Gen Z ಚಳವಳಿ ಕುರಿತು RSS ಬೈಠಕ್‌ನಲ್ಲಿ ಆತಂಕ: ವ್ಯವಸ್ಥೆಯ ವೈಫಲ್ಯವನ್ನು ಒಪ್ಪಿಕೊಂಡ ಸಂಘ

Date:

ಜಂತರ್‌ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಚಳವಳಿ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಬೈಠಕ್‌ನಲ್ಲಿ ಆತಂಕ ವ್ಯಕ್ತವಾಗಿದೆ. ಯುವಜನರಲ್ಲಿ ಹೆಚ್ಚುತ್ತಿರುವ ಅಸಮಾಧಾನ, ಪರೀಕ್ಷಾ ಅಕ್ರಮಗಳು, ಉದ್ಯೋಗಾವಕಾಶಗಳ ಕೊರತೆ ಹಾಗೂ ಭವಿಷ್ಯದ ಕುರಿತ ಚಿಂತೆಗಳನ್ನು ಗಂಭೀರವಾಗಿ ಪರಿಗಣಿಸಿ ಅವರೊಂದಿಗೆ ಸರ್ಕಾರ ಮತ್ತು ಸಂಘ ಪರಿವಾರದ ಸಂಘಟನೆಗಳು ಸಂವಾದ ನಡೆಸಬೇಕು ಎಂದು RSS ಸಲಹೆ ನೀಡಿದೆ.

- Advertisement -

ವಿಶಾಖಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ RSS ಜಂಟಿ ಪ್ರಧಾನ ಕಾರ್ಯದರ್ಶಿ ಮುಕುಂದ ಸಿ ಆರ್, ಜಂತರ್‌ ಮಂತರ್‌ ಚಳವಳಿಗೆ ಕೇವಲ ಭ್ರಷ್ಟಾಚಾರ ಕಾರಣವಲ್ಲ. ‘ವ್ಯವಸ್ಥೆಯಲ್ಲಿನ ಕೆಲವು ವೈಫಲ್ಯಗಳೇ ಇದಕ್ಕೆ ಪ್ರಮುಖ ಕಾರಣ’ ಎಂದು ಹೇಳಿದ್ದಾರೆ. ʼವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂಬುದು ಆರ್‌ಎಸ್‌ಎಸ್‌ ಹಾಗೂ ಅದರ ಅಂಗಸಂಸ್ಥೆಗಳ ಆಶಯ. ಅದಕ್ಕಾಗಿ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಳ್ಳಬೇಕು’ ಎಂದೂ ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಆದರೆ, ವಿದ್ಯಾರ್ಥಿಗಳ ಆಕ್ರೋಶದ ಸಂಪೂರ್ಣ ಹೊಣೆಯನ್ನು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಮೇಲೆ ಹೊರಿಸಲು ಮುಕುಂದ ಹಿಂದೇಟು ಹಾಕಿದ್ದಾರೆ. ಇದು ಕೇವಲ ಒಂದು ಸರ್ಕಾರ ಅಥವಾ ಒಂದು ಸಮಸ್ಯೆಗೆ ಸಂಬಂಧಿಸಿದ ವಿಚಾರವಲ್ಲ. ದೇಶದ ವಿವಿಧ ರಾಜ್ಯಗಳಲ್ಲಿಯೂ ವ್ಯವಸ್ಥೆಯಲ್ಲಿ ಹಲವು ಕೊರತೆಗಳಿವೆ. ಹೀಗಾಗಿ ಎಲ್ಲರೂ ಒಟ್ಟಾಗಿ ರಚನಾತ್ಮಕ ಮತ್ತು ಸಕಾರಾತ್ಮಕವಾಗಿ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಬಿಜೆಪಿ ಸೇರಿದಂತೆ 40ಕ್ಕೂ ಹೆಚ್ಚು ಸಂಘ ಪರಿವಾರದ ಸಂಘಟನೆಗಳೊಂದಿಗೆ ನಡೆದ ಮೂರು ದಿನಗಳ ಸಮನ್ವಯ ಸಭೆಯ ಬಳಿಕ RSS ಈ ಹೇಳಿಕೆ ನೀಡಿದೆ. ಸಭೆಯಲ್ಲಿ ಸರಸಂಘಚಾಲಕ ಮೋಹನ್ ಭಾಗವತ್, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು.

