ಹೇಮಾ ಮಾಲಿನಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ 2 ದಿನ ಪ್ರಚಾರ ನಿಷೇಧ

Date:

ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಎರಡು ದಿನ ಪ್ರಚಾರದಿಂದ ನಿಷೇಧ ಹೇರಿದೆ.

ಆಯೋಗದ ಆದೇಶದ ಹಿನ್ನೆಲೆಯಲ್ಲಿ ಸುರ್ಜೇವಾಲ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳವರೆಗೂ ಯಾವುದೇ ರ್ಯಾಲಿ ಅಥವಾ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ.

“ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಸಂಬಂಧಿತ ವಿಷಯಗಳಿಗೆ ಸುರ್ಜೇವಾಲ ಅವರಿಗೆ ಆಯೋಗವು ನೋಟಿಸ್ ನೀಡುತ್ತದೆ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಸುರ್ಜೇವಾಲ ಅವರು ಗೌರವಕ್ಕೆ ಕುಂದು ತರುವಂತ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಚುನಾವಣಾ ಆಯೋಗವು ಬಲವಾಗಿ ಖಂಡಿಸುತ್ತದೆ” ಎಂದು ಚುನಾವಣಾ ಆಯೋಗ ನೋಟಿಸ್‌ನಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

“ಈ ಹಿನ್ನೆಲೆಯಲ್ಲಿ ಸಂವಿಧಾನದ 324ನೇ ವಿಧಿಯಡಿ ಆಯೋಗವು ಸುರ್ಜೇವಾಲ ಅವರಿಗೆ ಸಾರ್ವಜನಿಕ ಸಭೆಗಳು, ಮೆರವಣಿಗೆಗಳು ರ್ಯಾಲಿಗಳು ಹಾಗೂ ಸಂದರ್ಶನ ಒಳಗೊಂಡ ಯಾವುದೇ ಪ್ರಚಾರದಲ್ಲಿ ಮುಂದಿನ 24 ಗಂಟೆಗಳ ಕಾಲ ತೊಡಗುವಂತಿಲ್ಲ” ಎಂದು ಹೇಳಿದೆ.

ಈ ಲೋಕಸಭಾ ಚುನಾವಣೆಯಲ್ಲಿ ಸುರ್ಜೇವಾಲ ಅವರು ಆಯೋಗದಿಂದ ನಿಷೇಧಗೊಂಡ ಮೊದಲ ರಾಜಕಾರಣಿಯಾಗಿದ್ದಾರೆ.

ಬಿಜೆಪಿ ಸಂಸದೆ ಹೇಮಾಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ ನೀಡಿದ್ದ ನಂತರ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರು ಕ್ಷಮೆಯಾಚಿಸಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಟಿಎಂ ಕಾರ್ಡ್‌ನ ಹಣ ದೋಚಲು ಹೊಸ ರೀತಿಯ ವಂಚಕರ ಪ್ರವೇಶ

ಒಂದು ವಾರದ ಹಿಂದಷ್ಟೆ ಎಟಿಎಂ ಯಂತ್ರವನ್ನು ಹಾಳುಗೆಡವಿ ಜನರಿಗೆ ಮೋಸ ಮಾಡಿದ್ದ...

ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದೆಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ

ಕೋವಿಶೀಲ್ಡ್ ಮತ್ತು ವ್ಯಾಕ್ಸ್‌ಜೆವ್ರಿಯಾ ಎಂಬ ಬ್ರ್ಯಾಂಡ್ ಹೆಸರುಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟವಾದ...

ದೆಹಲಿ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ದೇವೇಂದರ್ ಯಾದವ್ ನೇಮಕ

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮಧ್ಯಂತರ ಅಧ್ಯಕ್ಷರಾಗಿ ದೇವೇಂದರ್ ಯಾದವ್‌ ಅವರನ್ನು...

ಹಾಂಕಾಂಗ್, ಸಿಂಗಾಪುರ ನಂತರ ಆಸ್ಟ್ರೇಲಿಯಾದಲ್ಲೂ ಎಂಡಿಹೆಚ್ ಮಸಾಲಾ ನಿಷೇಧ?

ಹಾಂಕಾಂಗ್‌ ಹಾಗೂ ಸಿಂಗಾಪುರ ದೇಶಗಳ ನಂತರ ಭಾರತದ ಎಂಡಿಹೆಚ್‌ ಮಸಾಲ ಪದಾರ್ಥಗಳನ್ನು...