ರಾಮ ಮಂದಿರ ಆಹ್ವಾನ ಸ್ವೀಕರಿಸಲು ಕಾಂಗ್ರೆಸ್ ಅರ್ಹತೆ ಹೊಂದಿಲ್ಲ: ಹಿಮಂತ ಬಿಸ್ವಾ ಶರ್ಮಾ

Date:

ಕಾಂಗ್ರೆಸ್ ಪಕ್ಷ ಜನವರಿ 22ರಂದು ನಡೆಯುವ ರಾಮ ಮಂದಿರದ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿರುವುದಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟೀಕಿಸಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತಮ್ಮ ಪಾಪಗಳನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಇರುವ ಸುವರ್ಣಾವಕಾಶವನ್ನು ಕಳೆದುಕೊಂಡಿದೆ. ಅಲ್ಲದೆ ರಾಮ ಮಂದಿರ ಆಹ್ವಾನ ಸ್ವೀಕರಿಸಲು ಕಾಂಗ್ರೆಸ್ ಅರ್ಹತೆ ಹೊಂದಿಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಭಾಗಿಯಾಗಿ ತಮ್ಮ ಪಾಪಗಳನ್ನು ತೊಳೆದುಕೊಳ್ಳಲು ವಿಹೆಚ್‌ಪಿ ಕಾಂಗ್ರೆಸ್‌ ಪಕ್ಷಕ್ಕೆ ಸುವರ್ಣಾವಕಾಶವನ್ನು ನೀಡಿತ್ತು. ಆದಾಗ್ಯೂ ನನ್ನ ವಿನಮ್ರ ದೃಷ್ಟಿಯಲ್ಲಿ ಆರಂಭದಿಂದಲೂ ರಾಮ ಮಂದಿರದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಅವರು ಆಹ್ವಾನಕ್ಕೆ ಅರ್ಹರಲ್ಲ” ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

“ಒಂದು ವೇಳೆ ಆಹ್ವಾನ ಸ್ವೀಕರಿಸಿದ್ದರೆ ಅವರು ಹಿಂದೂ ಸಮಾಜಕ್ಕೆ ಸಾಂಕೇತಿಕವಾಗಿ ಕ್ಷಮೆ ಕೇಳಬಹುದಿತ್ತು. ಆದಾಗ್ಯೂ ಪಂಡಿತ್ ನೆಹರು ಅವರಂಥವರು ಸೋಮನಾಥ ದೇಗುಲಕ್ಕೆ ಮಾಡಿರುವ ರೀತಿಯಲ್ಲಿಯೆ ಕಾಂಗ್ರೆಸ್ ನಾಯಕರು ರಾಮ ಮಂದಿರಕ್ಕೂ ಮಾಡಿದ್ದಾರೆ. ಇತಿಹಾಸ ಯಾರು ಹಿಂದೂ ವಿರೋಧಿ ಎಂದು ನಿರ್ಣಯಿಸುತ್ತದೆ” ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಕಾಂಗ್ರೆಸ್ ಬುಧವಾರದಂದು ಆರ್‌ಎಸ್‌ಎಸ್‌/ಬಿಜೆಪಿ ಕಾರ್ಯಕ್ರಮ ಎಂದು ರಾಮಮಂದಿರ ಆಹ್ವಾನವನ್ನು ತಿರಸ್ಕರಿಸಿತ್ತು. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈ ಕಾರ್ಯಕ್ರಮವನ್ನು ಚುನಾವಣೆಯಲ್ಲಿ ಲಾಭಗೊಳಿಸುವ ರಾಜಕೀಯ ಯೋಜನೆಯಾಗಿದೆ ಎಂದು ಟೀಕಿಸಿತ್ತು.

“ಧರ್ಮವು ವೈಯಕ್ತಿಕ ವಿಷಯ. ಆದರೆ ಆರ್‌ಎಸ್‌ಎಸ್‌/ಬಿಜೆಪಿ ಅಯೋಧ್ಯೆಯಲ್ಲಿನ ಮಂದಿರವನ್ನು ಬಹಳ ಹಿಂದಿನಿಂದಲೂ ರಾಜಕೀಯ ಯೋಜನೆಯನ್ನಾಗಿ ಮಾಡಿಕೊಂಡಿದೆ. ದೇಗುಲ ನಿರ್ಮಾಣ ಅಪೂರ್ಣಗೊಂಡಿದ್ದರೂ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರು ಚುನಾವಣಾ ಲಾಭವನ್ನು ಮಾಡಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿತ್ತು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ಕೂಡ ರಾಮ ಮಂದಿರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...