ಸಂಸತ್ತಿಗೆ ತಪ್ಪು ಮಾಹಿತಿ: ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್

Date:

ಆಪರೇಷನ್ ಸಿಂಧೂರ್’ ಸೇನಾ ಕಾರ್ಯಾಚರಣೆಯಲ್ಲಿ ಸಂಭವಿಸಿದ ಯೋಧರ ಸಾವು-ನೋವುಗಳ ಕುರಿತು ಸಂಸತ್ತಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷವು ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಮಂಡಿಸಿದೆ.

- Advertisement -

ಕಳೆದ ವರ್ಷ ಜುಲೈ 28ರಂದು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದ ರಕ್ಷಣಾ ಸಚಿವರು, ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ನಮ್ಮ ಯಾವುದೇ ಯೋಧರು ಮೃತಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ, ಇದೀಗ ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಇದೇ ಕಾರ್ಯಾಚರಣೆಯಲ್ಲಿ ವೀರಮರಣವನ್ನಪ್ಪಿದ ಆರು ಯೋಧರ (ಐವರು ಭೂಸೇನೆ ಹಾಗೂ ಒಬ್ಬರು ವಾಯುಪಡೆ) ಹೆಸರುಗಳನ್ನು ಕೆತ್ತಲಾಗಿದೆ. ಸರ್ಕಾರದ ಈ ದ್ವಂದ್ವ ನಿಲುವನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಾನ್ ಮಸಾಲ, ಗುಟ್ಕಾ ನಿಷೇಧ ಸಾಧ್ಯವೇ, ನಷ್ಟಕ್ಕೆ ಸರ್ಕಾರ ಸಿದ್ಧವಿದೆಯೇ?

ಈ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್, ರಕ್ಷಣಾ ಸಚಿವರು ಉದ್ದೇಶಪೂರ್ವಕವಾಗಿ ಸದನದ ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದ ರಕ್ಷಣೆಗಾಗಿ ಶತ್ರುಗಳ ವಿರುದ್ಧ ಹೋರಾಡಿ ಪ್ರಾಣತೆತ್ತ ವೀರ ಯೋಧರ ಬಲಿದಾನವನ್ನು ದೇಶದ ಜನರಿಂದ ಮುಚ್ಚಿಟ್ಟಿರುವುದು, ಆ ಹುತಾತ್ಮರ ಕುಟುಂಬಗಳಿಗೆ ಹಾಗೂ ಇಡೀ ಸಶಸ್ತ್ರ ಪಡೆಗಳಿಗೆ ಮಾಡಿದ ಘೋರ ಅಪಮಾನವಾಗಿದೆ ಎಂದು ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸದನಕ್ಕೆ ಸುಳ್ಳು ಮಾಹಿತಿ ನೀಡಿರುವುದು ಸಂಸತ್ತಿನ ನಿಂದನೆ ಹಾಗೂ ಹಕ್ಕುಚ್ಯುತಿಯಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿರುವ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಸತ್ಯವನ್ನು ಮರೆಮಾಚಿ ಯೋಧರಿಗೆ ಅಪಮಾನ ಮಾಡಿರುವ ರಕ್ಷಣಾ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ವಿಚಾರವಾಗಿ ಪ್ರಧಾನಿಯವರು ದೇಶದ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಸುಳ್ಳು ಪ್ರಕರಣಗಳ ಆರೋಪ: ಪೊಲೀಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರ ಧರಣಿ

ಭಾಲ್ಕಿ ತಾಲ್ಲೂಕಿನ ಸಿದ್ದೇಶ್ವರ ವಾಡಿ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ನಡೆದ...

ಬೀದರ್ | ಕಾರುಣ್ಯ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಪ್ರಶಸ್ತಿ

ಬೀದರ್ ನಗರದ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ನ.18ರಂದು ನಡೆದ ರಾಜ್ಯಮಟ್ಟದ 73ನೇ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...