ಮಹಿಳಾ ಮೀಸಲಾತಿ | ಯುಟರ್ನ್ ಹೊಡೆದ ಪಿಎಂ ಮೋದಿ ಕ್ಷಮೆಯಾಚಿಸಲಿ: ಕಾಂಗ್ರೆಸ್ ಒತ್ತಾಯ

Date:

ಮಹಿಳಾ ಮೀಸಲಾತಿ ಕಾನೂನು ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ. ಇದರ ಹಿಂದೆ ಕೇಂದ್ರ ಸರ್ಕಾರದ ಗಂಭೀರ ವೈಫಲ್ಯಗಳು ಮತ್ತು ವಿದೇಶಾಂಗ ನೀತಿಯಲ್ಲಿನ ತೀವ್ರ ಹಿನ್ನಡೆಗಳನ್ನು ಮುಚ್ಚಿ ಹಾಕುವ ಉದ್ದೇಶವಿದೆ. ತಮ್ಮ ಲಾಭಕ್ಕಾಗಿ ಮಹಿಳಾ ಮೀಸಲಾತಿ ವಿಚಾರದಲ್ಲಿ ಯುಟರ್ನ್ ಹೊಡೆದ ಪಿಎಂ ಮೋದಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

- Advertisement -

ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “2029ರಿಂದ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಜಾರಿಯಾಗುವ ಮಹಿಳಾ ಮೀಸಲಾತಿಯ ಏಕೈಕ ಪ್ರತಿಪಾದಕ ತಾವು ಎಂದು ತಮ್ಮನ್ನು ಬಿಂಬಿಸಿಕೊಳ್ಳಲು ಪ್ರಧಾನಿಯವರು ಮಾಧ್ಯಮಗಳಲ್ಲಿ ಲೇಖನಗಳನ್ನು ಬರೆಯಲು ಪ್ರಾರಂಭಿಸಿದ್ದಾರೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ

“ವಾಸ್ತವವಾಗಿ ಅವರು ಭಾರತದ ಮಹಿಳೆಯರ ಕ್ಷಮೆಯಾಚಿಸಬೇಕು. 2023ರಲ್ಲಿ ನಾರಿ ಶಕ್ತಿ ವಂದನ ಆಡಳಿತ, 2023 ಅನ್ನು ಸಂಸತ್ತು ಸರ್ವಾನುಮತದಿಂದ ಅಂಗೀಕರಿಸಿತು. ಆ ಸಂದರ್ಭದಲ್ಲಿ ಕಾಂಗ್ರೆಸ್ 2024ರಿಂದಲೇ ಈ ಕಾನೂನು ಜಾರಿಗೆ ತರಬೇಕೆಂದು ಒತ್ತಾಯಿಸಿತ್ತು. ಆದರೆ ಇದಕ್ಕೆ ಪ್ರಧಾನಿ ಒಪ್ಪಲಿಲ್ಲ. ಹಲವು ವರ್ಷಗಳ ಕಾಲ ವಿಳಂಬ ಮಾಡಿದರು. ಜನಗಣತಿ ಮತ್ತು ಕ್ಷೇತ್ರ ಮರುವಿಂಗಡನೆ ನಡೆಯುವವರೆಗೂ ಕಾಯುವ ಪ್ರಸ್ತಾಪ ಮಾಡಿದರು” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“30 ತಿಂಗಳ ನಂತರ, ಚುನಾವಣಾ ಆಯೋಗವು ಕೇಂದ್ರ ಗೃಹ ಸಚಿವಾಲಯದ ಅಧೀನ ಕಚೇರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಎದುರಿಸುತ್ತಿರುವ ಸಾಧ್ಯತೆ ಎದುರಾದಾಗ ಪ್ರಧಾನಿಯವರು ತಮ್ಮ ಮನಸ್ಸನ್ನು ಬದಲಾಯಿಸಿದ್ದಾರೆ. ಜನಗಣತಿಯನ್ನು ಮರೆತು ಜನಗಣತಿ ಆಧಾರಿತ ಕ್ಷೇತ್ರ ವಿಂಗಡಣೆಯನ್ನು ಮರೆತುಬಿಡಬೇಕೆಂದು ಪ್ರಧಾನಿ ಬಯಸುತ್ತಾರೆ. ಅದಕ್ಕೆ ನೀಡಿದ ಕಾರಣ ಜನಗಣತಿ ತಡವಾಗಬಹುದು ಎಂಬುದು. ಆದರೆ 2027ರ ವೇಳೆಗೆ ಜನಗಣತಿ ಸಂಪೂರ್ಣವಾಗುತ್ತದೆ ಎಂದು ಅವರ ಜನಗಣತಿ ರಿಜಿಸ್ಟ್ರಾರ್ ಸ್ಪಷ್ಟಪಡಿಸಿದೆ” ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಸುಳ್ಳು ಮತ್ತು ದ್ವಂದ್ವಗಳನ್ನು ಒಳಗೊಂಡ ಹೇಳಿಕೆ ನೀಡುತ್ತಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮಹಿಳೆಯರು ಬಿಜೆಪಿಗೆ ಸೇರುತ್ತಾರೆ ಎಂಬ ಭರವಸೆಯೊಂದಿಗೆ ಪ್ರಧಾನಿ ಮೋದಿ ಈ ರೀತಿ ದಿಢೀರ್ ಆಗಿ ಮಹಿಳಾ ಮೀಸಲಾತಿಯನ್ನು ಮುನ್ನೆಲೆಗೆ ತಂದಿದ್ದಾರೆ. ಈ ರಾಜ್ಯಗಳಲ್ಲಿ ಪ್ರಚಾರಕ್ಕೆ ಬಿಜೆಪಿಗೆ ಬೇರೆ ವಿಷಯವೇ ಇಲ್ಲ” ಎಂದು ಕಾಂಗ್ರೆಸ್ ನಾಯಕ ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಿಳಾ ಮೀಸಲಾತಿ | ಬಿಜೆಪಿಯಿಂದ ಹೊಸ ಮೋಸದ ಆಟ: ವಿ ಎಸ್ ಉಗ್ರಪ್ಪ ವಾಗ್ದಾಳಿ

