ್ಪಳ್ಳಿ ನಟೇಶನ್‌ ಅವರಿಗೆ ಘೋಷಿಸಲಾಗಿರುವ ಪದ್ಮಭೂಷಣ ಪ್ರಶಸ್ತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ ‘ಸೇವ್ ಯೂನಿವರ್ಸಿಟಿ’ ಅಭಿಯಾನವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ಸಲ್ಲಿಸಿದೆ. ದೂರನ್ನು ರಾಷ್ಟ್ರಪತಿಗಳು ಕೇಂದ್ರ ಗೃಹ ಸಚಿವಾಲಯಕ್ಕೆ ವರ್ಗಾಯಿಸಿದ್ದಾರೆ. ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

- Advertisement -

‘ಸೇವ್ ಯೂನಿವರ್ಸಿಟಿ’ ಅಭಿಯಾನ ಸಮಿತಿಯ ಅಧ್ಯಕ್ಷ ಆರ್‌.ಎಸ್‌. ಶಶಿಕುಮಾರ್ ಅವರು ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದು, “ವೆಲ್ಲಪ್ಪಳ್ಳಿ ನಟೇಶನ್ ಅವರು ಈ ಹಿಂದೆ, ‘ಪದ್ಮ’ ಪ್ರಶಸ್ತಿಗಳನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಾರೆ. ಬಹಿರಂಗ ಹೇಳಿಕೆಗಳನ್ನು ನೀಡಿ ಅಪಹಾಸ್ಯ ಮಾಡಿದ್ದಾರೆ. ಅಲ್ಲದೆ, ಅವರು ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಅವರಿಗೆ ಉನ್ನತ ನಾಗರಿಕ ಗೌರವ ನೀಡುವುದು ಪ್ರಶಸ್ತಿಯ ಘನತೆಯನ್ನು ಕುಗ್ಗಿಸುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಈ ಹಿಂದೆ, ಸಂವಾದವೊಂದರಲ್ಲಿ ಮಾತನಾಡಿದ್ದ ವೆಲ್ಲಪ್ಪಳ್ಳಿ ನಟೇಶನ್, ‘ಪದ್ಮ ಪ್ರಶಸ್ತಿಗಳನ್ನು ಹಣದ ಮೂಲಕ ಪಡೆಯಬಹುದು’ ಎಂದಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...