ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

Date:

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ ನಿವಾಸದ ಎದುರು ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಸಿಇಸಿ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಮನೆಯ ಮುಖ್ಯ ಗೇಟ್‌ ಹಾಗೂ ಗೋಡೆ ಮೇಲೆ ಸ್ಪ್ರೇ ಪೇಂಟ್‌ನಿಂದ ಆಕ್ಷೇಪಾರ್ಹ ಬರಹಗಳನ್ನು ಬರೆದಿದ್ದಾರೆ.

- Advertisement -

ಕಾಂಗ್ರೆಸ್‌ ಹಾಗೂ ಅದರ ಅಂಗ ಸಂಘಟನೆಗಳ ಕಾರ್ಯಕರ್ತರು ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಗ್ಯಾನೇಶ್‌ ಕುಮಾರ್‌ ಅವರ ನಿವಾಸದ ಮುಂದೆ ಜಮಾಯಿಸಿದ್ದರು. ಈ ವೇಳೆ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಮನೆಯ ಹೊರಭಾಗದಲ್ಲಿ ಸ್ಟಿಕ್ಕರ್‌ಗಳನ್ನು ಅಂಟಿಸಿ, ಕರಪತ್ರಗಳನ್ನೂ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಪ್ರತಿಭಟನಾಕಾರರು ಮನೆಯ ಮುಖ್ಯ ಗೇಟ್‌ ಮತ್ತು ಗೋಡೆಯ ಮೇಲೆ ಹಿಂದಿಯಲ್ಲಿ ‘ಗ್ಯಾನೇಶ್‌ ಗದ್ದಾರ್‌, ಗ್ಯಾನೇಶ್‌ ಚೋರ್‌’ (ದ್ರೋಹಿ, ಕಳ್ಳ ಗ್ಯಾನೇಶ) ಎಂದು ಸ್ಪ್ರೇ ಪೇಂಟ್‌ನಿಂದ ಬರೆದಿದ್ದಾರೆ. ಇದರ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ಭಾರತೀಯ ಯುವ ಕಾಂಗ್ರೆಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಪ್ರತಿಭಟನೆಯ ಕುರಿತು ಪೋಸ್ಟ್‌ ಮಾಡಿದ್ದು, ಆಗ್ರಾದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗ್ಯಾನೇಶ್‌ ಕುಮಾರ್‌ ಅವರ ಮನೆಗೆ ಮಸಿ ಬಳಿದಿದ್ದಾರೆ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಗ್ಯಾನೇಶ್‌ ಕುಮಾರ್‌ ಅವರ ಸಹಕಾರದಿಂದ ದೇಶದ ವಿವಿಧೆಡೆ ಚುನಾವಣೆಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿರುವ ಯುವ ಕಾಂಗ್ರೆಸ್‌, ಗ್ಯಾನೇಶ್‌ ಕುಮಾರ್‌ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

1988ರ ಬ್ಯಾಚ್‌ನ ಕೇರಳ ಕೇಡರ್‌ ಐಎಎಸ್‌ ಅಧಿಕಾರಿಯಾಗಿರುವ ಗ್ಯಾನೇಶ್‌ ಕುಮಾರ್‌, 2024ರ ಮಾರ್ಚ್‌ 15ರಂದು ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅದಕ್ಕೂ ಮೊದಲು 2024ರ ಜನವರಿ 31ರಂದು ಅವರು ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದರು. ನಂತರ 2025ರ ಫೆಬ್ರವರಿ 19ರಂದು ಭಾರತದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಗ್ಯಾನೇಶ್‌ ಕುಮಾರ್‌ ಅಧಿಕಾರ ವಹಿಸಿಕೊಂಡರು.

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಕಾಂಗ್ರೆಸ್‌ ಮತ್ತು ಚುನಾವಣಾ ಆಯೋಗದ ನಡುವಿನ ಸಂಘರ್ಷ ತೀವ್ರಗೊಂಡಿರುವ ಸಂದರ್ಭದಲ್ಲೇ ಈ ಪ್ರತಿಭಟನೆ ನಡೆದಿದೆ.

