‘ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ’: SIR ಅಧಿಕಾರಿಗಳ ಒತ್ತೆಯಾಳು ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

Date:

​ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಕಾರ್ಯದಲ್ಲಿ ತೊಡಗಿದ್ದ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಹಲವು ಗಂಟೆಗಳ ಕಾಲ ಒತ್ತೆಯಾಳಾಗಿರಿಸಿಕೊಂಡ ಘಟನೆಯನ್ನುಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

- Advertisement -

ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದ ಗುಂಪೊಂದು ಮಾಲ್ಡಾದಲ್ಲಿ ಮೂವರು ಮಹಿಳೆಯರು ಸೇರಿದಂತೆ ಅಧಿಕಾರಿಗಳನ್ನು ದಿಗ್ಭಂಧನದಲ್ಲಿರಿಸಿದ ವರದಿಗಳ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ನಿಂದ ಈ ಕಠಿಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಘಟನೆಯನ್ನು ‘ಕರ್ತವ್ಯ ಲೋಪ’ ಎಂದು ಕರೆದಿರುವ ಸುಪ್ರೀಂ ಕೋರ್ಟ್, ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಕಾರಣಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಗೆ ಸೂಚಿಸಿದೆ. ಘಟನೆಯನ್ನು ‘ಖಂಡನೀಯ’ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಇದೊಂದು ನ್ಯಾಯಾಂಗ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿಸುವ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಅಡ್ಡಿಪಡಿಸುವ ‘ವ್ಯವಸ್ಥಿತ ಹಾಗೂ ಪ್ರೇರಿತ’ ಯತ್ನವಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕಾನೂನು ಕೈಗೆತ್ತಿಕೊಂಡು ಅಧಿಕಾರಿಗಳ ಮೇಲೆ ಮಾನಸಿಕ ದಾಳಿ ನಡೆಸಲು ಅಥವಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕೋರ್ಟ್ ಎಚ್ಚರಿಸಿದೆ.

​ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆಗೆ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ನಿರ್ದೇಶಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿ, ಅಧಿಕಾರಿಗಳ ಭದ್ರತೆಗಾಗಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಮೊದಲೇ ಕೋರಬೇಕಿತ್ತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ, ಈ ಘಟನೆಯ ಕುರಿತು ಸಿಬಿಐ (CBI) ಅಥವಾ ಎನ್‌ಐಎ (NIA) ತನಿಖೆ ಕೋರಲು ಚುನಾವಣಾ ಆಯೋಗಕ್ಕೆ ಅವಕಾಶ ನೀಡಿದೆ.

ಇದನ್ನು ಓದಿದ್ದೀರಾ? ಯುದ್ಧದ ಹೆಸರಲ್ಲಿ ವ್ಯಾಪಾರ: ಅಮೆರಿಕದ ‘ರಕ್ತಸಿಕ್ತ’ ಅರ್ಥವ್ಯವಸ್ಥೆ ಮತ್ತು ಜಾಗತಿಕ ಅಶಾಂತಿ

ರಾಜಕೀಯ ಪಕ್ಷಗಳ ಮುಖಂಡರು ಈ ವಿಚಾರವನ್ನು ರಾಜಕೀಯಗೊಳಿಸಬಾರದು ಮತ್ತು ಕರ್ತವ್ಯನಿರತ ಅಧಿಕಾರಿಗಳ ಸುರಕ್ಷತೆಯನ್ನು ಖಚಿತಪಡಿಸುವ ವಿಚಾರದಲ್ಲಿ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಅಲ್ಲದೆ, ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆ ಹೊತ್ತವರು ಇನ್ನಷ್ಟು ಜಾಗರೂಕರಾಗಿರಬೇಕು ಎಂದು ಒತ್ತಿಹೇಳಿದೆ.

​ಮಾಲ್ಡಾದಲ್ಲಿ ಮತದಾರರ ಪಟ್ಟಿಗಳ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ. ಕಲಿಯಾಚಕ್ 2 ಬ್ಲಾಕ್ ಡೆವಲಪ್ಮೆಂಟ್ ಕಚೇರಿ (BDO) ಹೊರಭಾಗದಲ್ಲಿ ಪ್ರತಿಭಟನಾಕಾರರು ಅಧಿಕಾರಿಗಳನ್ನು ಭೇಟಿಯಾಗಲು ಪಟ್ಟು ಹಿಡಿದಾಗ ಈ ಪ್ರಹಸನ ಶುರುವಾಯಿತು. ಭೇಟಿಗೆ ಅವಕಾಶ ನಿರಾಕರಿಸಿದಾಗ, ಸಂಜೆ 4 ಗಂಟೆ ಸುಮಾರಿಗೆ ಪ್ರತಿಭಟನೆ ಆರಂಭಿಸಿದ ಗುಂಪು, ಕಚೇರಿಯ ಆವರಣವನ್ನು ನಿರ್ಬಂಧಿಸಿ ತಡರಾತ್ರಿಯವರೆಗೂ ಗಲಾಟೆ ನಡೆಸಿತು.

ಮತದಾರರ ಪಟ್ಟಿಯಿಂದ ಹೆಸರು ಅಳಿಸಿಹಾಕಿದ್ದೇ ಈ ಪ್ರತಿಭಟನೆಗೆ ಪ್ರಮುಖ ಕಾರಣವಾಗಿದ್ದು, ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಸುತ್ತುವರೆದು, ಹಲವು ಗಂಟೆಗಳ ಕಾಲ ಒತ್ತೆಯಾಳಾಗಿರಿಸಿಕೊಂಡಿದ್ದರು. ಇದರಿಂದ ಮಾಲ್ಡಾದಾದ್ಯಂತ ಹಲವೆಡೆ ರಸ್ತೆ ತಡೆಗಳು ನಡೆದು ಜನಜೀವನ ಅಸ್ತವ್ಯಸ್ತಗೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...