ಪಂಚ ರಾಜ್ಯಗಳ ವಿಧಾನಸಭಾ ಫಲಿತಾಂಶದ ನಂತರ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಪಕ್ಷದಲ್ಲಿ ಮಹತ್ವದ ಬದಲಾವಣೆಗಳನ್ನು ಕೈಗೊಂಡಿದೆ.
ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಮುಖ ಸಾಂಸ್ಥಿಕ ಪುನರ್ರಚನೆಯಲ್ಲಿ ಉತ್ತರ ಪ್ರದೇಶ ರಾಜ್ಯದ ಉಸ್ತುವಾರಿಯಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಅಲ್ಲಿಂದ ವಿಮುಕ್ತಿಗೊಳಿಸಲಾಗಿದ್ದು, ಸದ್ಯ ಯಾವುದೇ ಹುದ್ದೆ ನೀಡಲಾಗಿಲ್ಲ.
ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಅವರನ್ನು ಛತ್ತೀಸ್‌ಗಢ ರಾಜ್ಯದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಕರ್ನಾಟಕದ ಉಸ್ತುವಾರಿಯಾಗಿದ್ದ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಬದಲಾಯಿಸಲಾಗಿಲ್ಲ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ
ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಪ್ರಿಯಾಂಕಾ ಗಾಂಧಿ ಅವರ ಸ್ಥಾನಕ್ಕೆ ಅವರನ್ನು ನೇಮಿಸಲಾಗಿದೆ.
ಹಿರಿಯ ನಾಯಕ ಮುಕುಲ್ ವಾಸ್ನಿಕ್ ಅವರಿಗೆ ಗುಜರಾತ್ ಉಸ್ತುವಾರಿ ನೀಡಲಾಗಿದೆ. ಜೈರಾಮ್ ರಮೇಶ್ ಅವರನ್ನು ಸಂವಹನದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕೆಸಿ ವೇಣುಗೋಪಾಲ್ ಅವರು ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಅದೇ ಸ್ಥಾನದಲ್ಲಿ ಉಳಿಸಿಕೊಳ್ಳಲಾಗಿದೆ.
ಎಐಸಿಸಿಯ ಖಜಾಂಚಿಯಾಗಿ ಹಿರಿಯ ನಾಯಕ ಅಜಯ್ ಮಾಕನ್ ಮುಂದುವರಿಯಲಿದ್ದಾರೆ. 12 ಪ್ರಧಾನ ಕಾರ್ಯದರ್ಶಿಗಳ ಜೊತೆಗೆ 11 ರಾಜ್ಯ ಉಸ್ತುವಾರಿಗಳನ್ನೂ ಪಕ್ಷ ನೇಮಿಸಿದೆ.