ಬಿಹಾರ ಪಾಠದಿಂದ ಎಚ್ಚೆತ್ತ ಕಾಂಗ್ರೆಸ್; ತಿಂಗಳುಗಳ ಮುಂಚೆಯೇ ಉತ್ತರ ಪ್ರದೇಶ ಚುನಾವಣೆಗೆ ಸಿದ್ಧತೆ!

Date:

ಕಳೆದ ವರ್ಷ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲು ಕಂಡ ಕಾಂಗ್ರೆಸ್‌, ಈಗ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. 2027ರಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಲು ಆರಂಭಿಸಿದೆ. ಚುನಾವಣೆಯ ಸಮಯದಲ್ಲಿ ತನ್ನ ಮಿತ್ರಪಕ್ಷವಾಗಿರುವ ಸಮಾಜವಾದಿ ಪಕ್ಷದ (SP) ಜೊತೆ ಹಗ್ಗಜಗ್ಗಾಟಕ್ಕೆ ಇಳಿಯದೆ, ಚುನಾವಣೆ ಘೋಷಣೆಗೂ ಮುನ್ನವೇ ಕ್ಷೇತ್ರ ಹಂಚಿಕೆಯ ಕಸರತ್ತು ಮುಗಿಸಿಕೊಳ್ಳುವ ಚಿಂತನೆ ಕಾಂಗ್ರೆಸ್‌ನಲ್ಲಿ ಇದ್ದಂತಿದೆ. ಪಕ್ಷವು ಸ್ಪರ್ಧಿಸಲು ಯೋಜಿಸುತ್ತಿರುವ ಕ್ಷೇತ್ರಗಳನ್ನು ಮುಂಚಿತವಾಗಿಯೇ ಗುರುತಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

