ಚುನಾವಣೆಗೆ ಸ್ಪರ್ಧಿಸಲು ಮಮತಾ ಬ್ಯಾನರ್ಜಿ ಸಹಾಯ ನಮಗೆ ಬೇಡ: ಅಧೀರ್ ರಂಜನ್ ಚೌಧರಿ

Date:

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಧೀರ್ ರಂಜನ್ ಚೌಧರಿ ಮಮತಾ ಅವರನ್ನು ಅವಕಾಶವಾದಿ ಎಂದು ಕರೆದಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಮಮತಾ ಬ್ಯಾನರ್ಜಿ ಸಹಾಯದೊಂದಿಗೆ ನಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ತನ್ನ ಸ್ವಂತ ಬಲದೊಂದಿಗೆ ಹೇಗೆ ಸ್ಪರ್ಧಿಸಬೇಕೆಂದು ಕಾಂಗ್ರೆಸ್‌ಗೆ ಗೊತ್ತಿದೆ. ಬಂಗಾಳದಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಟಿಎಂಸಿ ಅಧಿಕಾರಕ್ಕೆ ಬಂದಿದ್ದು ಎಂಬುದನ್ನು ಮಮತಾ ಬ್ಯಾನರ್ಜಿ ಅವರು ನೆನಪಿನಲ್ಲಿ ಇಟ್ಟುಕೊಳ್ಳಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥರಾಗಿರುವ ಅಧೀರ್ ರಂಜನ್ ಚೌಧರಿ ಇಂಡಿಯಾ ಒಕ್ಕೂಟದ ಮಿತ್ರಪಕ್ಷವಾದ ಟಿಎಂಸಿ ವಿರುದ್ಧ ಜ.20 ರಂದು ಟೀಕೆ ವ್ಯಕ್ತಪಡಿಸಿ, ಈ ಹಿಂದೆ ಟಿಎಂಸಿಯನ್ನು ಸೋಲಿಸಿರುವುದಾಗಿ ತಿಳಿಸಿದ್ದರು. ಈ ಹೇಳಿಕೆಯ ನಂತರ ಮೈತ್ರಿಕೂಟ ಬಿರುಕುಗೊಂಡು ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದ ಎಲ್ಲ 42 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಂಭವವಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ಗೆ ಟಿಎಂಸಿ ಕೇವಲ ಎರಡು ಕ್ಷೇತ್ರ ಹಂಚಿಕೆ ಮಾಡಿದ್ದಕ್ಕೆ ಜನವರಿ ಮೊದಲ ವಾರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದ ಅಧೀರ್ ರಂಜನ್, ನಾವು ಕ್ಷೇತ್ರ ಹಂಚಿಕೆಗಾಗಿ ಭಿಕ್ಷೆ ಬೇಡುತ್ತಿಲ್ಲ ಎಂದು ಹೇಳಿದ್ದರು.

ಟಿಎಂಸಿ ಕಾಂಗ್ರೆಸ್‌ನೊಂದಿಗೆ ಇಂಡಿಯಾ ಒಕ್ಕೂಟದ ಭಾಗವಾಗಿದೆ. 2024ರ ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆಯನ್ನು ನಿರೀಕ್ಷಿಸಲಾಗಿತ್ತು. ಆದರೆ ಇತ್ತೀಚಿನ ಪರಿಸ್ಥಿತಿಗಳನ್ನು ಗಮನಿಸಿದರೆ ಎರಡೂ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಿಸುವ ಸಾಧ್ಯತೆಯಿದೆ.

ಮೈತ್ರಿ ಪಕ್ಷಗಳ ಭಿನ್ನಾಭಿಪ್ರಾಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಮತಾ ಅವರು ತಮಗೆ ತುಂಬಾ ಆಪ್ತರಾಗಿದ್ದು, ಇಂತಹ ಹೇಳಿಕೆಗಳಿಂದ ಯಾವುದೇ ತೊಂದರೆಯುಂಟಾಗುವುದಿಲ್ಲ. ಕೆಲವೊಂದು ಸಂದರ್ಭಗಳಲ್ಲಿ ನಮ್ಮ ನಾಯಕರು ಏನಾದರೂ ಹೇಳಿಕೆಗಳನ್ನು ನೀಡುತ್ತಾರೆ. ಆದರೆ ಇಂತಹ ವಿಷಯಗಳು ಪ್ರಮುಖವಾಗುವುದಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...