ಆ.19ಕ್ಕೆ ಕಾಂಗ್ರೆಸ್ ಸಭೆ: ಕೇಂದ್ರದ ವಿರುದ್ಧ ಹೋರಾಟ, ಮುಂಬರುವ ಚುನಾವಣೆಗಳಿಗೆ ಮಾಸ್ಟರ್ ಪ್ಲ್ಯಾನ್

Date:

ಮುಂಬರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಎದುರಿಸಲು ಹಾಗೂ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ರಾಷ್ಟ್ರಮಟ್ಟದ ಹೋರಾಟವನ್ನು ತೀವ್ರಗೊಳಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಸ್ಟ್ 19ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯನ್ನು ಕರೆದಿದ್ದಾರೆ.

- Advertisement -

ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಈ ಉನ್ನತ ಮಟ್ಟದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಮುಖ ನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಿಡಬ್ಲ್ಯೂಸಿ ಸದಸ್ಯರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಇದನ್ನೂ ಓದಿ: ‘ಸಂಸತ್ತಿನಲ್ಲಿ ಗೃಹ ಸಚಿವರ ‘ಉಪನ್ಯಾಸ’ ಕೇಳುವ ಆಸಕ್ತಿ ಇಲ್ಲ: ರಾಹುಲ್ ಗಾಂಧಿ

ಪ್ರಮುಖವಾಗಿ ಬೆಲೆ ಏರಿಕೆ, ಉದ್ಯೋಗ ಸೃಷ್ಟಿಯಲ್ಲಿನ ಹಿನ್ನಡೆ, ಜಂಟಿ ಸಂಸದೀಯ ಸಮಿತಿ (JPC) ತನಿಖೆಯ ಬೇಡಿಕೆಗಳು ಹಾಗೂ ವಿವಿಧ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಆರೋಪಗಳ ಕುರಿತು ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.

ಹಾಗೆಯೇ ಮುಂಬರುವ ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಗಳಲ್ಲಿ ಅನುಸರಿಸಬೇಕಾದ ಅಭ್ಯರ್ಥಿಗಳ ಆಯ್ಕೆ ಸೂತ್ರ, ಸೀಟು ಹಂಚಿಕೆ ಮತ್ತು ಪ್ರಚಾರ ತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ. ಮಿತ್ರಪಕ್ಷಗಳೊಂದಿಗೆ ರಾಜ್ಯಮಟ್ಟದಲ್ಲಿ ಸೀಟು ಹಂಚಿಕೆ ಮತ್ತು ಪ್ರಚಾರದ ಸಮನ್ವಯತೆಯನ್ನು ಸಾಧಿಸುವ ಕುರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.

ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸುವುದು, ಮಹಿಳೆಯರು ಹಾಗೂ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವುದು ಮತ್ತು ಜನಸಾಮಾನ್ಯರಿಗೆ ತಲುಪುವಂತಹ ಅಭಿಯಾನಗಳನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ.

ಸಂಸತ್ತಿನ ಒಳಗೂ ಮತ್ತು ಹೊರಗೂ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಜನಪರ ಹೋರಾಟವನ್ನು ರೂಪಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ. ವಿವಿಧ ರಾಜ್ಯಗಳ ಚುನಾವಣಾ ಪೂರ್ವ ಸ್ಥಿತಿಗತಿಗಳ ಬಗ್ಗೆ ಸಭೆಯಲ್ಲಿ ವರದಿ ಪಡೆಯಲಾಗುವುದು ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಗರಹೊಳೆ: ಜೇನುಕುರುಬ ಕುಟುಂಬಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಸರ್ಕಾರದ ಕ್ರಮಕ್ಕೆ ಆದಿವಾಸಿಗಳ ಆಕ್ರೋಶ

ಕೊಡಗು ಮತ್ತು ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ‘ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ’ದಲ್ಲಿ...

ಹಾವೇರಿ | ನ.14ರಂದು ಜಿಲ್ಲಾ ಮಟ್ಟದ ಯುವ ಸಂಸತ್ತು ಅಧಿವೇಶನ

ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

ಕರ್ನಾಟಕದ ಜೈನ ಪರಂಪರೆಗೆ ಹಾವೇರಿಯ ಕೊಡುಗೆ ಅಪಾರ: ಡಾ. ಶಿವಯೋಗಿ ಆರ್ ಕೋರಿಶೆಟ್ಟರ್‌

ಕರ್ನಾಟಕದಲ್ಲಿ ಪ್ರತಿ ಐದು ಗ್ರಾಮಗಳಿಗೆ ಒಂದು ಜೈನಧರ್ಮಕ್ಕೆ ಸಂಬಂಧಿದ ಕುರುಹುಗಳು ದೊರೆಯುತ್ತವೆ....

ಸೌದಿ ಅರೇಬಿಯಾ: ವಿವಾಹೇತರ ಗರ್ಭಧಾರಣೆಗೆ ಕೀನ್ಯಾ ಮಹಿಳೆಗೆ 100 ಛಡಿಯೇಟಿನ ಶಿಕ್ಷೆ

ಸೌದಿ ಅರೇಬಿಯಾದಲ್ಲಿ ವಿವಾಹೇತರ ಸಂಬಂಧದಿಂದ ಮಗುವಿಗೆ ಜನ್ಮ ನೀಡಿದ ಕೀನ್ಯಾದ ಗೃಹ...