- Advertisement -

ಮೈತ್ರಿಯೊಳಗೆ ತನ್ನ ಪಾಲಿಗೆ ಪ್ರಮುಖವಾಗಿ ಕೇಳಬೇಕಾದ ಕ್ಷೇತ್ರಗಳು ಮತ್ತು ಆ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಗಳನ್ನು ಸಿದ್ಧಪಡಿಸಿ ಸಲ್ಲಿಸುವಂತೆ ತಮ್ಮ ಪದಾಧಿಕಾರಿಗಳಿಗೆ ಕಾಂಗ್ರೆಸ್‌ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ತೀರಾ ವಿಳಂಬವಾಗಿತ್ತು. ಇದು, ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳ ನಡುವಿನ ‘ಸ್ನೇಹಪೂರ್ವಕ ಸ್ಪರ್ಧೆ’ಗೂ ಕಾರಣವಾಗಿತ್ತು. ಇದರಿಂದ, ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳು ಭಾರೀ ನಷ್ಟ ಅನುಭವಿಸಿ, ಚುನಾವಣೆಯನ್ನೇ ಕೈಚೆಲ್ಲಬೇಕಾಗಿ ಬಂದಿತ್ತು. ಬಿಹಾರದ ಅನುಭವವನ್ನು ಕಾಂಗ್ರೆಸ್‌ ನಾಯಕತ್ವವು ಜಾಗರೂಕತೆಯಿಂದ ಅವಲೋಕಿಸಿದೆ. ಬಿಹಾರದಲ್ಲಾದ ತಪ್ಪು ಮತ್ತು ಎಡವಟ್ಟುಗಳು ಉತ್ತರ ಪ್ರದೇಶದಲ್ಲಿ ಮರುಕಳಿಸದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಪಕ್ಷದ ಆಂತರಿಕ ಮೂಲಗಳ ಪ್ರಕಾರ, ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಅವರು ರಾಜ್ಯದ ಆರು ಮಂದಿ ಪಕ್ಷದ ಕಾರ್ಯದರ್ಶಿಗಳಿಗೆ ತಲಾ ಎರಡು ಪ್ರತ್ಯೇಕ ಪಟ್ಟಿಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ. ಇದರಲ್ಲಿ ಮೊದಲನೆಯ ಪಟ್ಟಿಯು ರಾಜ್ಯದ ಒಟ್ಟು 403 ವಿಧಾನಸಭಾ ಕ್ಷೇತ್ರಗಳಿಗೂ ಅನ್ವಯಿಸುವಂತೆ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಒಳಗೊಂಡಿರಲಿದೆ. ಎರಡನೆಯದು, ಪಕ್ಷಕ್ಕೆ ಅತ್ಯಂತ ಬಲಿಷ್ಠವಾದ ಮತ್ತು ಗೆಲುವಿಗೆ ಹೆಚ್ಚು ಅವಕಾಶಗಳಿರುವ 100ರಿಂದ 120 ನಿರ್ದಿಷ್ಟ ಕ್ಷೇತ್ರಗಳನ್ನು ಗುರುತಿಸಲಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಕ್ಷೇತ್ರಗಳನ್ನು ಕಾಂಗ್ರೆಸ್‌ ಆಂತರಿಕವಾಗಿ ಮೂರು ಪ್ರಮುಖ ವಿಭಾಗಗಳಾಗಿ ವರ್ಗೀಕರಿಸಿದೆ. ಅವುಗಳೆಂದರೆ, ‘ಹೆಚ್ಚು ಗೆಲುವಿನ ಸಾಮರ್ಥ್ಯವಿರುವ ಕ್ಷೇತ್ರಗಳು’, ‘ಸಾಧಾರಣ ಅಥವಾ ಅಂಚಿನಲ್ಲಿರುವ ಕ್ಷೇತ್ರಗಳು’ ಹಾಗೂ ‘ದುರ್ಬಲ ಕ್ಷೇತ್ರಗಳು’. ಈ ಪೈಕಿ ಮೊದಲನೇ ವರ್ಗಕ್ಕೆ ಸೇರಿದ, ಅಂದರೆ ಕಾಂಗ್ರೆಸ್ ಅತ್ಯಂತ ಪ್ರಭಾವ ಹೊಂದಿರುವ 100ಕ್ಕೂ ಹೆಚ್ಚು ಕ್ಷೇತ್ರಗಳನ್ನು ಈಗಾಗಲೇ ಗುರುತಿಸಿದೆ. ಎರಡನೇ ವರ್ಗದಲ್ಲಿ ಸುಮಾರು 200 ಮತ್ತು ಎರಡನೇ ವರ್ಗದಲ್ಲಿ 120 ಕ್ಷೇತ್ರಗಳನ್ನು ಗುರುತಿಸಿದೆ ಎಂದು ತಿಳಿದುಬಂದಿದೆ.