“ಇದು ಮೋದಿ ಸರ್ಕಾರದ ಯು-ಟರ್ನ್ ಆಗಿದೆ. ವಿಪಕ್ಷಗಳೊಂದಿಗೆ ಜತೆಯಾಗಿ ಕೆಲಸ ಮಾಡಲು ಕೇಂದ್ರಕ್ಕೆ ಇಷ್ಟವಿಲ್ಲ. ಸಂಪೂರ್ಣ ಯೋಜನೆಯ ಕೊರತೆಯನ್ನೂ ಇದು ಬಹಿರಂಗಪಡಿಸುತ್ತದೆ. ಆದರೂ ಪ್ರಧಾನಿ ಮೋದಿ ಅವರು ಈಗಾಗಲೇ ಯು-ಟರ್ನ್‌ಗೆ ಹೆಸರುವಾಸಿಯಾಗಿದ್ದಾರೆ. ಅವರ ಬೂಟಾಟಿಕೆ ಮತ್ತು ವಂಚನೆಗೆ ಯಾವುದೇ ಮಿತಿಯಿಲ್ಲದಾಗಿದೆ. ಆಡಳಿತದಲ್ಲಿನ ಅವರ ಬೃಹತ್ ವೈಫಲ್ಯಗಳನ್ನು ಮತ್ತು ವಿದೇಶಾಂಗ ನೀತಿಗೆ ತೀವ್ರ ಹಿನ್ನಡೆಯಾಗಿರುವುದನ್ನು ಮುಚ್ಚಿಹಾಕಲು ಈ ರೀತಿ ಮಾಡಲಾಗುತ್ತಿದೆ” ಎಂದು ದೂರಿದ್ದಾರೆ.

2023ರಲ್ಲಿ ಅಂಗೀಕರಿಸಲಾದ ನಾರಿ ಶಕ್ತಿ ವಂದನ ಅಧಿನಿಯಂ, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ಒದಗಿಸುತ್ತದೆ. ಆದಾಗ್ಯೂ, ಇದರ ಅನುಷ್ಠಾನವು 2027ರ ಜನಗಣತಿಯ ಮತ್ತು ಕ್ಷೇತ್ರ ಮರು ವಿಂಗಡನೆ ಮೇಲೆ ಅವಲಂಭಿಸಿದೆ. ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 543 ರಿಂದ 816ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. 273 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲು, ಜೊತೆಗೆ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಅನುಪಾತದ ಆಧಾರದ ಮೇಲೆ ಮೀಸಲಾತಿ ನೀಡುವ ಪ್ರಸ್ತಾಪವಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಜಂತರ್ ಮಂತರ್ ಪ್ರತಿಭಟನಾ ಸ್ಥಳ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ...