10 ವರ್ಷ ಪ್ರಜಾಸತ್ತಾತ್ಮಕ ಸಂಸ್ಥೆಗಳ ನಾಶಕ್ಕೆ ಸಂಘಟಿತ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Date:

ಭಾರತದ ಪ್ರಜಾಪ್ರಭುತ್ವಕ್ಕೆ 2024 ಉತ್ತಮ ವರ್ಷವಾಗಿದೆ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , 140 ಕೋಟಿ ಭಾರತೀಯರು ನಮ್ಮ ರಾಷ್ಟ್ರದ ನಿರ್ಮಾತೃಗಳು ಶ್ರಮದಿಂದ ನಿರ್ಮಿಸಿದ ನಮ್ಮ ದೀರ್ಘ ಕಾಲದ ಸಂಸ್ಥೆಗಳ ಮೇಲೆ ಇಟ್ಟಿರುವ ನಂಬಿಕೆಗಳ ಅನ್ವಯ ತೀರ್ಪು ನೀಡಿದ್ದಾರೆ ಎಂದು ಹೇಳಿದ್ದಾರೆ

- Advertisement -

ಕಳೆದ 10 ವರ್ಷಗಳಿಂದ ಪ್ರಜಾಪ್ರಭುತ್ವದ ರಚನೆಗಳನ್ನು ನಾಶಮಾಡಲು, ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಉರುಳಿಸಲು ಮತ್ತು ನಮ್ಮ ಸಮಗ್ರತೆಗೆ ಧಕ್ಕೆ ತರಲು ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

‘ಪ್ರಜಾಪ್ರಭುತ್ವದ ಸರ್ಕಾರವೇ ಅತ್ಯುತ್ತಮ ವಿಧದ ಸರ್ಕಾರವಾಗಿದೆ. ನಮ್ಮನ್ನು ಹೇಗೆ ಆಳಿದರು ಎಂಬುದನ್ನು ವ್ಯಕ್ತಪಡಿಸಲು ಮತ್ತು ನಾಯಕರನ್ನು ಜವಾಬ್ದಾರರನ್ನಾಗಿಸಲು ಜನರಿಗೆ ಇದರಲ್ಲಿ ಅವಕಾಶವಿದೆ’ಎಂಬ ದೇಶದ ಮೊದಲ ಪ್ರಧಾಮಂತ್ರಿ ಜವಾಹರಾಲ್ ನೆಹರೂ ಅವರ ಮಾತುಗಳನ್ನು ಮಲ್ಲಿಕಾರ್ಜುನ ಖರ್ಗೆ ಉಲ್ಲೇಖಿಸಿದ್ದಾರೆ.

‘2024ರ ವರ್ಷ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅತ್ಯುತ್ತಮ ವರ್ಷವಾಗಿದೆ. 140 ಕೋಟಿ ಭಾರತೀಯರು ನಮ್ಮ ರಾಷ್ಟ್ರದ ನಿರ್ಮಾತೃಗಳು ಶ್ರಮದಿಂದ ನಿರ್ಮಿಸಿದ ನಮ್ಮ ದೀರ್ಘ ಕಾಲದ ಸಂಸ್ಥೆಗಳ ಮೇಲೆ ಇಟ್ಟಿರುವ ನಂಬಿಕೆಗಳ ಅನ್ವಯ ತೀರ್ಪು ನೀಡಿದ್ದಾರೆ’ಎಂದು ಲೋಕಸಭಾ ಚುನಾವಣಾ ಫಲಿತಾಂಶವನ್ನು ಉಲ್ಲೇಖಿಸಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

‘ಈಗ ಸಂಸದೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಾವು ಮತ್ತಷ್ಟು ಜಾಗರೂಕರಾಗಿರಬೇಕು ಹಾಗೂ ಭಾರತದ ಪ್ರಜೆಗಳೆಲ್ಲರೂ ನಂಬಿರುವ ನೀತಿಯನ್ನು ರಕ್ಷಿಸಬೇಕು’ಎಂದು ವಿಶ್ವ ಪ್ರಜಾಪ್ರಭುತ್ವದ ದಿನದಂದು ಖರ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಪ್ರಜಾಪ್ರಭುತ್ವದ ದಿನವಾದ ಇಂದು ಮತ್ತೊಮ್ಮೆ ನಮ್ಮನ್ನು ನಾವು ನ್ಯಾಯ, ಸ್ವಾತಂತ್ರ್ಯ , ಸಮಾನತೆ ಮತ್ತು ಭ್ರಾತೃತ್ವದ ತತ್ವಗಳನ್ನು ಒಳಗೊಂಡಿರುವ ಭಾರತದ ಮೂಲತತ್ವಕ್ಕೆ ಸಮರ್ಪಿಸಿಕೊಳ್ಳೋಣ’ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 15 ಅನ್ನು ವಿಶ್ವ ಪ್ರಜಾಪ್ರಭುತ್ವ ದಿನವಾಗಿ ಆಚರಿಸಲು 2007ರ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಿರ್ಣಯಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...