MGNREGA ಕಾಯ್ದೆ ಉಳಿಸಲು ದೇಶವ್ಯಾಪಿ ಹೋರಾಟಕ್ಕೆ ಕಾಂಗ್ರೆಸ್ ಕ್ರಿಯಾ ಸಮಿತಿ ಸಭೆಯಲ್ಲಿ ನಿರ್ಣಯ

Date:

ಒಂಭತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR), MGNREGA ಬದಲಿಗೆ ಬಂದಿರುವ ನೂತನ ಜಿ ರಾಮ್ ಜಿ ಕಾಯ್ದೆ ಹಾಗೂ ಬಾಂಗ್ಲಾದೇಶದಲ್ಲಿ ಪ್ರಸಕ್ತ ನೆಲೆಸಿರುವ ಅಶಾಂತಿ ಸೇರಿದಂತೆ ಹಲವಾರು ಮಹತ್ವದ ವಿಷಯಗಳ ಬಗ್ಗೆ ಕಾಂಗ್ರೆಸ್ ಕ್ರಿಯಾ ಸಮಿತಿ ಸಭೆಯಲ್ಲಿ ಶನಿವಾರ ಚರ್ಚಿಸಲಾಯಿತು.

- Advertisement -

ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಶಶಿ ತರೂರ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ನಿರ್ಧಾರ ತೆಗೆದುಕೊಳ್ಳುವ ಪಕ್ಷದ ಅತ್ಯುನ್ನತ ಗುಂಪಿನ ಸಭೆಯಲ್ಲಿ ಭಾಗವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಭೆಯ ಬಳಿಕ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಅಧ್ಯಕ್ಷ ಖರ್ಗೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಕೈಬಿಟ್ಟಿರುವುದಕ್ಕೆ ಜನರು ಕೋಪಗೊಂಡಿದ್ದಾರೆ ಎಂದು ಹೇಳಿದರು ಹಾಗೂ ಇದರ ಪರಿಣಾಮಗಳನ್ನು ಸರಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಅಜೀವಿಕಾ ಮಿಶನ್ (ಗ್ರಾಮೀಣ) ಕಾಯ್ದೆಯು ಯಾರೊಂದಿಗೂ ಸಮಾಲೋಚಿಸದ ಏಕಪಕ್ಷೀಯ ನಿರ್ಧಾರವಾಗಿದೆ ಎಂದು ಖರ್ಗೆ ಆರೋಪಿಸಿದರು. ಈ ಕಾಯಿದೆಯು ರಾಜ್ಯಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆಯನ್ನು ಹೊರಿಸುತ್ತದೆ ಎಂದು ಹೇಳಿದರು. ಮನ್‌ರೇಗ ಯೋಜನೆಯನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ

‘‘2026 ಜನವರಿ 5ರಿಂದ ‘ಮನ್‌ರೇಗ ಬಚಾವೊ ಆಂದೋಲನ’ವನ್ನು ಆರಂಭಿಸಲು ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ’’ ಎಂದರು.

‘‘ಮನ್‌ರೇಗದಿಂದ ಮಹಾತ್ಮಾ ಗಾಂಧಿಯ ಹೆಸರನ್ನು ತೆಗೆದು ಹಾಕುವ ಪ್ರತಿ ಪಿತೂರಿಯನ್ನು ನಾವು ಪ್ರಜಾಸತ್ತಾತ್ಮಕವಾಗಿ ವಿರೋಧಿಸುವ ಪ್ರತಿಜ್ಞೆಯನ್ನು ನಾವು ತೆಗೆದುಕೊಂಡಿದ್ದೇವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟು ಮನ್‌ರೇಗವನ್ನು ರಕ್ಷಿಸುವ, ಕಾರ್ಮಿಕರ ಹಕ್ಕುಗಳನ್ನು ಉಳಿಸುವ ಮತ್ತು ಪ್ರತಿ ಗ್ರಾಮದಲ್ಲಿ ನಮ್ಮ ಧ್ವನಿಗಳನ್ನು ಎತ್ತುವ ಪ್ರತಿಜ್ಞೆಯನ್ನು ನಾವು ತೆಗೆದುಕೊಂಡಿದ್ದೇವೆ. ‘ಜೈ ಸಂವಿಧಾನ’ ಮತ್ತು ‘ಜೈ ಹಿಂದ್’ ಘೋಷಣೆಗಳೊಂದಿಗೆ ನಾವು ಈ ನಿರ್ಧಾರವನ್ನು ಸಾಮೂಹಿಕವಾಗಿ ತೆಗೆದುಕೊಂಡಿದ್ದೇವೆ’’ ಎಂದರು.

ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...