ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ಕಾಂಗ್ರೆಸ್: 18 ಪೊಲೀಸರ ಅಮಾನತು, DCPಗಳಿಗೆ ಶೋಕಾಸ್ ನೋಟಿಸ್!

Date:

ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರ ಬೆಂಗಾವಲು ವಾಹನಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ತೋರಿ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯ ಬೆನ್ನಲ್ಲೇ ವಿಐಪಿ ಭದ್ರತೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ 18 ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪ ಪೊಲೀಸ್ ಆಯುಕ್ತರಿಗೆ (DCP) ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

- Advertisement -

ಗುರುಗ್ರಾಮದಲ್ಲಿ ಜಿಲ್ಲಾ ಕುಂದುಕೊರತೆ ಪರಿಹಾರ ಸಮಿತಿ ಸಭೆ ಮುಗಿಸಿ ಗುರುಗ್ರಾಮ ವಿಶ್ವವಿದ್ಯಾಲಯದ ‘ಚೌಪಾಲ್’ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿಗಳ ಬೆಂಗಾವಲು ವಾಹನಗಳಿಗೆ ಕಾಂಗ್ರೆಸ್ ಹಾಗೂ NSUI ಕಾರ್ಯಕರ್ತರು ದಿಢೀರನೆ ಕಪ್ಪು ಬಟ್ಟೆಗಳನ್ನು ಪ್ರದರ್ಶಿಸಿ ಸರ್ಕಾರ ವಿರೋಧಿ ಘೋಷಣೆಗಳನ್ನು ಕೂಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿ: ಹಿಮಾಚಲ ಪ್ರದೇಶ: ಕಂಗನಾ ರಣಾವತ್‌ಗೆ ಕಪ್ಪು ಬಾವುಟ ಪ್ರದರ್ಶನ

ಗುರುಗ್ರಾಮ ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ವಿಳಂಬ ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಖಂಡಿಸಿ ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾಧ್ಯಕ್ಷ ವರ್ಧನ್ ಯಾದವ್ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನೂ ನಡೆಸಲಾಗಿತ್ತು.

ವಿಐಪಿ ಭದ್ರತಾ ವ್ಯವಸ್ಥೆಯಲ್ಲಿ ಲೋಪ ಉಂಟಾಗಿದ್ದನ್ನು ಗಂಭೀರವಾಗಿ ಪರಿಗಣಿಸಿದ ಗುರುಗ್ರಾಮ ಪೊಲೀಸ್ ಕಮಿಷನರ್ ಸಿಬಾಶ್ ಕಬೀರಾಜ್ ಅವರು ತಕ್ಷಣವೇ ಶಿಸ್ತು ಕ್ರಮ ಜಾರಿಗೆ ತಂದಿದ್ದಾರೆ. DCP (ಪಶ್ಚಿಮ) ಕರಣ್ ಗೋಯಲ್ ಮತ್ತು DCP (ಕ್ರೈಂ) ಹಿತೇಶ್ ಯಾದವ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಎಸ್‌ಹೆಚ್‌ಒ (SHO) ಬಿಜೇಂದರ್ ಸಿಂಗ್, ವಲಯದ ಭದ್ರತಾ ಉಸ್ತುವಾರಿ ಸೇರಿದಂತೆ ಒಟ್ಟು 18 ಭದ್ರತಾ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಸ್ಥಳೀಯ ಇಂಟೆಲಿಜೆನ್ಸ್ ವಿಭಾಗದ ಉಸ್ತುವಾರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ವಿಐಪಿ ಭದ್ರತೆಗೆ ಅಡ್ಡಿಪಡಿಸಿದ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡಚಣೆ ಉಂಟುಮಾಡಿದ ಆರೋಪದ ಮೇಲೆ ನೀರಜ್ ಯಾದವ್, ಶಿವ್, ನಿಖಿಲ್, ಅನುಜ್, ಹರ್ಕೇಶ್, ಅಮನ್, ರಾಜೀವ್ ಯಾದವ್ ಮತ್ತು ಹರೇಂದ್ರ ಸೇರಿದಂತೆ 8 ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

“ಪ್ರಜಾಸತ್ತಾತ್ಮಕ ಹಾಗೂ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಸರ್ಕಾರ ಗೌರವಿಸುತ್ತದೆ, ಆದರೆ ಪ್ರತಿಭಟನೆಯ ನೆಪದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದು ಅಥವಾ ವಿಐಪಿ ಭದ್ರತೆಯನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ” ಎಂದು ಗುರುಗ್ರಾಮ ಪೊಲೀಸ್ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೈಬೀರಿಯಾ ಗುಹೆಯಲ್ಲಿ ಹಿಮಯುಗದ ರಹಸ್ಯ ಬಯಲು: 4 ಲಕ್ಷ ವರ್ಷಗಳ ಹಿಂದಿನ ಅಜ್ಞಾತ ಜೀವಿ ಪತ್ತೆ!

ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ...

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...