ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ.
ಶುಕ್ರವಾರ ಮುಂಜಾನೆ ದೆಹಲಿಯಿಂದ ಹಾಥರಸ್‌ಗೆ ರಸ್ತೆ ಮೂಲಕ ಅಲಿಗಢ್‌ನ ಪಿಲಾಖ್ನಾ ಗ್ರಾಮಕ್ಕೆ ರಾಹುಲ್ ಗಾಂಧಿ ತೆರಳಿದರು. ವಿಪಕ್ಷ ನಾಯಕರ ಜೊತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನೇತ್ ಮತ್ತು ಇತರ ಪದಾಧಿಕಾರಿಗಳು ಹಾಜರಿದ್ದರು.
हाथरस हादसे के पीड़ितों से मिले नेता विपक्ष श्री @RahulGandhi
इस मुश्किल वक्त में हम आपके साथ खड़े हैं।
📍 अलीगढ़, उत्तर प्रदेश pic.twitter.com/q0NDQTQgQL
— Congress (@INCIndia) July 5, 2024
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ, ರಾಹುಲ್ ಗಾಂಧಿ ಅವರು ಇಂದು ಹಾಥರಸ್‌ನಲ್ಲಿ ಮೃತಪಟ್ಟ ವಿವಿಧ ಗ್ರಾಮಗಳಲ್ಲಿರುವ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಹಾಥರಸ್ ಘಟನೆಯು ಉತ್ತರ ಪ್ರದೇಶ ಸರ್ಕಾರದ ವೈಫಲ್ಯವಾಗಿದೆ. ನಿನ್ನೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹಾಥರಸ್‌ಗೆ ಭೇಟಿ ನೀಡಿದ್ದರು. ನಂತರ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಕೂಡ ಅಲ್ಲಿಗೆ ಹೋಗಿದ್ದರು. ಆದರೆ ಇಬ್ಬರು ಒಟ್ಟಿಗೆ ಹೋಗಲಿಲ್ಲ. ಇದು ಸರ್ಕಾರದ ಆಂತರಿಕ ಕಚ್ಚಾಟವನ್ನು ತೋರಿಸುತ್ತದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹಾಥರಸ್‌ನಲ್ಲಿ ಜುಲೈ 2 ರಂದು ಸತ್ಸಂಗದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಸಾವನ್ನಪ್ಪಿದ 121 ಜನರಲ್ಲಿ 17 ಮಂದಿ ಅಲಿಗಢದವರು ಮತ್ತು 19 ಜನರು ಹಾಥರಸ್‌ನವರಾಗಿದ್ದಾರೆ.
ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಸತ್ಸಂಗ ಹಮ್ಮಿಕೊಳ್ಳಲಾದ ಆಯೋಜನೆಯ ಸದಸ್ಯರಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ನಾರಾಯಣ್ ಸಾಕಾರ್ ಹರಿ ಎಂಬಾತ ಹಮ್ಮಿಕೊಂಡಿದ್ದ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಬಹುತೇಕ ಮಹಿಳೆಯರು ಒಳಗೊಂಡು ಒಟ್ಟು 121 ಮಂದಿ ಮೃತಪಟ್ಟು, 31 ಮಂದಿ ಗಾಯಗೊಂಡಿದ್ದರು.
ಅಲಿಘಢ ಐಜಿ ಶಲಭ್ ಮಾತೂರ್ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಒಳಗೊಂಡು 6 ಮಂದಿಯನ್ನು ಬಂಧಿಸಲಾಗಿದೆ. ಎಲ್ಲ ಸದಸ್ಯರು ಸಂಘಟನಾ ಸಮಿತಿ ಹಾಗೂ ಸೇವಾದಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಮಳೆ ಹೊಯ್ಯುತಿದೆ, ಡೆಂಘೀ ಹರಡುತಿದೆ- ಆರೋಗ್ಯ ಇಲಾಖೆ ಏನು ಮಾಡುತ್ತಿದೆ?
ಈ ನಡುವೆ ಮುಖ್ಯ ಸೇವದಾರನಾದ ದೇವ್ ಪ್ರಕಾಶ್ ಮಧುಕರ್ ಎಂಬಾತನನ್ನು ಮುಖ್ಯ ಆರೋಪಿ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಈತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದ್ದು, ಮಧುಕರ್ ಬಗ್ಗೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಮಾತೂರ್ ತಿಳಿಸಿದ್ದಾರೆ.
ಸತ್ಸಂಗದಲ್ಲಿ 2.50 ಲಕ್ಷ ಮಂದಿ ಭಾಗಿಯಾಗಿದ್ದು, ಜಿಲ್ಲಾಡಳಿತ 80 ಸಾವಿರ ಜನರಿಗಷ್ಟೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತ್ತು.