ಮೋದಿ ಉಪನಾಮ ಪ್ರಕರಣ; ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

Date:

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಜಿಲ್ಲಾ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರಿಗೆ ಜಾಮೀನು  ಮಂಜೂರಾಗಿದೆ. ಮುಂದಿನ ವಿಚಾರಣೆ ಏಪ್ರಿಲ್‌ 13ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

- Advertisement -

ಪ್ರಧಾನಿ ಮೋದಿ ಉಪನಾಮದ ಕುರಿತ ಹೇಳಿಕೆ ಸಂಬಂಧ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ (ಏಪ್ರಿಲ್ 3) ಶಿಕ್ಷೆ ಆದೇಶ ಪ್ರಶ್ನಿಸಿ ಸೂರತ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಾನಹಾನಿ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಮನವಿ ಮಾಡಿದ್ದರು.

ರಾಹುಲ್‌ ಗಾಂಧಿಯವರ ಮನವಿಯನ್ನು ಆಲಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜಾಮೀನು ಮಂಜೂರು ಮಾಡಿರುವುದಕ್ಕೆ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್‌ ಗಾಂಧಿ” ‘ಮಿತ್ರಕಾಲ’ದ ವಿರುದ್ಧ ಪ್ರಜಾಪ್ರಭುತ್ವ ಉಳಿಸುವ ಹೋರಾಟ ಇದಾಗಿದೆ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನ್ನ ಆಸರೆ!” ಎಂದು ಬರೆದುಕೊಂಡಿದ್ದಾರೆ.

ಮಾನಹಾನಿ ಮೊಕದ್ದಮೆಯಲ್ಲಿ ಮಾರ್ಚ್ 23ರಂದು ಸೂರತ್‌ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೆ ನ್ಯಾಯಾಲಯ ಪ್ರಕರಣದಲ್ಲಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಅವರಿಗೆ ಜಾಮೀನು ಅರ್ಜಿ ಸಲ್ಲಿಕೆಗೆ 30 ದಿನಗಳ ಕಾಲಾವಕಾಶ ಒದಗಿಸಿತ್ತು.

ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ ನಂತರ ಮಾರ್ಚ್‌ 24 ರಂದು ರಾಹುಲ್‌ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಸಂಸದ ಸ್ಥಾನದಿಂದ ರಾಹುಲ್ ಅವರನ್ನು ಅನರ್ಹಗೊಳಿಸಿದ ಕೆಲವು ದಿನಗಳ ನಂತರ, ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ದೆಹಲಿ ಬಂಗಲೆಯನ್ನು ತೆರವು ಮಾಡುವಂತೆ ಲೋಕಸಭೆ ನೋಟಿಸ್ ನೀಡಿತ್ತು. 

2019ರಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭ ಕೋಲಾರದಲ್ಲಿ ನೀಡಿದ ಹೇಳಿಕೆ ವಿರುದ್ಧ ಗುಜರಾತಿನ ಶಾಸಕ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...