ಕಾಂಗ್ರೆಸ್‌ ಉತ್ತರ ಪ್ರದೇಶ, ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬುದು ಕಾಂಗ್ರೆಸ್‌ನ ಆರೋಪ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಇಸಿ ಗ್ಯಾನೇಶ್‌ ಕುಮಾರ್‌ ಅವರನ್ನು ನಿರಂತರವಾಗಿ ಟೀಕಿಸುತ್ತಿದ್ದು, ಅವರು ಅಸಂವಿಧಾನಿಕ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇಂತಹ ಕ್ರಮಗಳನ್ನು ಅವರು ‘ದೇಶದ್ರೋಹ’ ಎಂದು ಕೂಡ ಬಣ್ಣಿಸಿದ್ದಾರೆ.

ಇದನ್ನೂ ಓದಿ: SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

ಇಂಡಿಯನ್‌ ಎಕ್ಸ್‌ಪ್ರೆಸ್‌ ಪ್ರಕಟಿಸಿದ ತನಿಖಾ ವರದಿಯೊಂದರ ಬಳಿಕ ಚುನಾವಣಾ ಆಯೋಗದ ವಿರುದ್ಧದ ಪ್ರತಿಪಕ್ಷಗಳ ಟೀಕೆ ಮತ್ತಷ್ಟು ತೀವ್ರಗೊಂಡಿದೆ. ವರದಿ ಪ್ರಕಾರ, ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು 10 ತಿಂಗಳ ಅವಧಿಯಲ್ಲಿ ಆಯೋಗದ ನಿರ್ಧಾರಗಳ ಕುರಿತು 14 ಬಾರಿ ಔಪಚಾರಿಕ ಆಕ್ಷೇಪಗಳನ್ನು ದಾಖಲಿಸಿದ್ದರು. ಮತದಾರರ ನೋಂದಣಿ ನಮೂನೆಗಳಲ್ಲಿ ಮಾಡಲಾದ ಕೆಲವು ಬದಲಾವಣೆಗಳನ್ನು ಅವರು ‘ಅನಧಿಕೃತ/ಕಾನೂನುಬಾಹಿರ’ ಎಂದು ಪ್ರಶ್ನಿಸಿದ್ದರು ಎಂದು ವರದಿ ಹೇಳಿದೆ. ಈ ವರದಿ ಬಳಿಕ ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪ್ರತಿಪಕ್ಷಗಳು ಚುನಾವಣಾ ಆಯೋಗ ಮತ್ತು ಬಿಜೆಪಿಯ ವಿರುದ್ಧ ಟೀಕೆ ತೀವ್ರಗೊಳಿಸಿವೆ.

ಇತ್ತ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಚುನಾವಣಾ ಆಯೋಗ ಹಾಗೂ ಎಸ್‌ಐಆರ್‌ ವಿರುದ್ಧ ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಗಳನ್ನು ಟೀಕಿಸಿದ್ದಾರೆ. ರಾಜಕೀಯ ಹಿತಾಸಕ್ತಿಗಾಗಿ ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳು ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಯೋಗಿ ಆರೋಪಿಸಿದ್ದಾರೆ. ಚುನಾವಣಾ ಆಯೋಗ ಮತ್ತು ಎಸ್‌ಐಆರ್‌ ಕುರಿತು ಮಾಡಿರುವ ಟೀಕೆಗಳಿಗೆ ಅವರು ದೇಶದ ಜನರ ಬಳಿ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ – ಪತ್ರಿಕಾಧರ್ಮ ಅಡವಿಟ್ಟ ಮಾಧ್ಯಮಗಳು

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ...

ಬೀದರ್‌ | ಜ್ಞಾನೇಶಕುಮಾರ ವಜಾಗೊಳಿಸಿ, ಬಂಧಿಸಲು ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶಕುಮಾರ ವಜಾಗೊಳಿಸಿ ಬಂಧಿಸಬೇಕೆಂದು ಆಗ್ರಹಿಸಿ...