4 ರಾಜ್ಯಗಳಲ್ಲಿ ಬಿಜೆಪಿಗಿಂತ ಕಾಂಗ್ರೆಸ್‌ಗೆ ಹೆಚ್ಚು ಮತ: ‘ಕೈ’ ಪಕ್ಷದ ಮೇಲೆ ಜನರಿಗೆ ಹೆಚ್ಚು ನಂಬಿಕೆ

Date:

ಉತ್ತರದ ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್ ಸೋತಿದ್ದರೂ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸರ್ಕಾರ ರಚಿಸಲು ಸಜ್ಜಾಗಿರುವ ಬಿಜೆಪಿಗಿಂತ ಪಕ್ಷವು 9.44 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

- Advertisement -

ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಹರಿಪ್ರಸಾದ್, ಮತದಾರರು ಪಕ್ಷವನ್ನು ಅಧಿಕಾರಕ್ಕೆ ತರಲಿಲ್ಲ, ಆದರೆ ಬಿಜೆಪಿಗಿಂತ ಹೆಚ್ಚು ಮತಗಳನ್ನು ನೀಡುವ ಮೂಲಕ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಚುನಾವಣೆಯಲ್ಲಿ ನಾವು ಅಧಿಕಾರದಿಂದ ದೂರ ಇದ್ದೇವೆ, ಆದರೆ ಜನರ ನಂಬಿಕೆ ಮತ್ತು ಪ್ರೀತಿಯಿಂದಲ್ಲ. ನಮ್ಮ ಪಕ್ಷಕ್ಕೆ ಜನರು ಅಧಿಕಾರ ನೀಡದೆ ಇರಬಹುದು, ಆದ್ರೆ ಮನದಾಳದಿಂದ ಮತ ನೀಡಿದ್ದಾರೆ. ಅವರಿಗೆ ತಲೆಬಾಗಿದ್ದೇವೆ, ಕೃತಜ್ಞರಾಗಿದ್ದೇವೆ ಎಂದು ತಿಳಿಸಿದ್ದಾರೆ.

ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ 49,077,907 ಮತಗಳನ್ನು ಗಳಿಸಿದರೆ, ಬಿಜೆಪಿ 48,133,463 ಮತಗಳನ್ನು ಗಳಿಸಿದೆ. ಬಿಜೆಪಿಯ ರಾಜಕೀಯ ಧ್ರುವೀಕರಣ ಮತ್ತು ದ್ವೇಷದಿಂದ ಕಾಂಗ್ರೆಸ್ ಸೋತಿದೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

“ನಾಲ್ಕು ರಾಜ್ಯಗಳಲ್ಲಿ ಅಧಿಕಾರದಲ್ಲಿಲ್ಲದಿದ್ದರೂ, ಸಾರ್ವಜನಿಕರ ಕುಂದುಕೊರತೆಗಳಿಗೆ ಪಕ್ಷ ಸ್ಪಂದಿಸುತ್ತದೆ ಮತ್ತು ಬಿಜೆಪಿಯು ಪ್ರಚಾರ ಮಾಡುತ್ತಿರುವ ಕೋಮುವಾದಿ ರಾಜಕಾರಣದ ವಿರುದ್ಧ ಹೋರಾಡುತ್ತದೆ” ಎಂದು ಅವರು ಹೇಳಿದರು.

“ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಶೇ 46.27, ಕಾಂಗ್ರೆಸ್‌ಗೆ ಶೇ. 42.23, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಶೇ. 48.55, ನಮ್ಮ ಪಕ್ಷಕ್ಕೆ ಶೇ. 40.40, ರಾಜಸ್ಥಾನದಲ್ಲಿ ಶೇ. 41.69 ಕಾಂಗ್ರೆಸ್‌ಗೆ ಶೇ. 39.53 ಮತ ಬಂದಿದೆ. ಬಹುತೇಕ ರಾಜ್ಯಗಳಲ್ಲಿ ಬಿಜೆಪಿಯನ್ನು ಸರಾಸರಿ ಶೇ 50ರಷ್ಟು ಮತದಾರರು ನಿರಾಕರಿಸಿರುವುದು ಸ್ಪಷ್ಟ. ನಾವು ಅಧಿಕಾರದಿಂದ ದೂರ ಇದ್ದರೂ, ಜನರ ಬದುಕು ಬವಣೆಗಳ ಬಗ್ಗೆ ಧ್ವನಿಯಾಗುತ್ತೇವೆ. ದ್ವೇಷ ರಾಜಕೀಯದ ವಿರುದ್ಧ ಪ್ರೀತಿ ವಿಶ್ವಾಸದ ರಾಜಕೀಯ ಮುಂದುವರೆಸುತ್ತೇವೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಮತ್ತೆ ಭಾರತವನ್ನು ಒಗ್ಗೂಡಿಸುತ್ತೇವೆ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; NSUIನಿಂದ ವಿನೂತನ ‘ಜೀವಂತ ಶವ’ ಪ್ರತಿಭಟನೆ

ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ...

ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ನಕಾರ

"ಸಂಸ್ಕೃತಿಯ ರಕ್ಷಣೆಯು ಸಂವಿಧಾನದಿಂದ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕಾಗಿದೆ" ಎಂದು ಸುಪ್ರೀಂ ಕೋರ್ಟ್...