ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

Date:

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಮೇಲೆ ದಾಳಿ ನಡೆಯುತ್ತಿದ್ದಂತೆ ಎಕ್ಸ್ ಪೋಸ್ಟ್ ಮಾಡಿರುವ ಮೋದಿಗೆ ಮಣಿಪುರ ವಿಚಾರದ ಬಗ್ಗೆ ಮಾತನಾಡಲು ಒಂದು ವರ್ಷಗೂ ಅಧಿಕ ಸಮಯ ಬೇಕಾಯಿತೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

- Advertisement -

ಟ್ರಂಪ್ ಹತ್ಯೆ ಪ್ರಯತ್ನ ನಡೆದ ಬಳಿಕ ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಾಗೆಯೇ, “ಮೃತರ ಕುಟುಂಬ, ಗಾಯಗೊಂಡವರು ಮತ್ತು ಅಮೆರಿಕದ ಜನರಿಗಾಗಿ ನಮ್ಮ ಪ್ರಾರ್ಥನೆ” ಎಂದೂ ಕೂಡಾ ಪ್ರಧಾನಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಚುನಾವಣಾ ಪ್ರಚಾರದ ವೇಳೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ

ಪ್ರಧಾನಿ ಅಮೆರಿಕದ ಮಾಜಿ ಅಧ್ಯಕ್ಷರ ಬಗ್ಗೆ ಕಳವಳ ವ್ಯಕ್ತಪಡಿಸಿರುವುದಕ್ಕೆ ಧನ್ಯವಾದ ತಿಳಿಸಿರುವ ನೆಟ್ಟಿಗರು ಮಣಿಪುರ ಮತ್ತು ದೇಶದ ಹಲವಾರು ವಿಚಾರಗಳ ಬಗ್ಗೆ ಧನಿ ಎತ್ತದ ಪ್ರಧಾನಿ ಮೋದಿಗೆ ಪಾಠ ಮಾಡಿದ್ದಾರೆ.

“ಮಣಿಪುರ ಒಂದು ವರ್ಷದಿಂದ ಹೊತ್ತಿ ಉರಿಯುತ್ತಿದೆ. ದೇಶದ ಪ್ರಧಾನಿ ಇಲ್ಲಿಯವರೆಗೂ ಅಲ್ಲಿಗೆ ಭೇಟಿ ನೀಡಿಲ್ಲ. ಆದರೆ ಬಂಡವಾಳಶಾಹಿಯೊಬ್ಬನ ಮಗನ ಮದುವೆಯ ಹೆಸರಿನಲ್ಲಿ ನಡೆಯುತ್ತಿರುವ ಅಶ್ಲೀಲ ಪ್ರದರ್ಶನದಲ್ಲಿ ಭಾಗಿಯಾಗಿದ್ದಾರೆ. ಎಂತಹ ದೌರ್ಭಾಗ್ಯ ಈ ದೇಶಕ್ಕಿದೆ” ಎಂದು ನೆಟ್ಟಿಗರೊಬ್ಬರು ಟೀಕಿಸಿದ್ದಾರೆ.

“ಪ್ರಧಾನಿ ಮಣಿಪುರದಲ್ಲಿಯೂ ಹಿಂಸಾಚಾರ ನಡೆಯುತ್ತಿದೆ. ಆದರೆ ಅದರ ಬಗ್ಗೆ ಮಾತ್ರ ಸುಮಾರು ತಿಂಗಳುಗಳ ಕಾಲ ಮಾತನಾಡಲಿಲ್ಲ” ಎಂದು ಮತ್ತೋರ್ವ ನೆಟ್ಟಿಗರು ಹೇಳಿದ್ದಾರೆ.

“ನೀವು ಮಣಿಪುರದ ಬಗ್ಗೆ ಪೋಸ್ಟ್ ಮಾಡಬೇಕು. ನೀವು ಗೂಂಡಾಗಳಿಂದ ಸುಡಲ್ಪಟ್ಟ ಬಂಗಾಳಿ ಮಹಿಳೆಯರ ಬಗ್ಗೆ ಮಾತನಾಡಬೇಕಿತ್ತು. ಹರಿಯಾಣ ಪಂಜಾಬ್ ರೈತರ ಸಮಸ್ಯೆಯ ಬಗ್ಗೆಯೂ ಪೋಸ್ಟ್ ಮಾಡಬೇಕಿತ್ತು. ನೀವು ಉತ್ತರ ಪ್ರದೇಶದಲ್ಲಿ ದಲಿತರ ಸಮಸ್ಯೆಗಳಿಗೆ ಪ್ರತಿಕ್ರಿಯಿಸಬೇಕು. ನೀವು ಭಾರತದಲ್ಲಿ ಎಲ್ಲಿ ಏನೂ ನಡೆದರೂ ಪ್ರತಿಕ್ರಿಯಿಸಬೇಕಿತ್ತು. ಒಮ್ಮೆ ಆಲೋಚಿಸಿ ಮೋದಿ ಅವರೇ” ಎಂದು ಸಂತೋಷ್ ರೆಡ್ಡಿ ಎಂಬ ನೆಟ್ಟಿಗರೊಬ್ಬರು ತಿಳಿಸಿದ್ದಾರೆ.

“ಮೋದಿ ಅವರೇ ಪ್ರತಿಯೊಬ್ಬರನ್ನು & ಎಲ್ಲರನ್ನು ಸ್ನೇಹಿತರೆಂದು ಕರೆಯುವುದನ್ನು ನಿಲ್ಲಿಸಿ. ಪ್ರತಿಯೊಬ್ಬರನ್ನೂ ಸ್ನೇಹಿತ ಎಂದು ಹೇಳದೆಯೇ ನೀವು ರಾಜತಾಂತ್ರಿಕತೆಯನ್ನು ಮಾಡಬಹುದು” ಎಂದು ಮತ್ತೋರ್ವ ನೆಟ್ಟಿಗರು ಅಭಿಪ್ರಾಯಿಸಿದ್ದಾರೆ.

ಮಣಿಪುರದಲ್ಲಿ 2023ರ ಮೇ ತಿಂಗಳಿನಲ್ಲಿ ಹಿಂಸಾಚಾರ ಆರಂಭವಾಗಿದ್ದು ಪ್ರಧಾನಿ ಮೋದಿ ಒಂದು ವರ್ಷಗಳ ಕಾಲ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಎಕ್ಸ್‌ನಲ್ಲಿಯೂ ಪೋಸ್ಟ್ ಮಾಡಿರಲಿಲ್ಲ. ಇತ್ತೀಚೆಗೆ ನಡೆದ ಲೋಕಸಭೆಯಲ್ಲಿ ಇಂಡಿಯಾ ಒಕ್ಕೂಟ ವಿಪಕ್ಷ ನಾಯಕರುಗಳ ಒತ್ತಡ ಅಧಿಕವಾದ ಬಳಿಕ ಮೋದಿ ಮಣಿಪುರದ ಬಗ್ಗೆ ಮೌನ ಮುರಿದಿದ್ದಾರೆ. ಆದರೆ ಈವರೆಗೂ ಮೋದಿ ಮಣಿಪುರಕ್ಕೆ ಭೇಟಿ ನೀಡಿಲ್ಲ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...