ದೆಹಲಿ ವಿವಿ ಅಧೀನದ ಕಾಲೇಜಿಗೆ ಸಾವರ್ಕರ್ ಹೆಸರು: ಕಾಂಗ್ರೆಸ್ ಆಕ್ರೋಶ

Date:

ದೆಹಲಿ ವಿವಿಯ ಅಧೀನದ ಕಾಲೇಜಿಗೆ ವಿನಾಯಕ ದಾಮೋದರ್ ಸಾವರ್ಕರ್ ಹೆಸರನ್ನು ನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

- Advertisement -

ʼಬ್ರಿಟಿಷರ ಬಳಿ ಕ್ಷಮಾಪಣೆಗೆ ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ವೈಭವೀಕರಿಸುತ್ತಿದೆʼ ಎಂದು ದೆಹಲಿ ವಿವಿಯ ಅಧೀನದ ನಜಾಫ್ ಗಢದ ಕಾಲೇಜಿಗೆ ಸಾವರ್ಕರ್ ಹೆಸರನ್ನು ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಕುರಿತು ರಾಜ್ಯಸಭಾ ಸಂಸದ ನಾಸೀರ್ ಹುಸೇನ್ ಮಾತನಾಡಿದ್ದು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ಲಕ್ಷಿಸಿ, ಬ್ರಿಟಿಷರೊಂದಿಗೆ ಸಹಕರಿಸಿದಾತನನ್ನು ಬಿಜೆಪಿ ಸಮರ್ಥಿಸುತ್ತಿದೆ. ಅನೇಕ ಜನರು ದೇಶಕ್ಕಾಗಿ ಅಪಾರ ಕೊಡುಗೆ ನೀಡಿದ್ದಾರೆ. ಬ್ರಿಟಿಷರಿಗೆ ಕ್ಷಮಾಪಣಾ ಅರ್ಜಿಗಳನ್ನು ಬರೆದು ಅವರಿಂದ ಪಿಂಚಣಿ ಸ್ವೀಕರಿಸಿದವರನ್ನು ಬಿಜೆಪಿ ಸಮರ್ಥಿಸುತ್ತಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ಗೆಲುವನ್ನು ಮಾರ್ಕೆಟಿಂಗ್ ಮಾಡಿಕೊಳ್ಳಬೇಕೇ ಸರ್ಕಾರ?

ಡಿಸೆಂಬರ್ 26ರಂದು ನಿಧನರಾದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಹೆಸರನ್ನು ಹೊಸ ಕಾಲೇಜಿಗೆ ಇಡಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿದೆ. ಈ ಕುರಿತು ಎನ್ ಎಸ್ ಯುಐ ರಾಷ್ಟ್ರೀಯ ಅಧ್ಯಕ್ಷರಾದ ವರುಣ್ ಚೌಧರಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ಕಾಲೇಜಿಗೆ ಮನಮೋಹನ್ ಸಿಂಗ್ ಅವರ ಹೆಸರಿಡುವಂತೆ ಆಗ್ರಹಿಸಿದ್ದಾರೆ.

ಆತ್ಮೀಯ ನರೇಂದ್ರ ಮೋದಿ ಜೀ, ನೀವು ಸಾವರ್ಕರ್ ಅವರ ಹೆಸರಿನಲ್ಲಿ ಕಾಲೇಜಿಗೆ ಶೀಲಾನ್ಯಾಸ ನೆರವೇರಿಸುವಾಗ, ಹೊಸ ಕಾಲೇಜಿಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಹೆಸರನ್ನು ಇಡಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸುತ್ತದೆ. ಅವರು ಹಲವಾರು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರು ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯ್ದೆಯನ್ನು ತಂದರು. ಕೇಂದ್ರೀಯ ವಿಶ್ವವಿದ್ಯಾಲಯಕ್ಕೂ ಅವರ ಹೆಸರನ್ನು ಇಡಬೇಕುʼ ಎಂದು ವರುಣ್ ಚೌಧರಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...