SIR ಎಂದರೆ ‘ವಿಶೇಷ ತೀವ್ರ ಪರಿಷ್ಕರಣೆ’ ಅಲ್ಲ, ‘ಶಾ ಇನ್‌ಸ್ಟಿಗೇಟೆಡ್ ರಿಮೂವಲ್’; ಕಾಂಗ್ರೆಸ್‌ ಆರೋಪ

Date:

ಮತದಾರರ ಪಟ್ಟಿ ಮೇಲೆ ನಡೆಯುತ್ತಿರುವ ಎಸ್‌ಐಆರ್‌ ಎಂದರೆ, ‘Special Intensive Revision’ (ವಿಶೇಷ ತೀವ್ರ ಪರಿಷ್ಕರಣೆ) ಅಲ್ಲ, ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ನಡೆಯುತ್ತಿರುವ ‘ಶಾ ಇನ್‌ಸ್ಟಿಗೇಟೆಡ್ ರಿಮೂವಲ್’ (ಶಾ ಪ್ರಚೋದಿತ ತೆಗೆದುಹಾಕುವಿಕೆ) ಎಂದು ಕಾಂಗ್ರೆಸ್‌ ಆರೋಪಿಸಿದೆ. ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

- Advertisement -

ಎಸ್‌ಐಆರ್‌ ಕುರಿತು ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಎಸ್‌ಐಆರ್‌ಅನ್ನು ಬೃಹತ್ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು ನಡೆಸಲಾಘುತ್ತಿದೆ. ಇಡೀ ಪ್ರಕ್ರಿಯೆಯು ದೇಶದ ಸಂವಿಧಾನದ ಮೇಲೆಯೇ ನಡೆದ ದಾಳಿಯಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಎಸ್‌ಐಆರ್ ಪ್ರಕ್ರಿಯೆಯ ಮೂರನೇ ಹಂತದಲ್ಲಿ ಪರಿಷ್ಕರಣೆಗೆ ಒಳಗಾದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ಮೂವರು ಮತದಾರರಲ್ಲಿ ಒಬ್ಬರ ಹೆಸರನ್ನು ‘ಎಎಸ್‌ಡಿಡಿಒ’ ಅಡಿಯಲ್ಲಿ ಈಗಾಗಲೇ ಪಟ್ಟಿಯಿಂದ ಹೋರಹಾಕಲಾಗಿದೆ. 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 36.06 ಕೋಟಿ ಮತದಾರರ ಪೈಕಿ ಸುಮಾರು 6.18 ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಅಂದರೆ, 17%ಗೂ ಹೆಚ್ಚು ಹೆಸರುಗಳನ್ನು ಅಳಿಸಲಾಗಿದೆ. ಮಾತ್ರವಲ್ಲದೆ, ಹೆಚ್ಚುವರಿಯಾಗಿ 5.43 ಕೋಟಿ ಮತದಾರರಿಗೆ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಉಳಿಸಿಕೊಳ್ಳಲು ದಾಖಲೆಗಳನ್ನು ಸಲ್ಲಿಸಿ, ತಮ್ಮ ಗುರುತನ್ನು ಸಾಬೀತು ಮಾಡುವಂತೆ ನೋಟಿಸ್ ನೀಡಲಾಗಿದೆ. ಇದು ಮತ್ತಷ್ಟು ಮತದಾರರು ಮತಪಟ್ಟಿಯಿಂದ ಹೊರಹೋಗುವ ಭೀತಿಯನ್ನು ಹುಟ್ಟುಹಾಕಿದೆ” ಎಂದು ಅವರು ತಿಳಿಸಿದ್ದಾರೆ.

“ಎಸ್‌ಐಆರ್‌ ಪ್ರಕ್ರಿಯೆಯ ಮೊದಲ ಎರಡು ಹಂತಗಳಲ್ಲಿ ಪರಿಷ್ಕರಣೆಗೆ ಒಳಗಾದ ರಾಜ್ಯಗಳಲ್ಲಿಯೂ ಸುಮಾರು 7.8 ಕೋಟಿ ಮತದಾರರ ಹೆಸರುಗಳನ್ನು ಅಳಿಸಲಾಗಿತ್ತು. ಈಗ, ಮೂರನೇ ಹಂತದಲ್ಲಿ 12 ಕೋಟಿ ಮತದಾರರು ತಮ್ಮ ಹಕ್ಕು ಕಳೆದುಕೊಳ್ಳುವ ಭೀತಿಯಲ್ಲಿದೆ. ಈ ಪೈಕಿ, ಕರ್ನಾಟಕದಲ್ಲಿ ಸುಮಾರು 27.6% ರಷ್ಟು ಮತದಾರರ ಹೆಸರು ಅಳಿಸಿಹೋಗುವ ಭೀತಿ ಇದೆ. ಅಂತೆಯೇ ದೆಹಲಿಯಲ್ಲಿ 53.73%, ತೆಲಂಗಾಣದಲ್ಲಿ 48.90%, ಜಾರ್ಖಂಡ್‌ನಲ್ಲಿ 39.57% ಹಾಗೂ ಮಹಾರಾಷ್ಟ್ರದಲ್ಲಿ 33.88%ರಷ್ಟು ಮತದಾರರು ಮತದ ಹಕ್ಕು ಕಳೆದುಕೊಳ್ಳುವ ಆತಂಕಕ್ಕೆ ಸಿಲುಕಿದ್ದಾರೆ. ಈ ಹೆಸರು ಅಳಿಸುವ ಪ್ರಕ್ರಿಯೆಯಿಂದಾಗಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗದವರು ಹಾಗೂ ಪುರುಷರಿಗಿಂತ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ” ಎಂದು ರಮೇಶ್‌ ಹೇಳಿದ್ದಾರೆ.

“ನಾಗರಿಕರು ತಾವೇ ಭಾರತೀಯ ಮತದಾರರು ಎಂದು ಸಾಬೀತುಪಡಿಸಲು ಸಾಧ್ಯವಾಗದಂತಹ ಕಠಿಣ ದಾಖಲೆಗಳನ್ನು ಕೇಳುವ ಮೂಲಕ ಈ ಪರಿಷ್ಕರಣಾ ವ್ಯವಸ್ಥೆಯು ಜನರನ್ನು ಚುನಾವಣಾ ಪ್ರಕ್ರಿಯೆಯಿಂದ ಹೊರಗಿಡುವ ‘ಯಂತ್ರ’ದಂತೆ ಕೆಲಸ ಮಾಡುತ್ತಿದೆ. ಚುನಾವಣಾ ಆಯೋಗವು ಈ ರೀತಿ ವಜಾಗೊಳ್ಳುವ ಹಂತದಲ್ಲಿರುವ ಮತದಾರರ ಪಟ್ಟಿಯನ್ನು ತಕ್ಷಣವೇ ಸಾರ್ವಜನಿಕವಾಗಿ ಪ್ರಕಟಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಲ್ಲಿ ಪುತಿನ್ ಪಕ್ಷ ಮತ್ತೊಂದು ಗೆಲುವಿನ ಹೊಸ್ತಿಲಲ್ಲಿ…

ರಷ್ಯಾದಲ್ಲಿ ನಡೆಯುತ್ತಿರುವ 2026ರ 'ಸ್ಟೇಟ್ ಡೂಮಾ' (ಸಂಸತ್) ಚುನಾವಣೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...