ಜಂತರ್‌ ಮಂತರ್‌ ವಿದ್ಯಾರ್ಥಿ ಚಳವಳಿ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಿದೆ ಎನ್ನಲಾಗಿದ್ದು, ಯುವಜನರಲ್ಲಿ ಹೆಚ್ಚುತ್ತಿರುವ ಅಸಮಾಧಾನ ಮುಂದಿನ ದಿನಗಳಲ್ಲಿ ರಾಜಕೀಯ ಸವಾಲಾಗಿ ಪರಿಣಮಿಸಬಹುದು ಎಂಬ ಆತಂಕ ಸಂಘ ಪರಿವಾರದ ವಲಯದಲ್ಲಿ ಮೂಡಿದೆ ಎಂದು ಮೂಲಗಳು ತಿಳಿಸಿವೆ. ವಿಶೇಷವಾಗಿ ಉತ್ತರ ಪ್ರದೇಶ ಸೇರಿದಂತೆ ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ Gen Z ಮತದಾರರನ್ನು ತಲುಪುವ ಕುರಿತು ಸಂಘ ಪರಿವಾರದ ಸಂಘಟನೆಗಳು ಚರ್ಚೆ ನಡೆಸಿವೆ ಎನ್ನಲಾಗಿದೆ.

ಯುವಜನರು ವ್ಯವಸ್ಥೆಯ ವೈಫಲ್ಯಗಳ ಬಗ್ಗೆ ಆತಂಕಗೊಂಡಿದ್ದಾರೆ. ಸಮಸ್ಯೆ ಕೇವಲ NEET ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಗೆ ಸೀಮಿತವಾಗಿಲ್ಲ. ತಮ್ಮ ಭವಿಷ್ಯದ ಬಗ್ಗೆಯೂ ಯುವಜನರಲ್ಲಿ ಆತಂಕವಿದೆ. ಈ ಸಮಸ್ಯೆಗಳನ್ನು ಪರಿಹರಿಸಬೇಕಿದೆ ಎಂದು ಮುಕುಂದ ಹೇಳಿದ್ದಾರೆ.

ಯುವಕರ ಭವಿಷ್ಯದ ಕುರಿತ ಈ ಆತಂಕದ ಪ್ರಸ್ತಾಪವು ದೇಶದಲ್ಲಿ ಸಮರ್ಪಕ ಉದ್ಯೋಗಾವಕಾಶಗಳ ಕೊರತೆಯ ಬಗ್ಗೆಯೂ ಪರೋಕ್ಷವಾಗಿ ಒಪ್ಪಿಕೊಂಡಿರುವ ಸೂಚನೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಯುವಜನರ ಸಮಸ್ಯೆಗಳನ್ನು ಕೇವಲ ಪ್ರತಿಭಟನೆ ಅಥವಾ ಸಂಘರ್ಷದ ಮೂಲಕ ಪರಿಹರಿಸಲು ಸಾಧ್ಯವಿಲ್ಲ. ಅವರೊಂದಿಗೆ ಸಂವಾದ ನಡೆಸುವುದು ಅಗತ್ಯ ಎಂದು ಮುಕುಂದ ಹೇಳಿದ್ದಾರೆ.

ಇದಕ್ಕೂ ಮುನ್ನ ಮುಂಬೈನಲ್ಲಿ ನಡೆದ ಯುವ ಸಮಾವೇಶವೊಂದರಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್, ಜಂತರ್‌ ಮಂತರ್‌ ವಿದ್ಯಾರ್ಥಿ ಪ್ರತಿಭಟನೆಯನ್ನು ‘ಸಂವಾದದ ಒಂದು ಮಾರ್ಗ’ ಎಂದು ಬಣ್ಣಿಸಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಯುವಕರನ್ನು ‘ದೇಶದ್ರೋಹಿಗಳು’ ಎಂದು ಕರೆಯಬಾರದು. ಅವರು ನಮ್ಮದೇ ಜನ ಎಂದು ಹೇಳಿದ್ದರು. ಭಾಗವತ್‌ ಅವರ ಈ ಹೇಳಿಕೆ, Gen Z ಯುವಜನರನ್ನು ವಿರೋಧಿಗಳಂತೆ ನೋಡುವ ಬದಲು ಅವರೊಂದಿಗೆ ಸಂಪರ್ಕ ಸಾಧಿಸುವಂತೆ ಬಿಜೆಪಿ ಹಾಗೂ ಸಂಘ ಪರಿವಾರದ ಸಂಘಟನೆಗಳಿಗೆ ನೀಡಿದ ಸಂದೇಶವೆಂದು ವ್ಯಾಖ್ಯಾನಿಸಲಾಗಿತ್ತು.

