ಸರ್ಕಾರಿ ನೌಕರಿಗಳಲ್ಲಿ ಶೇ.50 ಮಹಿಳಾ ಮೀಸಲಾತಿಗೆ ರಾಹುಲ್ ಗಾಂಧಿ ಬೆಂಬಲ

Date:

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಶಕ್ತಿಯುತ ಮಹಿಳೆಯರಿಂದ ಮಾತ್ರ ದೇಶದ ಭವಿಷ್ಯ ಬದಲಿಸಲು ಸಾಧ್ಯ ಎಂದು ತಿಳಿಸಿದ್ದಾರೆ.

ಇಂದು ದೇಶದಲ್ಲಿ ಮೂವರಲ್ಲಿ ಒಬ್ಬ ಮಹಿಳೆ ಕೆಲಸ ಮಾಡುತ್ತಿದ್ದರೆ, 10 ಮಂದಿಯಲ್ಲಿ ಒಬ್ಬ ಮಹಿಳೆ ಮಾತ್ರ ಸರ್ಕಾರಿ ನೌಕರಿಯಲ್ಲಿದ್ದಾರೆ. ಭಾರತದಲ್ಲಿ ಮಹಿಳೆಯರ ಜನಸಂಖ್ಯೆ ಶೇ.50 ರಷ್ಟು ಇಲ್ಲವೆ? ಇಷ್ಟು ಮಹಿಳೆಯರಲ್ಲಿ ಪ್ರೌಢಶಿಕ್ಷಣ ಹಾಗೂ ಉನ್ನತ ಶಿಕ್ಷಣ ಪಡೆದವರಿದ್ದರೂ ಅವರಿಗೆ ಸಿಗಬೇಕಾದ ಸಮಪಾಲು ಏಕೆ ಸಿಗುತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಅರ್ಧ ಜನಸಂಖ್ಯೆಯಲ್ಲಿ ಪೂರ್ಣ ಹಕ್ಕು ನೀಡುವುದನ್ನು ಕಾಂಗ್ರೆಸ್ ನಂಬುತ್ತದೆ. ದೇಶವನ್ನು ಮುನ್ನಡೆಸಬೇಕಾದರೆ ಮಹಿಳೆಯರಿಗೆ ಸಮಾನ ಪಾಲು ನೀಡಿದರೆ ಮಾತ್ರ ಮಹಿಳೆಯರ ಸಂಪೂರ್ಣ ಸಾಮರ್ಥ್ಯವನ್ನು ಸದ್ಭಳಕೆ ಮಾಡಿಕೊಳ್ಳಬಹುದು ಎಂದು ರಾಹುಲ್ ತಿಳಿಸಿದರು.

ಆದಾಗ್ಯೂ, ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ತತ್‌ಕ್ಷಣದ ಮಹಿಳಾ ಮೀಸಲಾತಿಯನ್ನು ನಾವು ಬೆಂಬಲಿಸುತ್ತೇವೆ ಎಂದು ರಾಹುಲ್ ಗಾಂಧಿ ಭರವಸೆ ನೀಡಿದರು.

ಸುಭದ್ರ ಆದಾಯ, ಸುಭದ್ರ ಭವಿಷ್ಯ, ಸ್ಥಿರತೆ ಹಾಗೂ ಸ್ವಾಭಿಮಾನ ಹೊಂದಿರುವ ಮಹಿಳೆಯರು ನಿಜವಾಗಿಯೂ ಸಮಾಜದ ಶಕ್ತಿಯುತ ಮಹಿಳೆಯರಾಗುತ್ತಾರೆ. ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಸ್ಥಾನ ಕಲ್ಪಿಸಿದರೆ ಪ್ರತಿಯೊಬ್ಬ ಮಹಿಳೆಯರು ದೇಶದಲ್ಲಿ ಪ್ರಬಲವಾಗಲಿದ್ದು, ದೇಶದ ಭವಿಷ್ಯವನ್ನು ಬದಲಾಯಿಸುತ್ತಾರೆ ಎಂದು ರಾಹುಲ್ ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ...

ದಾರಿತಪ್ಪಿಸುವ ಜಾಹೀರಾತು ಪ್ರಕರಣ: ಮತ್ತೆ ಪತ್ರಿಕೆಗಳಲ್ಲಿ ಕ್ಷಮೆಯಾಚನೆ ಪ್ರಕಟಿಸಿದ ರಾಮ್‌ದೇವ್

ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ದಾರಿತಪ್ಪಿಸುವ ಜಾಹೀರಾತು ಪ್ರಕರಣ ದಾಖಲಾಗಿದ್ದು, ಸುಪ್ರೀಂ...

ʼಈ ದಿನʼ ಸಮೀಕ್ಷೆ | ರೈತರಿಗೆ ಮೋದಿ ಮಹಾ ಮೋಸ; ‘ಬೆಂಬಲ ಬೆಲೆ’ ಕೊಡೋರಿಗೆ ನಮ್ಮ ಬೆಂಬಲ ಎಂದ ಮತದಾರರು!

ಭಾರತವು ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ...