ರಾಜ್ಯಸಭೆ ಚುನಾವಣೆ: ಹೊರಗಿನವರಿಗೆ ಕರ್ನಾಟಕದಲ್ಲಿ ಟಿಕೆಟ್ ಕೊಟ್ಟ ಕಾಂಗ್ರೆಸ್

Date:

ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಪವನ್ ಖೇರಾ, ಮನ್ಸೂರ್ ಅಲಿ ಖಾನ್‌ ಹೆಸರು ಕಾಣಿಸಿಕೊಂಡಿದೆ. ಈ ಪೈಕಿ ಇಬ್ಬರು ಕರ್ನಾಟಕದವರೇ ಆದರೆ ಹೊರಗಿನವರಾದ ಪವನ್ ಖೇರಾ ಅವರಿಗೆ ಕರ್ನಾಟಕದ ರಾಜ್ಯಸಭೆ ಟಿಕೆಟ್ ಅನ್ನು ಕಾಂಗ್ರೆಸ್ ನೀಡಿದೆ.

- Advertisement -

ಜೂನ್ 18ರಂದು ದೇಶದ 10 ರಾಜ್ಯಗಳ 24 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಯಲಿದೆ. ಈ ಪೈಕಿ ಇದೀಗ ಐದು ರಾಜ್ಯಗಳ ಏಳು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಕರ್ನಾಟಕದ ಮೂವರನ್ನು ಹೊರತುಪಡಿಸಿ ಮೀನಾಕ್ಷಿ ನಟರಾಜನ್, ಪ್ರವೀಣ್ ಚಕ್ರವರ್ತಿ, ನೀರಜ್ ಡಾಂಗಿ ಮತ್ತು ಪ್ರಣವ್ ಝಾಗೆ ರಾಜ್ಯಸಭೆ ಟಿಕೆಟ್ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನು ಓದಿದ್ದೀರಾ? ಡಿಎಂಕೆ ಮೈತ್ರಿ ತೊರೆದ ಕಾಂಗ್ರೆಸ್‌; ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಬೆಂಬಲ

ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಖರ್ಗೆ ಅವರನ್ನು ಕರ್ನಾಟಕದಿಂದ ಮರು ನಾಮನಿರ್ದೇಶನ ಮಾಡಲಾಗಿದೆ. ಮೇಲ್ಮನೆಯಲ್ಲಿ ಅವರ ಅವಧಿ ಈ ತಿಂಗಳ ಕೊನೆಯಲ್ಲಿ ಕೊನೆಗೊಳ್ಳಲಿದೆ. ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಅವರನ್ನು ಕರ್ನಾಟಕದಿಂದ ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್ ಕರ್ನಾಟಕದ ಮನ್ಸೂರ್ ಅಲಿ ಖಾನ್ ಅವರನ್ನೂ ನಾಮನಿರ್ದೇಶನ ಮಾಡಿದೆ.

rajysabha

ಮೀನಾಕ್ಷಿ ನಟರಾಜನ್ ಅವರನ್ನು ಮಧ್ಯಪ್ರದೇಶದಿಂದ ಮತ್ತು ನೀರಜ್ ಡಾಂಗಿ ಅವರನ್ನು ರಾಜಸ್ಥಾನದಿಂದ ಮರು ನಾಮನಿರ್ದೇಶನ ಮಾಡಲಾಗಿದೆ. ಪ್ರವೀಣ್ ಚಕ್ರವರ್ತಿ ಅವರನ್ನು ತಮಿಳುನಾಡಿನಿಂದ ಮತ್ತು ಪ್ರಣವ್ ಝಾ ಅವರನ್ನು ಜಾರ್ಖಂಡ್‌ನಿಂದ ನಾಮನಿರ್ದೇಶನ ಮಾಡಲಾಗಿದೆ. ಜೂನ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರು ಜೂನ್ 5ರ ಶುಕ್ರವಾರದಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ರಾಹುಲ್ ಗಾಂಧಿ ಅವರೂ ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ಭಾಗವಹಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...