ಮೋದಿ ವಿರೋಧಿ ಹೇಳಿಕೆ ಪ್ರಕರಣದಲ್ಲಿ ರಾಹುಲ್ ಪರ ವಕಾಲತ್ತು ವಹಿಸಿದ್ದ ವಕೀಲನ ಮೃತದೇಹ ಪತ್ತೆ

Date:

ವಕೀಲ, ಮಾಜಿ ಕಾಂಗ್ರೆಸ್‌ ಕಾನೂನು ಘಟಕದ ಸಂಚಾಲಕ ಫಿರೋಜ್ ಪಠಾಣ್ ಅವರ ಮೃತದೇಹವು ಗುಜರಾತ್‌ನ ತಾಪಿ ನದಿಯ ದಡದಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

- Advertisement -

ಫಿರೋಜ್ ಪಠಾಣ್ ಅವರು ಗುಜರಾತ್‌ನ ಸೂರತ್‌ನ ಉದ್ನಾ ದರ್ವಾಜಾ ಪ್ರದೇಶದ ನಿವಾಸಿ. ಅವರು ‘ಮೋದಿ’ ಎಂಬ ಪದನಾಮವನ್ನು ರಾಹುಲ್‌ ಗಾಂಧಿ ನಿಂದಿಸಿದ್ದಾರೆಂದು ದಾಖಲಾಗಿದ್ದ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ್ದರು. ಅಲ್ಲದೆ, ಗುಜರಾತ್‌ ಕಾಂಗ್ರೆಸ್‌ನ ಕಾನೂನು ಘಟಕದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಆಸ್ತಿ ಮೇಲೆ ಸಾಲ ಮಾಡಿಕೊಂಡು, ಮರುಪಾವತಿ ಮಾಡಲಾಗದೆ, ಮಾನಸಿಕವಾಗಿ ನೊಂದಿದ್ದರು. ಖಿನ್ನತೆಗೂ ಒಳಗಾಗಿದ್ದರು ಎಂದು ಹೇಳಲಾಗಿದೆ.

ಭಾನುವಾರ ಅವರ ಮೃತದೇಹ ಉಭರತ್ ಪ್ರದೇಶದಲ್ಲಿ ತಾಪಿ ನದಿ ದಡದಲ್ಲಿ ಪತ್ತೆಯಾಗಿದೆ. ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ಹೇಳಲಾಗುತ್ತಿದೆ.

ಶನಿವಾರ ಬಗ್ಗೆ ತಮ್ಮ ಸಹೋದ್ಯೋಗಿ ದೀಪಕ್ ಅವರಿಗೆ ಕರೆ ಮಾಡಿದ್ದ ಪಠಾಣ್, “ನನಗೆ ಏನಾದರೂ ಸಂಭವಿಸಿದರೆ, ನ್ಯಾಯಾಲಯದ ಸಮೀಪದಲ್ಲಿರುವ ಸೇತುವೆಯ ಮೇಲೆ ನನ್ನನ್ನು ಹುಡುಕಿ ಬನ್ನಿ” ಎಂದಿದ್ದರು. ಅವರ ಮಾತು ಕೇಳಿ, ಆಘಾತಗೊಂಡ ದೀಪಕ್ ತಕ್ಷಣವೇ ಸೇತುವೆ ಬಳಿ ಬಂದಿದ್ದಾರೆ. ಆದರೆ, ಆ ಸಂದರ್ಭದಲ್ಲಿ ಅಲ್ಲಿ ಯಾರೂ ಇಲ್ಲವೆಂದು ತಿಳದಿಬಂದಿದೆ.

ಬಳಿಕ, ದೀಪಕ್ ಅವರು ಪಠಾಣ್ ಅವರು ಕುಟುಂಬಸ್ಥರಿಗೆ ಕರೆ ಮಾಡಿ, ಮಾಹಿತಿ ತಿಳಿಸಿದ್ದಾರೆ. ಕುಟುಂಬಸ್ಥರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸೇತುವೆ ಬಳಿ ಬಂದು, ಶೋಧ ನಡೆಸಿದ್ದಾರೆ. ನದಿ ತುಂಬಿ ಹರಿಯುತ್ತಿದ್ದರಿಂದ, ಅವರ ಕೊಚ್ಚಿ ಹೋಗಿರಬಹುದೆಂದು ಭಾವಿಸಿ, ಸೇತುವೆಯಂದ ಸುಮಾರು ದೂರದವರೆಗೆ ನದಿಯಲ್ಲಿ ಶೋಧ ನಡೆಸಲಾಗಿದೆ. ಅವರ ಮೃತದೇಹವು ಭಾನುವಾರ ಬೆಳಗ್ಗೆ ಉಭಾರತ್ ಬಳಿ ಪತ್ತೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...