ವಾರಕ್ಕೆ 70 ಗಂಟೆ ದುಡಿಮೆ ಸಮರ್ಥನೆ; ನಾರಾಯಣ ಮೂರ್ತಿ ವಿರುದ್ಧ ಕಾಂಗ್ರೆಸ್ ಸಂಸದ ಟೀಕೆ

Date:

Advertisements

ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂಬ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟೀಕಿಸಿದ್ದಾರೆ. ಅಧಿಕ ಸಮಯ ‘ಅರ್ಥಹೀನವಾಗಿ’ ಕೆಲಸ ಮಾಡುವುದಕ್ಕಿಂತ ದಕ್ಷತೆಯ ಕಡೆಗೆ ಗಮನಹರಿಸಬೇಕು ಎಂದು ಅಭಿಪ್ರಾಯಿಸಿದ್ದಾರೆ.

ಯುವಕರು ವಾರದಲ್ಲಿ 70 ಗಂಟೆಗಳ ಕಾಲ ಕೆಲಸ ಮಾಡುವುದು ಅತ್ಯಗತ್ಯ. ಇದು ದೇಶದ ಬೆಳವಣಿಗೆಗೆ ಸಹಕಾರಿ ಎಂದು ನಾರಾಯಣ ಮೂರ್ತಿ ಅವರು ಹಲವು ಬಾರಿ ಹೇಳಿದ್ದಾರೆ. ವಿರೋಧ ವ್ಯಕ್ತವಾದಾಗಲೂ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ವಾರಕ್ಕೆ 70 ಗಂಟೆ ದುಡಿಮೆ | ನಾನು ಸತ್ತರೂ ನನ್ನ ಅಭಿಪ್ರಾಯ ಬದಲಿಸಿಕೊಳ್ಳಲ್ಲ: ನಾರಾಯಣ ಮೂರ್ತಿ

Advertisements

ಈ ಬಗ್ಗೆ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ, “ದೀರ್ಘಕಾಲ ಕೆಲಸ ಮಾಡುವುದು ಅರ್ಥಹೀನ. ದಕ್ಷತೆಯ ಮೇಲೆ ಅಧಿಕ ಗಮನ ಕೇಂದ್ರೀಕರಿಸಬೇಕು” ಎಂದು ಹೇಳಿದ್ದಾರೆ.

“ದೈನಂದಿನ ಜೀವನ ಒಂದು ಹೋರಾಟವಾಗಿದೆ. ಅಸಮರ್ಥ ಮತ್ತು ಕೆಳದರ್ಜೆಯ ಮೂಲಸೌಕರ್ಯದ ವಿರುದ್ಧವಾಗಿ ಹೋರಾಟ ನಡೆಯುತ್ತಿರುತ್ತದೆ. ಉತ್ತಮ ಸಾಮಾಜಿಕ ವ್ಯವಸ್ಥೆ ಮತ್ತು ಸಾಮರಸ್ಯದ ಜೀವನಕ್ಕಾಗಿ ಉದ್ಯೋಗ ಜೀವನದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಅತೀ ಅಗತ್ಯ” ಎಂದು ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ನಾರಾಯಣ ಮೂರ್ತಿಯ ವಾರಕ್ಕೆ 70 ಗಂಟೆ ದುಡಿಮೆ ಹೇಳಿಕೆ: ನೆಟ್ಟಿಗರಿಂದ ಆಕ್ರೋಶ

ಹಾಗೆಯೇ, “ವಾರದ ನಾಲ್ಕು ದಿನಗಳ ಸೋಮವಾರ ಮಧ್ಯಾಹ್ನ 12 ರಿಂದ ಶುಕ್ರವಾರ ಮಧ್ಯಾಹ್ನ 2 ರವರೆಗೆ ಕೆಲಸದ ಅವಧಿ ಇರಬೇಕು” ಎಂದು ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಭಾನುವಾರ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಹಲವು ಬಾರಿ ವಾರಕ್ಕೆ 70 ಗಂಟೆ ದುಡಿಮೆಯ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ನಾರಾಯಣ ಮೂರ್ತಿ ಅವರು, ಕಳೆದ ತಿಂಗಳು “ನಾನು ಉದ್ಯೋಗ ಜೀವನದಲ್ಲಿ ಸಮತೋಲನ ಇರಬೇಕು ಎಂಬುದನ್ನು ನಂಬುವುದಿಲ್ಲ” ಎಂದು ಸಿಎನ್‌ಬಿಸಿ ಗ್ಲೋಬಲ್ ಲೀಡರ್‌ಶಿಪ್ ಶೃಂಗಸಭೆಯಲ್ಲಿ ಹೇಳಿದ್ದರು.

ಹಾಗೆಯೇ ಆರು ದಿನಗಳ ಉದ್ಯೋಗವಧಿಯನ್ನು 1986ರಲ್ಲಿ ಐದು ದಿನಗಳ ಕೆಲಸದ ಅವಧಿಗೆ ಕಡಿತಗೊಳಿಸಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದರು. “ಹಾಗೆಯೇ ನನ್ನನ್ನು ಕ್ಷಮಿಸಿ. ನಾನು ನನ್ನ ದೃಷ್ಟಿಕೋನವನ್ನು ಬದಲಾಯಿಸಿಲ್ಲ. ನಾನು ಸಾಯುವವರೆಗೂ ಇದೇ ನಿಲುವು ಹೊಂದಿರುತ್ತೇನೆ” ಎಂದಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X