ತೆಲಂಗಾಣದಂತೆ ದೆಹಲಿಯಲ್ಲೂ ಕಾಂಗ್ರೆಸ್ ಬಿಜೆಪಿಯ ಟೈರ್ ಪಂಕ್ಚರ್ ಮಾಡಲಿದೆ: ರಾಹುಲ್ ಗಾಂಧಿ

Date:

ಚುನಾವಣೆ ನಡೆಯುತ್ತಿರುವ ತೆಲಂಗಾಣದಲ್ಲಿ ಬಿಜೆಪಿಯ ಎಲ್ಲಾ ನಾಲ್ಕು ಟೈರ್‌ಗಳನ್ನು ತಮ್ಮ ಪಕ್ಷವು ಪಂಕ್ಚರ್ ಮಾಡಿದೆ ಮತ್ತು ಶೀಘ್ರದಲ್ಲೇ ದೆಹಲಿಯಲ್ಲೂ ಅದನ್ನು ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದರು.

- Advertisement -

ತೆಲಂಗಾಣದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬಿಆರ್‌ಎಸ್ ಮುಖ್ಯಸ್ಥ ಚಂದ್ರಶೇಖರ್ ರಾವ್ ಅವರು ತಾವು ಓದಿದ ಶಾಲೆ ಮತ್ತು ವಿಶ್ವವಿದ್ಯಾಲಯವನ್ನು ನಿರ್ಮಿಸಿದ್ದು ಕಾಂಗ್ರೆಸ್ ಎಂಬುದನ್ನು ಅರಿತುಕೊಳ್ಳಬೇಕು’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಮುಂಬರುವ ಚುನಾವಣೆಯನ್ನು ‘ದೊರಲ ಸರ್ಕಾರ’ (ಊಳಿಗಮಾನ್ಯ ಸರ್ಕಾರ) ಮತ್ತು ‘ಪ್ರಜಲ ಸರ್ಕಾರ’ (ಜನರ ಸರ್ಕಾರ)ದ ನಡುವಿನ ಯುದ್ಧ ಎಂದು ಬಣ್ಣಿಸಿದ ಗಾಂಧಿ, ‘ಜನರು ಬಡವರು ಮತ್ತು ರೈತರ ಪರ ಸರ್ಕಾರದ ಕನಸು ಕಾಣುತ್ತಿದ್ದರೆ, ರಾವ್ ಅವರ ಭರವಸೆಯನ್ನು ಹುಸಿಗೊಳಿಸಿದರು. ಕಾಂಗ್ರೆಸ್ ಏನು ಮಾಡಿದೆ ಎಂದು ಕೆಸಿಆರ್ ಕೇಳುತ್ತಿದ್ದಾರೆ, ಕೆಸಿಆರ್…ನೀವು ಓದಿದ ಶಾಲೆ ಮತ್ತು ನೀವು ಓದಿದ ವಿಶ್ವವಿದ್ಯಾಲಯವನ್ನು ಕಾಂಗ್ರೆಸ್ ಪಕ್ಷ ಸ್ಥಾಪಿಸಿದೆ, ನಿಮ್ಮ ವಿಮಾನ ಟೇಕ್ ಆಫ್ ಆಗುವ ವಿಮಾನ ನಿಲ್ದಾಣವನ್ನು ಕಾಂಗ್ರೆಸ್ ನಿರ್ಮಿಸಿದೆ. ನಿಮ್ಮ ವಾಹನಗಳು ಸಂಚರಿಸುವ ಹೊರ ವರ್ತುಲ ರಸ್ತೆಯನ್ನು ಕಾಂಗ್ರೆಸ್‌ ನಿರ್ಮಿಸಿದೆ’ ಎಂದರು.

ತೆಲಂಗಾಣ ರಚನೆಯ ಸಂಪೂರ್ಣ ಶ್ರೇಯವನ್ನೂ ಅವರು ತಮ್ಮ ಪಕ್ಷಕ್ಕೆ ನೀಡಿದರು. ‘ಕಾಂಗ್ರೆಸ್ ಪಕ್ಷವು ಹೈದರಾಬಾದ್ ಅನ್ನು ವಿಶ್ವದ ಪ್ರಮುಖ ಐಟಿ ಕೇಂದ್ರವಾಗಿ ಪರಿವರ್ತಿಸಿತು’ ಎಂದು ರಾಹುಲ್ ಗಾಂಧಿ ಹೇಳಿದರು.

ಕೆಸಿಆರ್ ಕುಟುಂಬದ ಮೇಲೆ ವಾಗ್ದಾಳಿ ನಡೆಸಿದ ಅವರು, “ಹಣ ಸಂಪಾದನೆ ಮಾಡುವ ಎಲ್ಲ ಖಾತೆಗಳನ್ನು ಕೆಸಿರ್ ಕುಟುಂಬವೇ ಹೊಂದಿದೆ’ ಎಂದರು. ಕಾಳೇಶ್ವರಂ ನೀರಾವರಿ ಯೋಜನೆಯನ್ನು ಉಲ್ಲೇಖಿಸಿದ ಗಾಂಧಿ, ‘ಕೆಸಿಆರ್ ಅವರು ಅದರಿಂದ ಒಂದು ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ’ ಎಂದು ಆರೋಪಿಸಿದರು.

‘ಕಳೆದ 10 ವರ್ಷಗಳಿಂದ ನೀವು ಡೋಲಾ ಸರ್ಕಾರ್ ಅನ್ನು ನೋಡಿದ್ದೀರಿ ಮತ್ತು ಮುಂದಿನ 10 ವರ್ಷಗಳಲ್ಲಿ ನೀವು ಪ್ರಜಲ ಸರ್ಕಾರ್ ಅನ್ನು ನೋಡುತ್ತೀರಿ” ಎಂದು ಅವರು ಪ್ರೇಕ್ಷಕರಿಗೆ ಹೇಳಿದರು.

ಕಾಂಗ್ರೆಸ್‌ನ ಆರು ಗ್ಯಾರಂಟಿಗಳನ್ನು ಪಟ್ಟಿ ಮಾಡಿದ ಅವರು, ‘ಮಹಾಲಕ್ಷ್ಮಿ ಅಡಿಯಲ್ಲಿ ಮಹಿಳಾ ಫಲಾನುಭವಿಗಳು ಮಾಸಿಕ ಪಿಂಚಣಿ, ಉಚಿತ ಬಸ್ ಪ್ರಯಾಣ ಮತ್ತು ಸಬ್ಸಿಡಿ ಎಲ್ಪಿಜಿ ಸಿಲಿಂಡರ್ ಮೂಲಕ 5000 ರೂ.ವರೆಗೆ ಪಡೆಯಬಹುದಾಗಿದೆ’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...