ಪ್ರೊ. ಸಾಯಿಬಾಬಾ ನಿಧನಕ್ಕೆ ಸಂತಾಪ; ಮಂಜೀರಾಗೆ ಪತ್ರ ಬರೆದ ಜರ್ಮನಿ ರಾಯಭಾರಿ ಕಚೇರಿ!

Date:

ಮಾವೋವಾದಿ ಹೋರಾಟಗಾರರೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಅರೋಪದ ಮೇಲೆ ಜೈಲು ಸೇರಿ, ನಿರಂತರ ಸೆರೆವಾಸ ಅನುಭವಿಸಿ, ನಿರ್ದೋಷಿಯೆಂದು ಸಾಬೀತಾದ ಬಳಿಕ ಜೈಲಿನಿಂದ ಹೊರಬಂದಿದ್ದ ಪ್ರೊ. ಸಾಯಿಬಾಬಾ ಅವರು ಇತ್ತೀಚೆಗೆ ಸಾವನ್ನಪ್ಪಿದ್ದರು. ಅವರ ಸಾವಿಗೆ ದೆಹಲಿಯಲ್ಲಿರುವ ಜರ್ಮನ್ ರಾಯಭಾರಿ ಕಚೇರಿ ಸಂತಾಪ ಸೂಚಿಸಿದೆ.

- Advertisement -

ಸಾಯಿಬಾಬಾ ಅವರ ಪುತ್ರಿ ಮಂಜೀರಾ ಅವರಿಗೆ ಜರ್ಮನ್ ರಾಯಭಾರಿ ಡಾ. ಫಿಲಿಪ್ ಅಕರ್‌ಮನ್ ಅವರು ಪತ್ರ ಬರೆದಿದ್ದಾರೆ. “ನಿಮ್ಮ ತಂದೆಯ ಅಕಾಲಿಕ ಮರಣದ ಸುದ್ದಿ ಕೇಳಿ ಬಹಳ ಆಘಾತ ಮತ್ತು ದುಃಖವಾಗಿದೆ. ನಿಮ್ಮ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಿಮಗೆ ನೆನಪಿರಬಹುದು: ಕಳೆದ ಏಪ್ರಿಲ್‌ನಲ್ಲಿ ನಾನು ನಿಮ್ಮನ್ನು ಮತ್ತು ನಿಮ್ಮ ತಂದೆಯನ್ನು ನನ್ನ ಫ್ರೆಂಚ್ ಸಹೋದ್ಯೋಗಿಯೊಂದಿಗೆ ಭೇಟಿಯಾಗಿದ್ದೆ. ನಮ್ಮ ಭೇಟಿಯು ಕಡಿಮೆ ಸಮಯದ್ದೇ ಆಗಿದ್ದರೂ, ಆ ಸಂದರ್ಭವು ನನ್ನ ಮೇಲೆ ಆಳವಾದ ಪ್ರಭಾವ ಬೀರಿದೆ. ನಿಮ್ಮ ತಂದೆಯ ಜೀವನಗಾಥೆ, ಅವರ ಸುದೀರ್ಘ ಸೆರೆವಾಸ ಮತ್ತು ಅವರಲ್ಲಿ ಅಚಲವಾದ ಬದ್ಧತೆಯು ಭಾರತದಲ್ಲಿನ ನಾಗರಿಕ ಹಕ್ಕುಗಳ ಬಗ್ಗೆ ನನಲ್ಲಿ ಹೆಚ್ಚು ಗೌರವವನ್ನು ಹುಟ್ಟುಹಾಕಿದೆ” ಎಂದು ಹೇಳಿದ್ದಾರೆ.

WhatsApp Image 2024 10 18 at 2.35.53 PM

“ನಿಮ್ಮ ದುಃಖದ ಅರಿವು ನಮಗಿದೆ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಹಾಗೂ ನಿಮ್ಮ ತಂದೆಯ ಅನೇಕ ಸ್ನೇಹಿತರಿಗೆ ದುಃಖವನ್ನು ಅರಗಿಸಿಕೊಳ್ಳುವ ಶಕ್ತಿ ದೊರೆಯಲೆಂದು ನಾನು ಪ್ರಾರ್ಥಿಸುತ್ತೇನೆ” ಎಂದು ಜರ್ಮನ್ ರಾಯಭಾರಿ ಹೇಳಿದ್ದಾರೆ.

ಸಾಯಿಬಾಬಾ ಅವರು ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಅವರಿಗೆ ಮಾವೋವಾದಿ ಹೋರಾಟಗಾರರೊಂದಿಗೆ ಸಂಪರ್ಕವಿದೆ ಎಂಬ ಆರೋಪದ ಮೇಲೆ 2014ರಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರ ಬಂಧನ ಬಳಿಕ, ಅವರನ್ನು ಅಧ್ಯಾಪಕ ಹುದ್ದೆಯಿಂದಲೂ ಅಮಾನತು ಮಾಡಲಾಗಿತ್ತು.

ಸಾಯಿಬಾಬಾ ಅವರನ್ನು ಬಂಧಿಸಿದ್ದ ಪೊಲೀಸರು, ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಅಧೀನ ನ್ಯಾಯಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ, ಅವರು ಅಪರಾಧಿ ಎಂದು ಸಾಬೀತು ಮಾಡುವಲ್ಲಿ, ಸಾಕ್ಷಾಧಾರಗಳನ್ನು ಸಂಗ್ರಹಿಸುವಲ್ಲಿ ಪೊಲೀಸರು ವಿಫಲರಾಗಿದ್ದರು. ಇತ್ತೀಚೆಗೆ, ಅವರನ್ನು ನಿರ್ದೋಷಿ ಎಂದು ಘೋಷಿಸಿ, ಪ್ರಕರಣದಿಂದ ಖುಲಾಸೆಗಳಿಸಿ ಬಾಂಬೆ ಹೈಕೋರ್ಟ್‌ ತೀರ್ಪು ನೀಡಿತು.

ಸಾಬೀತಾಗದ ಆರೋಪದಲ್ಲಿ ನಿರಂತರವಾಗಿ 10 ವರ್ಷಗಳ ಕಾಲ ಜೈಲಿನಲ್ಲಿದ್ದ ಸಾಯಿಬಾಬಾ ಅವರು ಕಳೆದ ಮಾರ್ಚ್‌ 7ರಂದು ನಾಗ್ಲುರ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಪೋಲಿಯೋ ಪೀಡಿತರಾಗಿದ್ದ ಅವರಿಗೆ ಜೈಲಿನಲ್ಲಿ ಸರಿಯಾದ ಸೌಲಭ್ಯಗಳು ದೊರೆಯದ ಕಾರಣ, ಅವರು ಪಿತ್ತಕೋಶ ಸಮಸ್ಯೆಗೆ ತುತ್ತಾಗಿದ್ದರು. ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಚೇತರಿಕೆ ಕಂಡಿರಲಿಲ್ಲ. ಪರಿಣಾಮ, ಅಕ್ಟೋಬರ್ 13ರಂದು ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....