ಎಕ್ಸಿಟ್ ಪೋಲ್‌ಗೂ ಮುನ್ನ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವುದನ್ನು ಬಹಿರಂಗಗೊಳಿಸಿ: ಅಮಿತ್ ಶಾಗೆ ಕಾಂಗ್ರೆಸ್ ಆಗ್ರಹ

Date:

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಾದ ದೊಡ್ಡ ಕುಸಿತದ ಹಿಂದೆ ದೊಡ್ಡ ಹಗರಣದ ಕಾರಣವಿದೆ ಎಂದು ನಿನ್ನೆಯಷ್ಟೆ(ಜೂ.06) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಹಗರಣದಿಂದ ಹೂಡಿಕೆದಾರರ 30 ಲಕ್ಷ ಕೋಟಿ ರೂ. ನಷ್ಟಕ್ಕೆ ಕಾರಣವಾಗಿದೆ. ನರೇಂದ್ರ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ನೇರವಾಗಿ ಭಾಗಿಯಾಗಿದ್ದು,ಇದರ ಬಗ್ಗೆ ಜಂಟಿ ಸದನ ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದರು.

- Advertisement -

ಈಗ ಇದೇ ಷೇರು ಹಗರಣಕ್ಕೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆ ನಂತರ ಬಿಜೆಪಿ ನಾಯಕ ಅಮಿತ್‌ ಶಾ ಹೂಡಿಕೆ ಮಾಡಿ ನಂತರ ಫಲಿತಾಂಶಕ್ಕೂ ಒಂದು ದಿನ ಮುನ್ನ ತನ್ನ ಷೇರುಗಳನ್ನು ಮಾರಾಟ ಮಾಡಿರುವ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಕೇರಳ ಕಾಂಗ್ರೆಸ್ ಸವಾಲೆಸೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಬಗ್ಗೆ ಅಮಿತ್‌ ಶಾ ಚುನಾವಣಾ ಸಮಯದಲ್ಲಿ ಸಲ್ಲಿಸಿರುವ ದಾಖಲೆಗಳನ್ನು ಕೇರಳ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಷೇರು ಮಾರುಕಟ್ಟೆ ಹಗರಣದ ಬಗ್ಗೆ ಸವಾಲು ಹಾಕುತ್ತೇವೆ. ಇದು ಅಮಿತ್‌ ಶಾ ಅವರು ತಮ್ಮ ಅಫಿಡೆವಿಟ್‌ನಲ್ಲಿ ಘೋಷಿಸಿರುವ ಷೇರುಗಳ ಪಟ್ಟಿಗಳ ಒಟ್ಟು ಪಟ್ಟಿ. ಇದನ್ನು ತಿರುಚದಿದ್ದರೆ ಅಥವಾ ಆಂತರಿಕ ಮಾರಾಟ ನಡೆಯದಿದ್ದರೆ ನಾವು ಕೆಲವು ಪ್ರಶ್ನೆಗಳೊಂದಿಗೆ ಪರಿಶೀಲನೆಗೊಳಪಡಿಸಬೇಕಾಗಿದೆ.

ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗುವುದಕ್ಕೂ ಮುನ್ನ ಅಮಿತ್‌ ಶಾ ಅವರು ಎಷ್ಟು ಷೇರುಗಳನ್ನು ಖರೀದಿಸಿದ್ದರು? ಎಕ್ಸಿಟ್‌ ಪೋಲ್‌ ಪ್ರಕಟವಾದ ನಂತರ ಜೂನ್‌ 3 ರಂದು ಎಷ್ಟನ್ನು ಮಾರಾಟ ಮಾಡಿದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಅದೇ ರೀತಿ ಪಿಯೂಷ್ ಗೋಯಲ್‌, ಇತರ ಸಚಿವರು, ಸಮೀಕ್ಷೆ ಪ್ರಕಟಿಸಿದವರು ಹಾಗೂ ಪತ್ರಕರ್ತರು ಒಳಗೊಂಡು ಈ ಹಗರಣವನ್ನು ಬಯಲಿಗೆಳಯಬೇಕಾಗಿದೆ. ಪೋಸ್ಟ್‌ನಲ್ಲಿ ಇರುವಂತ ಕಂಪನಿಗಳ ಹೆಸರುಗಳು ಅಮಿತ್‌ ಶಾ ಹಾಗೂ ಅವರ ಪತ್ನಿಯವರು ಷೇರು ಹೂಡಿಕೆ ಮಾಡಿರುವ ಕಂಪನಿಗಳ ಪಟ್ಟಿಯಾಗಿದೆ.

ಈ ದಾಖಲೆಯ ಹಿನ್ನೆಲೆಯಲ್ಲಿ ನಾವು ಅಮಿತ್‌ ಶಾ ಅವರಿಗೆ ಬಹಿರಂಗ ಸವಾಲು ಹಾಕುತ್ತೇವೆ. ಕಳೆದ ಒಂದು ತಿಂಗಳಲ್ಲಿ ನೀವು ಚಟುವಟಿಕೆ ನಡೆಸಿದ ಮಾರುಕಟ್ಟೆ ವಹಿವಾಟುಗಳನ್ನು ಸಾರ್ವಜನಿಕಗೊಳಿಸಿ ತಾವು ಸ್ವಚ್ಛವಾಗಿರುವುದಾಗಿ ತಿಳಿಸಿ ಎಂದು ಕೇರಳ ಕಾಂಗ್ರೆಸ್ ಸವಾಲೆಸೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ಕೇರಳ ಕಾಂಗ್ರೆಸ್ ಪೋಸ್ಟ್‌ ಮಾಡಿರುವ ಅಮಿತ್‌ ಶಾ ಅವರ ಚುನಾವಣಾ ಅಫಿಡೆವಿಟ್‌ನ ದಾಖಲೆಗಳಲ್ಲಿ ನೂರಾರು ಕಂಪನಿಗಳಿಗೆ ಹೂಡಿಕೆ ಮಾಡಿರುವ ಮಾಹಿತಿಯಿದೆ. ಇದರಿಂದ ಬಿಜೆಪಿ ನಾಯಕರು ನೂರಾರು ಕೋಟಿಗೂ ಅಧಿಕ ಲಾಭ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜೂನ್ 1 ರಂದು ನಡೆದ ಮತದಾನೋತ್ತರ ಸಮೀಕ್ಷೆ ನಂತರ ಷೇರು ಮಾರುಕಟ್ಟೆಗಳು ಏರಿಕೆ ಕಂಡಿದ್ದವು. ಮೂರು ದಿನಗಳ ನಂತರ ಕುಸಿತದ ಷೇರು ಮಾರುಕಟ್ಟೆ ಸೂಚ್ಯಂಕ ತಲೆಕೆಳಗಾಗಿತ್ತು. ಚುನಾವಣೋತ್ತರ ಸಮೀಕ್ಷೆಗಳದ್ದು ಸರಿಯಾಗಿಲ್ಲ ಎಂಬ ಮಾಹಿತಿ ಬಿಜೆಪಿ ನಾಯಕರಿಗೆ ಇತ್ತು ಎಂದು ರಾಹುಲ್ ಆರೋಪಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...