ಸಕ್ಕರೆ ದರ ಏರಿಕೆ ವಿರುದ್ಧ ಕಾಂಗ್ರೆಸ್ ಆಕ್ರೋಶ: ಬಿಜೆಪಿ ಸರ್ಕಾರದ ವಿರುದ್ಧ ‘ಚೀನಿ ಸತ್ಯಾಗ್ರಹ’

Date:

ಛತ್ತೀಸ್‌ಗಢದಲ್ಲಿ ಸಕ್ಕರೆ ದರಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು ಇದನ್ನು ವಿರೋಧಿಸಿ ರಾಜ್ಯಾದ್ಯಂತ ಬೃಹತ್ ‘ಚೀನಿ ಸತ್ಯಾಗ್ರಹ’ (ಸಕ್ಕರೆ ಸತ್ಯಾಗ್ರಹ) ಚಳವಳಿ ನಡೆಸಲು ಪ್ರದೇಶ ಕಾಂಗ್ರೆಸ್ ಸಮಿತಿ (PCC) ತೀರ್ಮಾನಿಸಿದೆ.

- Advertisement -

ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದೀಪಕ್ ಬೈಜ್ ಅವರು ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಹಾತ್ಮ ಗಾಂಧೀಜಿಯವರ ಐತಿಹಾಸಿಕ ‘ಉಪ್ಪಿನ ಸತ್ಯಾಗ್ರಹ’ದ ಮಾದರಿಯಲ್ಲೇ ಈ ಸಕ್ಕರೆ ದರ ಏರಿಕೆ ವಿರುದ್ಧ ಸತ್ಯಾಗ್ರಹವನ್ನು ಆಯೋಜಿಸಲಾಗುವುದು ಎಂದು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಜಾರ್ಖಂಡ್‌ ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ ಅಂತ್ಯ: ಸರ್ಕಾರದ ಸಂಧಾನ ಸ್ವಾಗತಿಸಿದ ರಾಹುಲ್ ಗಾಂಧಿ

ಕಬ್ಬಿನ ಬೆಳೆಯ ಬಹುಪಾಲು ಇಥನಾಲ್ ಉತ್ಪಾದನೆಗೆ ಬಳಕೆಯಾಗುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಸಕ್ಕರೆಯ ಕೊರತೆ ಉಂಟಾಗಿ, ದರಗಳು ಗಗನಕ್ಕೇರುತ್ತಿವೆ ಎಂದು ದೀಪಕ್ ಬೈಜ್ ಆರೋಪಿಸಿದ್ದಾರೆ.

ಮುಂಬರುವ ತಿಂಗಳುಗಳಲ್ಲಿ ಸಕ್ಕರೆ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು 3-4 ತಿಂಗಳ ಮುಂಚಿತವಾಗಿಯೇ ಸರ್ಕಾರಕ್ಕೆ ಮಾಹಿತಿಯಿದ್ದರೂ ಅದನ್ನು ತಡೆಯಲು ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿನಬಳಕೆಯ ಅತ್ಯಗತ್ಯ ವಸ್ತುವಾದ ಸಕ್ಕರೆ ಬೆಲೆ ಏರಿಕೆಯಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆಯವ್ಯಯ ಸಂಪೂರ್ಣವಾಗಿ ತಲೆಕೆಳಗಾಗಿದೆ. ‘ಡಬಲ್ ಎಂಜಿನ್’ ಬಿಜೆಪಿ ಸರ್ಕಾರವು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ತೀವ್ರವಾಗಿ ವಿಫಲವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಶೀಘ್ರದಲ್ಲೇ ಈ ‘ಚೀನಿ ಸತ್ಯಾಗ್ರಹ’ದ ದಿನಾಂಕ ಹಾಗೂ ಹೋರಾಟದ ಹಂತಗಳನ್ನು ಅಧಿಕೃತವಾಗಿ ಪ್ರಕಟಿಸಲಿದ್ದು, ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ತೀವ್ರಗೊಳಿಸಲು ಸಜ್ಜಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...