ಅಹಮದಾಬಾದ್ ವಿಮಾನ ದುರಂತ ಬೆನ್ನಲ್ಲೇ ಹೆಚ್ಚುತ್ತಿವೆ ‘ಏರ್‌ ಇಂಡಿಯಾ’ ವಿರುದ್ದದ ದೂರುಗಳು

Date:

ಜೂನ್‌ 12ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ 245 ಮಂದಿ ಪ್ರಯಾಣಿಕರು ಮತ್ತು 8 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ದುರ್ಘಟನೆಗೆ ವಿಮಾನದಲ್ಲಿನ ತಾಂತ್ರಿಕ ಸಮಸ್ಯೆಗಳೇ ಕಾರಣವೆಂದು ಹೇಳಲಾಗುತ್ತಿದೆ. ದುರ್ಘಟನೆಯಿಂದಾಗಿ, ಏರ್ ಇಂಡಿಯಾ ಸಂಸ್ಥೆಯ ವಿಮಾನಗಳ ಕುರಿತ ವಿಶ್ವಾಸಾರ್ಹತೆಯು ಕುಂದುತ್ತಿದೆ. ಇದೇ ಸಮಯದಲ್ಲಿ ಏರ್ ಇಂಡಿಯಾ ವಿಮಾನಗಳ ವಿರುದ್ಧ ಗಂಭೀರ ದೂರುಗಳು ಕೇಳಿಬರುತ್ತಿವೆ. ವಿಮಾನಗಳಲ್ಲಿ ಸಮಸ್ಯೆಗಳೂ ಕೂಡ ಕಂಡುಬರುತ್ತಿರುವ ಬಗ್ಗೆ ವರದಿಗಳಾಗುತ್ತಿವೆ.

- Advertisement -

ಜೂನ್ 13ರಂದು ದುಬೈನಿಂದ ರಾಜಸ್ಥಾನದ ಜೈಪುರಕ್ಕೆ ಹೊರಟಿದ್ದ ‘ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ – IX 196’ ವಿಮಾನದಲ್ಲಿ 5 ಗಂಟೆಗಳ ಕಾಲ ‘ಎಸಿ’ ಕೆಲಸ ಮಾಡುತ್ತಿರಲಿಲ್ಲ. ದುಬೈನ ಹೆಚ್ಚಿನ ಶೆಕೆಯ ನಡುವೆಯೂ ವಿಮಾನದಲ್ಲಿ ಎಸಿ ಇಲ್ಲದೆ ಐದು ಗಂಟೆಗಳ ಕಾಲ ಇರಬೇಕಾಯಿತು ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅಂದು ರಾತ್ರಿ 7.25ಕ್ಕೆ ಹೊರಡಬೇಕಿದ್ದ ವಿಮಾನವು ಮಧ್ಯರಾತ್ರಿ 12:45ಕ್ಕೆ ಹೊರಟಿತು. ವಿಮಾನದಲ್ಲಿನ ತಾಂತ್ರಿಕ ಸಮಸ್ಯೆಯ ಕಾರಣದಿಂದಾಗಿ ವಿಮಾನ ಹೊರಡುವುದು 5 ಗಂಟೆ ತಡವಾಯಿತು. ಆದರೆ, ಈ 5 ಗಂಟೆಗಳ ಕಾಯುವಿಕೆಯ ಸಮಯದಲ್ಲಿ ವಿಮಾನದಲ್ಲಿ ಎಸಿ ಕೂಡ ಕೆಲಸ ಮಾಡುತ್ತಿರಲಿಲ್ಲ” ಎಂದು ಪ್ರಯಾಣಿಕರು ದೂರಿದ್ದಾರೆ.

ಪ್ರಯಾಣಿಕರೊಬ್ಬರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ; ವಿಮಾನದಲ್ಲಿ ಕುಳಿತಿದ್ದ ವೃದ್ದರು ಮತ್ತು ಮಕ್ಕಳು ಸೇರಿದಂತೆ ಜನರು ಎಸಿ ಇಲ್ಲದೆ, ಶೆಕೆಯಿಂದ ಬೆವರು ಸುರಿಸುತ್ತಿರುವುದು ಕಂಡುಬಂದಿದೆ.

