ರಾಷ್ಟ್ರವ್ಯಾಪಿ ‘ವಿದ್ಯಾರ್ಥಿಗಳ ಧ್ವನಿ’ ಅಭಿಯಾನ ವಿಸ್ತರಣೆಗೆ ಕಾಂಗ್ರೆಸ್ ಸಜ್ಜು

Date:

ಪರೀಕ್ಷಾ ಅಕ್ರಮಗಳು, ಹೆಚ್ಚುತ್ತಿರುವ ಶಿಕ್ಷಣ ವೆಚ್ಚಗಳು ಮತ್ತು ದೇಶದ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ವಿಚಾರದಲ್ಲಿ ಧ್ವನಿ ಎತ್ತುವ ನಿಟ್ಟಿನಲ್ಲಿ ಕಾಂಗ್ರೆಸ್ ರಾಷ್ಟ್ರವ್ಯಾಪಿ ‘ವಿದ್ಯಾರ್ಥಿಗಳ ಧ್ವನಿ’ (ಛಾತ್ರೋಂ ಕಿ ಗೂಂಜ್) ಅಭಿಯಾನವನ್ನು ನಡೆಸಲಿದೆ. ಈ ಅಭಿಯಾನದ ಭಾಗವಾಗಿ ಗುರುವಾರದ ದೇಶಾದ್ಯಂತ ಪತ್ರಿಕಾಗೋಷ್ಠಿಗಳನ್ನು ನಡೆಸಲಿದೆ.

- Advertisement -

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಸಂಬಂಧ ಹೇಳಿಕೆ ನೀಡಿದ್ದಾರೆ. ಶಿಕ್ಷಣ ಸುಧಾರಣೆಗಳ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಪ್ರಾರಂಭಿಸುವುದು, ಆಧುನಿಕ, ಎಲ್ಲರನ್ನೂ ಒಳಗೊಂಡ ಶಿಕ್ಷಣ ವ್ಯವಸ್ಥೆಗೆ ಒತ್ತಾಯಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ. 28 ಹಿರಿಯ ಕಾಂಗ್ರೆಸ್ ನಾಯಕರು ಅಭಿಯಾನದ ಭಾಗವಾಗಿ ವಿವಿಧ ನಗರಗಳಲ್ಲಿ ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ ಕೆಲವು ರಾಜ್ಯಗಳ ಮುಖಂಡರು ಪತ್ರಿಕಾಗೋಷ್ಠಿ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಇದನ್ನೂ ಓದಿ: ರಾಜಕೀಯದಿಂದ ಮೇಲೆದ್ದು, ವಿದ್ಯಾರ್ಥಿಗಳ ಮನಗೆದ್ದ ರಾಹುಲ್ – ಕೋಟದಲ್ಲಿ ಬಿಚ್ಚಿಟ್ಟ ಕರಾಳ ದೃಶ್ಯಾವಳಿ!

ಸರ್ಕಾರವು ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸಲು ವಿಫಲವಾಗಿದೆ. ಶಿಕ್ಷಣದ “ಖಾಸಗೀಕರಣ, ಕೇಂದ್ರೀಕರಣ ಮತ್ತು ಸಂಘೀಕರಣ”ದ ಸುತ್ತ ಕೇಂದ್ರೀಕೃತ ನೀತಿಗಳನ್ನು ಅನುಸರಿಸಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿದೆ.

ದೇಶದ ಶಿಕ್ಷಣ ಕ್ಷೇತ್ರವು ನಿರುದ್ಯೋಗ ಮತ್ತು ಉದ್ಯೋಗಾವಕಾಶ ಎರಡರ ಬಿಕ್ಕಟ್ಟನ್ನು ಎದುರಿಸುತ್ತಿದೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬ, ಹೆಚ್ಚಿನ ತರಬೇತಿ ಶುಲ್ಕಗಳು ಮತ್ತು ಗುಣಮಟ್ಟದ ಶಿಕ್ಷಣದ ಪ್ರವೇಶದಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಅಹಮದಾಬಾದ್‌ನ ಸತೇಜ್ ಪಾಟೀಲ್, ಬೆಂಗಳೂರಿನ ವರ್ಷಾ ಗಾಯಕ್ವಾಡ್, ಭೋಪಾಲ್‌ನ ಇಮ್ರಾನ್ ಮಸೂದ್, ಭುವನೇಶ್ವರದ ಪವನ್ ಖೇರಾ, ದೆಹಲಿಯ ಗೌರವ್ ಗೊಗೊಯ್, ಚೆನ್ನೈನ ಪ್ರಿಯಾಂಕ್ ಖರ್ಗೆ, ಕೋಲ್ಕತ್ತಾದ ಸುಪ್ರಿಯಾ ಶ್ರೀನೇಟ್ ಮತ್ತು ಪುಣೆಯ ಕನ್ಹಯ್ಯಾ ಕುಮಾರ್ ಸೇರಿದಂತೆ 28 ನಗರಗಳಲ್ಲಿ ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲು ನಾಯಕರನ್ನು ನಿಯೋಜಿಸಲಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ರಾಜಸ್ಥಾನದ ಕೋಟಾದಿಂದ “ಛಾತ್ರೋಂ ಕಿ ಗೂಂಜ್ ಮಹಾ ರ‍್ಯಾಲಿ” ಮೂಲಕ ಅಭಿಯಾನವನ್ನು ಪ್ರಾರಂಭಿಸಿದ್ದರು. ಈ ಅಭಿಯಾನವನ್ನು ಕಾಂಗ್ರೆಸ್ ಈಗ ವಿಸ್ತರಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...

ವಿಜಯಪುರ | ಯತ್ನಾಳ ಬೆಂಬಲಿಗರಿಂದ 18 ಸಾವಿರ ಆಕ್ಷೇಪಣೆ ಸಲ್ಲಿಕೆ: ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಆಗ್ರಹ

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ; ರೈತ ಚಂ.ಸು ಪಾಟೀಲ್ ಸಾವಯವ ಸಾಧನೆ

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು...