ಉದ್ಧವ್ ಠಾಕ್ರೆ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್

Date:

ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಬಣದ ಶಿವಸೇನೆ(ಯುಬಿಟಿ) ಮುಂಬೈನ ನಾಲ್ಕು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್‌ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ನಿರುಪಮ್, ಮುಂಬೈ ವಾಯುವ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಶಿವಸೇನೆ(ಯುಬಿಟಿ) ಅಮೂಲ್ ಕೀರ್ತಿಕಾರ್‌ ಅವರನ್ನು ಘೋಷಿಸಿರುವುದು ಒಕ್ಕೂಟ ಧರ್ಮದ ಉಲ್ಲಂಘನೆಯಾಗಿದೆ ಎಂದು ತಿಳಿಸಿದ್ದಾರೆ.

ಮುಂಬೈ ವಾಯುವ್ಯ ಕ್ಷೇತ್ರದ ಹಾಲಿ ಸಂಸದರಾಗಿರುವ ಗಂಜನ್‌ ಕೀರ್ತಿಕಾರ್‌ ಅವರ ಪುತ್ರರಾಗಿರುವ ಅಮೂಲ್ ಕೀರ್ತಿಕಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ವ್ಯಕ್ತಿ ಕೋವಿಡ್ 19 ಸಾಂಕ್ರಮಿಕದ ಸಂದರ್ಭದಲ್ಲಿ ವಲಸಿಗರಿಗೆ ಕಿಚಡಿ ವಿತರಿಸುವಲ್ಲಿ ಅಕ್ರಮವೆಸಗಿದ್ದರು. ಈ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ವಿಚಾರಣೆಗೊಳಪಡಿಸಿತ್ತು. ಶಿವಸೇನೆಯು ಕಿಚಡಿ ಕಳ್ಳನಿಗೆ ಟಿಕೆಟ್ ನೀಡಿದೆ. ಕಿಚಡಿ ಕಳ್ಳ ಅಭ್ಯರ್ಥಿಗಳೊಂದಿಗೆ ಕೆಲಸ ಮಾಡುವುದಿಲ್ಲ ಎಂದು ಸಂಜಯ್‌ ನಿರುಪಮ್‌ ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಮುಂಬೈನ ಆರು ಲೋಕಸಭಾ ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಶಿವಸೇನೆ ಯುಬಿಟಿ ಸ್ಪರ್ಧಿಸುತ್ತದೆ. ದಾನದ ರೀತಿಯಲ್ಲಿ ಒಂದು ಕ್ಷೆತ್ರವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ. ಏಕಪಕ್ಷೀಯ ನಿರ್ಧಾರವಾಗಿರುವ ಇದು ಮುಂಬೈನಲ್ಲಿ ಕಾಂಗ್ರೆಸ್‌ಅನ್ನು ನಾಶಪಡಿಸುವ ಉದ್ದೇಶ ಹೊಂದಿದೆ ಎಂದು ಸಂಜಯ್‌ ನಿರುಪಮ್‌ ತಿಳಿಸಿದ್ದಾರೆ.

ಶಿವಸೇನೆ ತೆಗೆದುಕೊಂಡಿರುವ ಅತಿರೇಕದ ನಿಲುವಿನಿಂದ ಕಾಂಗ್ರೆಸ್‌ಗೆ ದೊಡ್ಡ ರೀತಿಯಲ್ಲಿ ನಷ್ಟ ಉಂಟಾಗಲಿದೆ. ಇದಕ್ಕೆ ಕಾಂಗ್ರೆಸ್ ನಾಯಕರು ಮಧ್ಯಸ್ಥಿಕೆ ವಹಿಸಬೇಕೆಂದು ಬಯಸುತ್ತೇನೆ. ಇಲ್ಲದಿದ್ದರೆ ಒಕ್ಕೂಟವನ್ನು ಮುರಿದುಕೊಂಡು ಪಕ್ಷವನ್ನು ಉಳಿಸಬೇಕಾಗಿದೆ. ಈ ನಿರ್ಧಾರವು ಕಾಂಗ್ರೆಸ್‌ಗೆ ಸ್ವಯಂ ವಿನಾಶಕಾರಿಯಾಗಿ ಮಾರ್ಪಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ

ಲೋಕಸಭೆ ಚುನಾವಣೆಗೆ ಉದ್ಧವ್‌ ಠಾಕ್ರೆ ಬಣದ ಶಿವಸೇನಾ ತನ್ನ 17 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.ರಾಜ್ಯದ 48 ಕ್ಷೇತ್ರಗಳಲ್ಲಿ ಶಿವಸೇನಾ 22 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...