ಸಂವಿಧಾನ ದಿನದಂದು ‘ಮತ ಕಳ್ಳತನ’ ವಿರುದ್ಧ ಕಾಂಗ್ರೆಸ್‌ನಿಂದ ರಾಷ್ಟ್ರವ್ಯಾಪಿ ‘ಸಂವಿಧಾನ ರಕ್ಷಾ ಪಾದಯಾತ್ರೆ’

Date:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು ಮತ್ತು ‘ಮತ ಕಳ್ಳತನ’ ಆರೋಪಗಳನ್ನು ಮುಂದಿಟ್ಟುಕೊಂಡು, ಸಂವಿಧಾನ ದಿನವಾದ ನವೆಂಬರ್ 26ರಂದು ದೇಶಾದ್ಯಂತ ಬೃಹತ್ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರ ಪ್ರದೇಶದ ಲಖನೌದಲ್ಲಿ ನಡೆಯಲಿರುವ ಪ್ರಮುಖ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -

ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, “ಸಂವಿಧಾನವನ್ನು ರಕ್ಷಿಸುವ ನಮ್ಮ ಅಭಿಯಾನದ ಕೇಂದ್ರಬಿಂದುವಾಗಿ ನವೆಂಬರ್ 26ರಂದು ಪ್ರತಿಯೊಂದು ಪ್ರದೇಶ ಕಾಂಗ್ರೆಸ್ ಸಮಿತಿಯು ತಮ್ಮ ರಾಜ್ಯಗಳಲ್ಲಿ ಬೃಹತ್ ‘ಸಂವಿಧಾನ ರಕ್ಷಾ ಪಾದಯಾತ್ರೆ’ ಆಯೋಜಿಸಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ಇದನ್ನೂ ಓದಿ: ಸಂವಿಧಾನ ದಿನ | ಅಂಬೇಡ್ಕರ್ ಸಂವಿಧಾನವನ್ನು ಉಳಿಸಿಕೊಳ್ಳುವುದು ಹೇಗೆ?

“ಪ್ರತಿಯೊಂದು ಪಾದಯಾತ್ರೆಯೂ ಡಾ. ಬಿ.ಆರ್. ಅಂಬೇಡ್ಕರ್ ಅಥವಾ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಆರಂಭವಾಗಲಿದೆ. ಅದಾದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸಾಮೂಹಿಕವಾಗಿ ಸಂವಿಧಾನದ ಪೀಠಿಕೆಯನ್ನುಓದುವ ಮೂಲಕ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಪಾದಯಾತ್ರೆಯ ಜೊತೆಗೆ, ‘ವೋಟ್ ರಕ್ಷಕ್’ ಅಭಿಯಾನದ ಅಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮತಗಟ್ಟೆಗೆ (ಬೂತ್) ಭೇಟಿ ನೀಡಿ, ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರು ಅಳಿಸಲ್ಪಟ್ಟಿರುವ ಅರ್ಹ ಮತದಾರರನ್ನು ಗುರುತಿಸಿ, ಅವರಿಗೆ ಮತ್ತೆ ಮತದಾನದ ಹಕ್ಕು ದೊರಕಿಸಿಕೊಡಲು ನೆರವಾಗಲಿದ್ದಾರೆ ಎಂದು ಹೇಳಿದ್ದಾರೆ.

ಇನ್ನು “ಒಬ್ಬ ನಾಗರಿಕನ ಮತವನ್ನು ಕದ್ದಾಗ, ಸಂವಿಧಾನ ನೀಡಿರುವ ಉಳಿದೆಲ್ಲಾ ಹಕ್ಕುಗಳು ಅರ್ಥಹೀನವಾಗುತ್ತವೆ” ಎಂದು ಹೇಳಿರುವ ಕಾಂಗ್ರೆಸ್ ನಾಯಕ ವೇಣುಗೋಪಾಲ್ ಅವರು, ಮಹದೇವಪುರದಲ್ಲಿನ ನಕಲಿ ಮತದಾರರು, ಆಳಂದ ಕ್ಷೇತ್ರದಲ್ಲಿ ಸಾವಿರಾರು ಮತದಾರರ ಹೆಸರು ಅಳಿಸಲು ನಡೆದ ವ್ಯವಸ್ಥಿತ ಪ್ರಯತ್ನ ಮತ್ತು ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳ ಮತದಾರರ ಪಟ್ಟಿಯ ಅಕ್ರಮಗಳ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಸಮೇತ ಸಾಕ್ಷ್ಯಗಳನ್ನು ದೇಶದ ಮುಂದಿಟ್ಟಿದ್ದಾರೆ. ಆದರೆ ಚುನಾವಣಾ ಆಯೋಗ ಮಾತ್ರ ನಿಷ್ಪಕ್ಷಪಾತ ತನಿಖೆ ಮಾಡದೆ ಆರೋಪಗಳನ್ನು ತಳ್ಳಿಹಾಕುತ್ತಿದೆ ಎಂದೂ ಈ ಸಂದರ್ಭದಲ್ಲೇ ದೂರಿದ್ದಾರೆ.

ಇನ್ನು “ಸಂವಿಧಾನವನ್ನು ಗೌರವಿಸುವ ಪ್ರತಿಯೊಬ್ಬ ನಾಗರಿಕರು, ವಿದ್ಯಾರ್ಥಿಗಳು, ಯುವಜನರು, ರೈತರು, ಕಾರ್ಮಿಕರು, ಮಹಿಳೆಯರು, ದಲಿತ, ಆದಿವಾಸಿ, ಒಬಿಸಿ, ಅಲ್ಪಸಂಖ್ಯಾತ ಸಮುದಾಯಗಳು ಮತ್ತು ನಾಗರಿಕ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಈ ಮೆರವಣಿಗೆಗಳಲ್ಲಿ ಭಾಗಹಿಸಿ. ನವೆಂಬರ್ 26 ಅನ್ನು ಐತಿಹಾಸಿಕ ಸಂಕಲ್ಪದ ದಿನವನ್ನಾಗಿ ಮಾಡಬೇಕಿ” ಎಂದು ಕೆ.ಸಿ. ವೇಣುಗೋಪಾಲ್ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ | ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಪೂರ್ವ ದೆಹಲಿಯ ಪ್ರೀತ್ ವಿಹಾರ್ ಪ್ರದೇಶದ ಕೆಫೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ...

ಭಾರತದ ಮೇಲೆ‌ ಹೊಸ ಸುಂಕ ಹೇರಲು ಟ್ರಂಪ್ ಆಡಳಿತ ಸಿದ್ಧತೆ; ಶೀಘ್ರವೇ ಅಧಿಕೃತ ಘೋಷಣೆ!

ನಾನಾ ರಾಷ್ಟ್ರಗಳು ದೇಶೀಯ ಕೈಗಾರಿಕಾ ಉತ್ಪಾದನೆಗೆ ಸರ್ಕಾರಿ ಸಬ್ಸಿಡಿ ಮತ್ತು ಬೆಂಬಲ...

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...