ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

Date:

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದೆ. ದೇಶದ ಲಕ್ಷಾಂತರ ರೋಗಿಗಳ ಮೇಲೆ ಗಂಭೀರ ಆರ್ಥಿಕ ಹೊರೆ ಬೀಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ತಾವೇ ಹೇಳಿಕೊಂಡಂತೆ “ಜೋಳಿಗೆ (ಝೋಲಾ- ಜೀಲ) ಎತ್ತಿಕೊಂಡು ಹೊರಡುವ ಸಮಯ ಹತ್ತಿರ ಬಂದಿದೆ” ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

- Advertisement -

ಈ ಹಿಂದೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಪರಿವರ್ತನಾ ರ‍್ಯಾಲಿಯಲ್ಲಿ ಭಾಷಣ ಮಾಡುತ್ತಾ ಪ್ರಧಾನಿ ಮೋದಿ, “ನನ್ನ ವಿರುದ್ಧ ರಾಜಕೀಯ ವಿರೋಧಿಗಳು ಏನೇ ಮಾಡಿದರೂ, ಹೆಚ್ಚು ಎಂದರೆ ಅವರು ನನ್ನನ್ನು ಏನು ಮಾಡಲು ಸಾಧ್ಯ? ನಾನು ಒಬ್ಬ ಫಕೀರ (ಸನ್ಯಾಸಿ/ಸಾಧು), ನನ್ನ ಜೊತೆ ಇರುವ ಸಣ್ಣ ಜೋಳಿಗೆಯನ್ನು (ಝೋಲಾ) ಹಿಡಿದುಕೊಂಡು ಹೊರಟುಬಿಡುತ್ತೇನೆ” ಎಂದು ಹೇಳಿದ್ದರು. (ಅರೇ ಹಮ್ ತೋ ಫಕೀರ್ ಆದ್ಮಿ ಹೇ, ಝೋಲಾ ಲೇಕೆ ಚಲ್ ಪಡೆಂಗೆ)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಇದೀಗ ದೇಶಾದ್ಯಂತ ಗಂಭೀರ ಕಾಯಿಲೆಗಳ ಜೀವ ರಕ್ಷಕ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಾಗ್ದಾಳಿ ನಡೆಸುವಾಗ ಪ್ರಧಾನಿ ಮೋದಿಯವರ ಇದೇ ಹಳೆಯ ಹೇಳಿಕೆಯನ್ನು ಪ್ರಸ್ತಾಪಿಸಿದ್ದಾರೆ. ಪ್ರಧಾನಿ ಮೋದಿ ಅವರು ಹಿಂದೆ ಹೇಳಿದಂತೆ ‘ಜೋಳಿಗೆ’ ಹಿಡಿದು ಹೊರಡುವ ಸಮಯ ಹತ್ತಿರ ಬಂದಿದೆ ಎಂದಿದ್ದಾರೆ.

ಇದನ್ನೂ ಓದಿ: ಪ್ರಿಯ ಮೋದಿ ಸರ್‌ಗೆ ‘ಈ ದಿನ’ ಬರೆದ ಪ್ರೀತಿಯ ಬಹಿರಂಗ ಪತ್ರ!

Advertisements

“ಮೋದಿ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ದೇಶಾದ್ಯಂತ ರೋಗಿಗಳ ಮೇಲೆ ದುಬಾರಿ ಔಷಧಗಳ ಹೊರೆ ಹೆಚ್ಚುತ್ತಿದೆ. ಆದರೂ ಪ್ರಧಾನ ಮಂತ್ರಿಯವರು ‘ನಿರೋ’ ಚಕ್ರವರ್ತಿಯಂತೆ (ರೋಮನ್ ಸಾಮ್ರಾಜ್ಯದ ಅತ್ಯಂತ ವಿವಾದಾತ್ಮಕ, ಕ್ರೂರ ಮತ್ತು ವಿಲಕ್ಷಣ ರಾಜರಲ್ಲಿ ಒಬ್ಬ) ತಮ್ಮದೇ ಆದ ರಾಗವನ್ನು ನುಡಿಯುವುದರಲ್ಲಿ ಮಗ್ನರಾಗಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಜನರನ್ನು ಯಾವ ಮಟ್ಟಿಗೆ ಸುಲಿಗೆ ಮಾಡಲಾಗುತ್ತಿದೆ ಎಂದರೆ, 74 ರೂಪಾಯಿ ಬೆಲೆಯ ಇಂಜೆಕ್ಷನ್ ಒಂದನ್ನು 4,980 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ, ಆರೋಗ್ಯ ಸೇವೆಗಳಿಗಾಗಿ ರೋಗಿಗಳಿಂದ ಅವುಗಳ ನೈಜ ವೆಚ್ಚಕ್ಕಿಂತ 67 ಪಟ್ಟು ಹೆಚ್ಚಿನ ಹಣವನ್ನು ವಸೂಲಿ ಮಾಡಲಾಗುತ್ತಿದೆ” ಎಂದು ದೂರಿದ್ದಾರೆ.

“ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗೆ ನೀಡುವ ಒಂದು ಔಷಧದ 21 ದಿನಗಳ ಚಿಕಿತ್ಸಾ ಕ್ರಮಕ್ಕೆ ಸುಮಾರು 58,000 ರೂಪಾಯಿ ವೆಚ್ಚವಾಗುತ್ತದೆ. ಇದರಿಂದಾಗಿ ವಾರ್ಷಿಕ ವೆಚ್ಚವು ಸುಮಾರು 10 ಲಕ್ಷ ರೂಪಾಯಿಗಳಷ್ಟಾಗುತ್ತದೆ. ಇಲ್ಲಿನ ಸಮಸ್ಯೆ ಕೇವಲ ಒಂದು ಔಷಧದ ಬೆಲೆಗೆ ಸಂಬಂಧಿಸಿದ್ದಲ್ಲ; ಇದು 12 ವರ್ಷಗಳಿಂದ ಅಧಿಕಾರದಲ್ಲಿರುವ ಸರ್ಕಾರದ ನೀತಿ-ನಿರ್ಧಾರಗಳ ಆದ್ಯತೆಗೆ ಸಂಬಂಧಿಸಿದ ವಿಷಯವಾಗಿದೆ” ಎಂದು ಹೇಳಿದ್ದಾರೆ.

“ಪೇಟೆಂಟ್ ಕಾಯ್ದೆಯ ಸೆಕ್ಷನ್ 92 ಮತ್ತು 100 ರ ಅಡಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಮತ್ತು ಸರ್ಕಾರದ ಬಳಕೆಗೆ ಅವಕಾಶಗಳಿವೆ. ಆದರೂ, ರೋಗಿಗಳಿಗೆ ಏಕೆ ಯಾವುದೇ ಪರಿಹಾರವನ್ನು ಒದಗಿಸಲಾಗಿಲ್ಲ” ಎಂದು ಪ್ರಶ್ನಿಸಿದ್ದಾರೆ.

“ಪೇಟೆಂಟ್ ಕಾಯ್ದೆಯ ಸೆಕ್ಷನ್ 100 ರ ಅಡಿಯಲ್ಲಿ, ಸರ್ಕಾರವು ಪೇಟೆಂಟ್ ಪಡೆದ ಜೀವ ರಕ್ಷಕ ಔಷಧಗಳನ್ನು ಸ್ವತಃ ಉತ್ಪಾದಿಸಬಹುದು ಅಥವಾ ಅವುಗಳ ಉತ್ಪಾದನೆಗೆ ಅನುಮತಿ ನೀಡಬಹುದು. ಅಗತ್ಯವಿರುವ ರೋಗಿಗಳಿಗೆ ವಾಣಿಜ್ಯೇತರ ಆಧಾರದ ಮೇಲೆ ಅವುಗಳನ್ನು ಲಭ್ಯವಾಗುವಂತೆ ಮಾಡಬಹುದು ಎಂದು ಕೇರಳ ಹೈಕೋರ್ಟ್ ಸ್ಪಷ್ಟಪಡಿಸಿದೆ” ಎಂಬುದನ್ನು ಎಕ್ಸ್‌ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

“ಕಾನೂನಿನಲ್ಲಿ ಇಂತಹ ಅವಕಾಶಗಳಿದ್ದರೂ ಮತ್ತು ಹೈಕೋರ್ಟ್ ಮಾರ್ಗವನ್ನು ಸ್ಪಷ್ಟವಾಗಿ ವಿವರಿಸಿದ್ದರೂ, ಜೀವ ರಕ್ಷಕ ಔಷಧಗಳು ರೋಗಿಗಳಿಗೆ ಏಕೆ ಕೈಗೆಟುಕದಂತಾಗಿವೆ ಎಂಬುದನ್ನು ಮೋದಿ ಸರ್ಕಾರ ವಿವರಿಸಲೇಬೇಕು. ಮೋದಿ ಸರ್ಕಾರ ಉತ್ತರಿಸಲೇಬೇಕು. ರೋಗಿಗಳಿಗೆ ಪರಿಹಾರ ಒದಗಿಸಲು ಕಾನೂನು ಅವಕಾಶ ಕಲ್ಪಿಸಿದಾಗ, ಅದರ ಮೇಲೆ ಕ್ರಮ ಕೈಗೊಳ್ಳುವಲ್ಲಿ ಏಕೆ ವಿಳಂಬವಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

“ಪ್ರಧಾನ ಮಂತ್ರಿಯವರೇ, ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಗಳು ಯಾವಾಗ ಲಭ್ಯವಾಗುವಂತೆ ಮಾಡಲಾಗುತ್ತದೆ? ಇಲ್ಲದಿದ್ದರೆ—ನೀವೇ ಒಮ್ಮೆ ಹೇಳಿದಂತೆ, ‘ನಿಮ್ಮ ಬ್ಯಾಗ್ ತೆಗೆದುಕೊಂಡು ಹೊರಡುವ’ ಸಮಯವು ವೇಗವಾಗಿ ಸಮೀಪಿಸುತ್ತಿದೆ” ಎಂದು ಲೇವಡಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸ್ ದೌರ್ಜನ್ಯ: ಕ್ರಮಕ್ಕೆ ಶಿವಮೊಗ್ಗ ಕಾನಿಪಸ ಆಗ್ರಹ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ...

ತೀರ್ಥಹಳ್ಳಿ | ಮತಪಟ್ಟಿಯಿಂದ ಮುಸ್ಲಿಮರ ಹೆಸರು ಅಳಿಸಲು ಬಿಜೆಪಿ ಸಂಚು? ತಹಶೀಲ್ದಾರ್‌ಗೆ ಪತ್ರ ಬರೆದಿದ್ದ ಬಿಜೆಪಿ ಮುಖಂಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...