ಯುವಜನರೊಂದಿಗೆ ಹೆಚ್ಚು ಸಂವಾದ ನಡೆಸುವಂತೆ ಬಜರಂಗದಳ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸೇರಿದಂತೆ ಸಂಘ ಪರಿವಾರದ ಸಂಘಟನೆಗಳಿಗೆ ಸೂಚಿಸಲಾಗಿದೆ. ‘ದೇಶದಲ್ಲಿ 35 ಕೋಟಿಗೂ ಹೆಚ್ಚು ಯುವಜನರಿದ್ದಾರೆ. ಶಾಖೆಗೆ ಬರುವವರು ಅಥವಾ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಿದವರಷ್ಟೇ ಯುವಕರಲ್ಲ. ಉಪದೇಶ ಮಾಡುವುದರಿಂದ ಮಾತ್ರ ಯುವಕರನ್ನು ತಲುಪಲು ಸಾಧ್ಯವಿಲ್ಲ. ಅವರ ಭಾವನೆಗಳು ಮತ್ತು ಸಮಸ್ಯೆಗಳನ್ನು ಸಂವಾದದ ಮೂಲಕ ಅರ್ಥಮಾಡಿಕೊಳ್ಳಬೇಕು’ ಎಂದು ಮುಕುಂದ ಹೇಳಿದ್ದಾರೆ. ಬಿಜೆಪಿ ಯುವಜನರೊಂದಿಗೆ ಸಂವಾದ ಹೆಚ್ಚಿಸಿದ್ದು, Gen z ಮತ್ತು ಜೆನ್‌-ಆಲ್ಫಾ ಪೀಳಿಗೆಯೊಂದಿಗೆ ಶಾಲಾ-ಕಾಲೇಜುಗಳಲ್ಲಿ ಸಂವಾದ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವರಿಗೆ ಸೂಚಿಸಿದ್ದಾರೆ ಎಂದು ಸಭೆಯಲ್ಲಿ ನಿತಿನ್ ನಬಿನ್ ತಿಳಿಸಿದ್ದಾರೆ.

ಇದನ್ನೂ ಓದಿ: ದೊಡ್ಡಣ್ಣನ ನೆಲದಲ್ಲಿ ಕನ್ನಡದ ದೊಡ್ಡಕ್ಕ; ಸೆ.4ರಿಂದ 6 ಫಿಲಡೆಲ್ಫಿಯಾದಲ್ಲಿ ʼಅಕ್ಕʼ ರಜತ ಮಹೋತ್ಸವ

ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ದೇಶದ ‘ಜನಸಂಖ್ಯಾ ಅಸಮತೋಲನ’ದ ವಿಚಾರವೂ ಚರ್ಚೆಯಾಗಿದೆ. ದೇಶದಲ್ಲಿ ಫಲವತ್ತತೆ ಪ್ರಮಾಣ ಕುಸಿಯುತ್ತಿರುವುದರ ಜತೆಗೆ ಕೆಲವು ಪ್ರದೇಶಗಳಲ್ಲಿ ನಿರ್ದಿಷ್ಟ ಸಮುದಾಯಗಳ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಮುಕುಂದ ಹೇಳಿದ್ದಾರೆ. ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಮೋದಿ ಜನಸಂಖ್ಯಾ ಬದಲಾವಣೆಗಳ ಕುರಿತು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಪ್ರಕಾಶ್‌ ಪ್ರಭಾಕರ್‌ ನವ್ಲೇಕರ್‌ ನೇತೃತ್ವದಲ್ಲಿ ಈ ವರ್ಷ ಮೇ ತಿಂಗಳಲ್ಲಿ ಸಮಿತಿ ರಚಿಸಲಾಗಿದೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವ ಆಚರಣೆ ಹಾಗೂ ಜಾಗತಿಕ ಸಂಪರ್ಕ ಅಭಿಯಾನದ ಭಾಗವಾಗಿ ಮೋಹನ್ ಭಾಗವತ್ ಅಮೆರಿಕ, ಕೆನಡಾ ಮತ್ತು ಬ್ರಿಟನ್‌ಗೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮುಕುಂದ ತಿಳಿಸಿದ್ದಾರೆ. ಭಾರತ, ಹಿಂದೂಗಳು ಮತ್ತು ಆರ್‌ಎಸ್‌ಎಸ್‌ ವಿರುದ್ಧ ನಡೆಯುತ್ತಿದೆ ಎನ್ನಲಾದ ಅಪಪ್ರಚಾರ ಹಾಗೂ ತಪ್ಪು ಮಾಹಿತಿಯನ್ನು ಎದುರಿಸುವುದು ಪ್ರವಾಸದ ಉದ್ದೇಶವಾಗಿದೆ. ವಿವಿಧ ದೇಶಗಳ ಸಮಾಜಗಳೊಂದಿಗೆ ಸಂವಾದ ನಡೆಸಿ ಭಾರತದ ‘ವಿಶ್ವ ಏಕತೆಯ’ ಸಂದೇಶವನ್ನು ಸಾರಲಾಗುವುದು ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...