ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ: ಪ್ರಿಯಾಂಕಾಗೆ ಉತ್ತರ ಪ್ರದೇಶದಿಂದ ವಿಮುಕ್ತಿ, ಸಚಿನ್‌ಗೆ ಹೊಸ ಜವಾಬ್ದಾರಿ

Date:

ಪಂಚ ರಾಜ್ಯಗಳ ವಿಧಾನಸಭಾ ಫಲಿತಾಂಶದ ನಂತರ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಪಕ್ಷದಲ್ಲಿ ಮಹತ್ವದ ಬದಲಾವಣೆಗಳನ್ನು ಕೈಗೊಂಡಿದೆ.

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಮುಖ ಸಾಂಸ್ಥಿಕ ಪುನರ್ರಚನೆಯಲ್ಲಿ ಉತ್ತರ ಪ್ರದೇಶ ರಾಜ್ಯದ ಉಸ್ತುವಾರಿಯಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಅಲ್ಲಿಂದ ವಿಮುಕ್ತಿಗೊಳಿಸಲಾಗಿದ್ದು, ಸದ್ಯ ಯಾವುದೇ ಹುದ್ದೆ ನೀಡಲಾಗಿಲ್ಲ.

ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಅವರನ್ನು ಛತ್ತೀಸ್‌ಗಢ ರಾಜ್ಯದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಕರ್ನಾಟಕದ ಉಸ್ತುವಾರಿಯಾಗಿದ್ದ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಬದಲಾಯಿಸಲಾಗಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಪ್ರಿಯಾಂಕಾ ಗಾಂಧಿ ಅವರ ಸ್ಥಾನಕ್ಕೆ ಅವರನ್ನು ನೇಮಿಸಲಾಗಿದೆ.

ಹಿರಿಯ ನಾಯಕ ಮುಕುಲ್ ವಾಸ್ನಿಕ್ ಅವರಿಗೆ ಗುಜರಾತ್ ಉಸ್ತುವಾರಿ ನೀಡಲಾಗಿದೆ. ಜೈರಾಮ್ ರಮೇಶ್ ಅವರನ್ನು ಸಂವಹನದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕೆಸಿ ವೇಣುಗೋಪಾಲ್ ಅವರು ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಅದೇ ಸ್ಥಾನದಲ್ಲಿ ಉಳಿಸಿಕೊಳ್ಳಲಾಗಿದೆ.

ಎಐಸಿಸಿಯ ಖಜಾಂಚಿಯಾಗಿ ಹಿರಿಯ ನಾಯಕ ಅಜಯ್ ಮಾಕನ್ ಮುಂದುವರಿಯಲಿದ್ದಾರೆ. 12 ಪ್ರಧಾನ ಕಾರ್ಯದರ್ಶಿಗಳ ಜೊತೆಗೆ 11 ರಾಜ್ಯ ಉಸ್ತುವಾರಿಗಳನ್ನೂ ಪಕ್ಷ ನೇಮಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೆಎನ್‌ಯು ವಿವಿಯಲ್ಲಿ ಎಡ ಪಂಥೀಯ – ಎಬಿವಿಪಿ ವಿದ್ಯಾರ್ಥಿಗಳ ನಡುವೆ ಗಲಭೆ: ಹಲವರಿಗೆ ಗಾಯ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಂಥೀಯ ಬೆಂಬಲಿತ...

ನ್ಯೂಸ್‌ ಚಾನೆಲ್‌ಗಳಲ್ಲಿ ಕೋಮು ದ್ವೇಷ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌18ಗೆ ದಂಡ; ಆಜ್ ತಕ್‌ಗೆ ಎಚ್ಚರಿಕೆ

ದ್ವೇಷ ಮತ್ತು ಕೋಮು ಸೌಹಾರ್ದತೆ ಕದಡುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ ಟೈಮ್ಸ್‌...

ಪೆಟ್ರೋಲಿಯಂ ಮೇಲಿನ ವಿಂಡ್‌ಫಾಲ್ ತೆರಿಗೆ ಹೆಚ್ಚಳ

ಶುಕ್ರವಾರದಿಂದ ಜಾರಿಗೆ ಬರುವಂತೆ ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲದ ಮೇಲಿನ ವಿಂಡ್‌ಫಾಲ್...

ಗುಜರಾತ್‌ | 2 ವರ್ಷದಿಂದ 3.8 ಲಕ್ಷ ಅರ್ಹ ಶಿಕ್ಷಕರು ನಿರುದ್ಯೋಗಿಗಳಾಗಿದ್ದಾರೆ

ಗುಜರಾತ್‌ನಲ್ಲಿ 2.75 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ) ಉತ್ತೀರ್ಣರಾಗಿದ್ದಾರೆ....