ಈ ಲೇಖನ ಓದಿದ್ದೀರಾ?: ಕಳೆದ ಐದು ವರ್ಷಗಳಲ್ಲಿ ಜಗತ್ತು ಕಂಡ ಭೀಕರ ವಿಮಾನ ದುರಂತಗಳಿವು

“ದುಬೈನಲ್ಲಿ ಹೊರಗಿನ ತಾಪಮಾನವು ಸುಮಾರು 40 ಡಿಗ್ರಿ ಸೆಲ್ಸಿಯಸ್ ಇತ್ತು. ಜೊತೆಗೆ, ಕ್ಯಾಬಿನ್ ಒಳಗಿನ ಶಾಖವೂ ಹೆಚ್ಚುತ್ತಿತ್ತು. ಕೆಲವು ವೃದ್ಧರು ತಮ್ಮ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ಆತಂಕಗೊಂಡಿದ್ದರು. ಪ್ರಯಾಣಿಕರಿಗೆ ಕುಡಿಯಲು ಸಾಕಷ್ಟು ನೀರನ್ನೂ ನೀಡಲಿಲ್ಲ” ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಜೂನ್ 13ರಂದು ದುಬೈನಿಂದ ಭಾರತಕ್ಕೆ ಹೊರಟಿದ್ದ ಪ್ರಯಾಣಿಕರು ವಿಮಾನದಲ್ಲಿನ ತಾಂತ್ರಿಕ ಸಮಸ್ಯೆ ಮತ್ತು ಎಸಿ ಕೆಲಸ ಮಾಡದೇ ಇರುವ ಬಗ್ಗೆ ದೂರಿದ್ದರು. ಇಂದು(ಜೂನ್ 15) ಉತ್ತರ ಪ್ರದೇಶದ ಗಾಜಿಯಾಬಾದ್‌ನ ಹಿಂಡನ್ ವಿಮಾನ ನಿಲ್ದಾಣದಿಂದ ಪಶ್ಚಿಮ ಬಂಗಾಳದ ಕೋಲ್ಕತ್ತಾಗೆ ತೆರಳಬೇಕಿದ್ದ ‘ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ IX 1511’ ವಿಮಾನವು ರನ್‌ವೇ ನಲ್ಲಿಯೇ ಒಂದು ಗಂಟೆ ನಿಂತಿದ್ದು, ಬಳಿಕ ಹಾರಾಟ ಆರಂಭಿಸಿದೆ. ಇದಕ್ಕೂ ತಾಂತ್ರಿಕ ದೋಷವೇ ಕಾರಣವೆಂದು ಹೇಳಲಾಗಿದೆ.

ಈ ವರದಿ ಓದಿದ್ದೀರಾ?: ಅಹಮದಾಬಾದ್ ವಿಮಾನ ದುರಂತಕ್ಕೆ ಇದೇ ಮುಖ್ಯ ಕಾರಣ: ಕ್ಯಾಪ್ಟನ್ ಸ್ಟೀವ್ ವಿವರಣೆ

ವಿಮಾನವು ಟೇಕ್ ಆಫ್ ಆಗುವ ಸ್ವಲ್ಪ ಸಮಯಕ್ಕೂ ಮುನ್ನ, ರನ್‌ವೇನಲ್ಲಿ ಚಲಿಸುವಾಗ ಅನಿರೀಕ್ಷಿತ ತಾಂತ್ರಿಕ ದೋಷಗಳು ಕಂಡುಬಂದಿವೆ. ಇದರಿಂದಾಗಿ, ವಿಮಾನವು ಪ್ರಯಾಣ ಆರಂಭಿಸಲು ಒಂದು ಗಂಟೆ ವಿಳಂಬವಾಗಿದೆ. ಏರ್‌ ಇಂಡಿಯಾದ ಅಂಗಸಂಸ್ಥೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಯು ವಿಳಂಬವನ್ನು ಒಪ್ಪಿಕೊಂಡಿದ್ದು, ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದೆ.

“ನಮ್ಮ ಹಿಂಡನ್-ಕೋಲ್ಕತ್ತಾ ವಿಮಾನದಲ್ಲಿ ಅನಿರೀಕ್ಷಿತ ದೋಷಗಳು ಕಂಡುಬಂದಿದ್ದರಿಂದ ವಿಮಾನದ ಹಾರಾಟ ವಿಳಂಬವಾಯಿತು. ಅನಾನುಕೂಲತೆಯ ಕಾರಣಕ್ಕಾಗಿ ಟಿಕೆಟ್‌ ಬುಕಿಂಗ್‌ಅನ್ನು ರದ್ದು ಮಾಡಿದ ಪ್ರಯಾಣಿಕರಿಗೆ ಪೂರ್ಣ ಹಣವನ್ನು ಮರುಪಾವತಿ ಮಾಡಲಾಗಿದೆ. ಅನಾನುಕೂಲಕ್ಕಾಗಿ ವಿಷಾಧಿಸುತ್ತೇವೆ” ಎಂದು ಸಂಸ್ಥೆಯು ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...