ಪಾಕ್‌ ಮಂಡಿಯೂರಿ ಕ್ಷಮೆಯಾಚಿಸುವಾಗ, ಮೋದಿ ಸರ್ಕಾರ ಶರಣಾಗಿದ್ದೇಕೆ: ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್

Date:

Advertisements

ಪಾಕ್‌ ಮಂಡಿಯೂರಿ ಕ್ಷಮೆಯಾಚಿಸುವಾಗ, ಮೋದಿ ಸರ್ಕಾರ ಯುದ್ಧ ನಿಲ್ಲಿಸಿ ಏಕೆ ಶರಣಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ಯುದ್ಧ ವಿರಾಮಕ್ಕೆ ಒತ್ತಾಯಿಸಿದ್ದು ತಾವೇ ಎಂದು ಹೇಳಿಕೊಂಡಿರುವುದು ರಾಜಕೀಯ ವಲಯದಲ್ಲಿ ವಿವಾದವನ್ನು ಉಂಟು ಮಾಡಿದೆ. ಈ ಬಗ್ಗೆ ಸಂಸತ್‌ನಲ್ಲಿ ತೀವ್ರ ಚರ್ಚೆ ನಡೆದಿದ್ದು, ವಿರೋಧ ಪಕ್ಷಗಳು ಸರ್ಕಾರದ ನಿಲುವಿನ ಬಗ್ಗೆ ತೀಕ್ಷ್ಣವಾದ ಪ್ರಶ್ನೆಗಳನ್ನು ಎತ್ತಿವೆ.

ತಮ್ಮ ಸುದೀರ್ಘ ಭಾಷಣದಲ್ಲಿ ಆಪರೇಷನ್ ಸಿಂಧೂರ್ ಕುರಿತು ಅನೇಕ ಸಂಗತಿಗಳನ್ನು ಉಲ್ಲೇಖಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಳಿಕ ಕಾಂಗ್ರೆಸ್‌ ನಾಯಕ ಗೌರವ್‌ ಗೊಗೋಯ್ ಮಾತನಾಡಿದ್ದು ಆಪರೇಷನ್‌ ಸಿಂಧೂರ್ ವಿಷಯದಲ್ಲಿ ಭಾರತ ಯಾಕೆ ಕದನ ವಿರಾಮಕ್ಕೆ ಒಪ್ಪಿಕೊಂಡಿತು, ದೇಶದ ರಕ್ಷಣಾ ವ್ಯವಸ್ಥೆಗೆ ಏನಾದರು ನಷ್ಟವಾಗಿದೆಯೆ? ಹೀಗೆ ಹತ್ತು ಹಲವು ಪ್ರಶ್ನೆ ಮುಂದಿಟ್ಟಿದ್ದಾರೆ.

ರಾಜನಾಥ್ ಸಿಂಗ್ ಭಾಷಣ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ ಸಂಸದ ಗೌರವ್ ಗೊಗೊಯ್ ವಿರೋಧ ಪಕ್ಷದ ಕಡೆಯಿಂದ ಚರ್ಚೆಯನ್ನು ಪ್ರಾರಂಭಿಸಿದರು. ಸರ್ಕಾರದೊಂದಿಗೆ ಸಂಬಂಧ ಹೊಂದಿರುವ ಜನರು ಪಾಕಿಸ್ತಾನ ಬಯಸಿದ್ದನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. 100 ದಿನಗಳು ಕಳೆದಿವೆ, ಪಹಲ್ಗಾಮ್ ಮೇಲೆ ದಾಳಿ ಮಾಡಿದ ಭಯೋತ್ಪಾದಕರು ಎಲ್ಲಿದ್ದಾರೆ ಎಂದು ಸರ್ಕಾರ ಹೇಳಬೇಕು? ನಿಮ್ಮ ಬಳಿ ಡ್ರೋನ್‌ಗಳು, ಪೆಗಾಸಸ್, ಉಪಗ್ರಹಗಳಿವೆ, ಹಾಗಾದರೆ ನೀವು ದಾಳಿ ಮಾಡಿದ ಭಯೋತ್ಪಾದಕರನ್ನು ಇನ್ನೂ ಹಿಡಿಯಲು ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ರಾಜನಾಥ್ ಸಿಂಗ್ ಬಹಳ ಮುಖ್ಯವಾದ ಮಾಹಿತಿಯನ್ನು ನೀಡಿದರು, ಆದರೆ ಆ ಭಯೋತ್ಪಾದಕರು ಪಹಲ್ಗಾಮ್‌ಗೆ ಹೇಗೆ ಬಂದರು ಎಂಬುದನ್ನು ಅವರು ಹೇಳಲಿಲ್ಲ. ಆ ಐವರು ಭಯೋತ್ಪಾದಕರು ಹೇಗೆ ಪ್ರವೇಶಿಸಿದರು ಎಂಬುದನ್ನು ದೇಶವು ತಿಳಿದುಕೊಳ್ಳಲು ಬಯಸುತ್ತದೆ? ಅಲ್ಲಿನ ಜನರು ಭಯದಿಂದ ಬದುಕುತ್ತಿದ್ದಾರೆ, ಅವರು ಅದರ ಬಗ್ಗೆ ಏಕೆ ಒಂದು ಮಾತನ್ನೂ ಹೇಳಲಿಲ್ಲ ಎಂದು ಗೌರವ್ ಗೊಗೊಯ್ ಪ್ರಶ್ನಿಸಿದರು.

ಆಪರೇಷನ್ ಸಿಂಧೂರ್ ನಲ್ಲಿ ನಾವು ಯಾವುದೇ ರಫೇಲ್ ಅನ್ನು ಕಳೆದುಕೊಂಡಿದ್ದೇವೆಯೇ ಎಂದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರಿಗೆ ಸ್ಥಳೀಯರ ಬೆಂಬಲವಿತ್ತು ಎನ್ನಲಾಗಿದೆ. ಸರ್ಕಾರ ಇದಕ್ಕೆಲ್ಲಾ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X