“ಪ್ರಸ್ತುತ ಸ್ಥಳೀಯ ಘಟಕಗಳಿಂದ ಹಾಗೂ ಚುನಾವಣಾ ಆಕಾಂಕ್ಷಿಗಳಿಂದ ತಳಮಟ್ಟದ ನಿಖರವಾದ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಪ್ರತಿಯೊಂದು ಕ್ಷೇತ್ರದ ವಾಸ್ತವ ಸ್ಥಿತಿಗತಿಗಳನ್ನು ಸೂಕ್ಷ್ಮವಾಗಿ ಮೌಲ್ಯೀಕರಿಸುವ ಮತ್ತು ಸ್ಪರ್ಧೆಯ ಆಸಕ್ತಿ ಹೊಂದಿರುವ ನಾಯಕರೊಂದಿಗೆ ನೇರ ಮಾತುಕತೆ ನಡೆಸುವ ಕೆಲಸಗಳು ಆರಂಭವಾಗಿವೆ. ನಮ್ಮಲ್ಲಿ ಬಹುತೇಕರು ಮುಂದಿನ ಕೆಲವು ದಿನಗಳಲ್ಲೇ ತಮ್ಮ ವರದಿಗಳನ್ನು ರಾಜ್ಯ ಉಸ್ತುವಾರಿಗೆ ಸಲ್ಲಿಸಲಿದ್ದಾರೆ” ಎಂದು ಪಟ್ಟಿ ಸಿದ್ದತೆಯಲ್ಲಿ ತೊಡಗಿರುವ ಕಾಂಗ್ರೆಸ್‌ ನಾಯಕರೊಬ್ಬರು ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಸಮಾಜವಾದಿ ಪಕ್ಷದೊಂದಿಗಿನ ಮಹಾ ಮೈತ್ರಿಯ ಭಾಗವಾಗಿ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಸುಮಾರು 80 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಗುರಿ ಹೊಂದಿದೆ. ಅದಕ್ಕಾಗಿ, ಕಾಂಗ್ರೆಸ್‌ ಗೆಲ್ಲಲು ಸಾಧ್ಯವಿರುವ 100ರಿಂದ 120 ಕ್ಷೇತ್ರಗಳನ್ನು ಗುರುತಿಸಲಾಗುತ್ತಿದೆ. ಅಂತಿಮ ಮಾತುಕತೆಯ ವೇಳೆ ಸುಮಾರು 80 ಕ್ಷೇತ್ರಗಳಿಗೆ ಎಸ್‌ಪಿ ಜೊತೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಕಾಂಗ್ರೆಸ್‌ ಮುಖಂಡರು ಹೇಳಿಕೊಂಡಿದ್ದಾರೆ.

ಸಾಮಾಜಿಕ ಮತ್ತು ಜಾತಿ ಸಮೀಕರಣಗಳು ನಮಗೆ ಪೂರಕವಾಗಿಲ್ಲದ ಕ್ಷೇತ್ರಗಳನ್ನು ಅನಗತ್ಯವಾಗಿ ಪಡೆದುಕೊಳ್ಳಲು ನಾವು ಇಷ್ಟಪಡುವುದಿಲ್ಲ. ನಮ್ಮ ಸಂಪೂರ್ಣ ಗಮನವು ಕೇವಲ ಗೆಲ್ಲಬಹುದಾದ ಕ್ಷೇತ್ರಗಳ ಮೇಲಷ್ಟೇ ಇರಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಹಿಂದೆ, 2022ರ ಚುನಾವಣೆಯಲ್ಲಿ ಮೈತ್ರಿಯೊಳಗೆ ಸೀಟು ಹಂಚಿಕೆಯ ವಿವಾದ ಬಗೆಹರಿಯದೆ, ಕಾಂಗ್ರೆಸ್‌ ಎಲ್ಲ 403 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿತ್ತು. ಆದರೆ, ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಪಕ್ಷದ ಒಟ್ಟು ಮತಗಳ ಪಾಲು ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ (2.33%) ಕುಸಿದಿತ್ತು.

ಈ ಬಾರಿ, ಮೈತ್ರಿಯಲ್ಲಿಯೇ ಸ್ಪರ್ಧಿಸಬೇಕು ಎಂಬುದು ಕಾಂಗ್ರೆಸ್‌ನ ನಿಲುವಾಗಿದೆ. ಅದಕ್ಕಾಗಿ, 6 ತಿಂಗಳ ಮುಂಚೆಯೇ ಚುನಾವಣಾ ಸಿದ್ಧತೆಗಳನ್ನು ಆರಂಭಿಸಿದ್ದೇವೆ. ನಮ್ಮ ಮೊದಲ ಆದ್ಯತೆಯು ರಾಜ್ಯದಲ್ಲಿ ಪಕ್ಷದ ಸಾಂಸ್ಥಿಕ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದಾಗಿತ್ತು. ಆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. ಪ್ರಸ್ತುತ ರಾಜ್ಯದ 403 ಕ್ಷೇತ್ರಗಳಲ್ಲಿ ಒಟ್ಟು 2,200 ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಸಮಾಜವಾದಿ ಪಕ್ಷದೊಂದಿಗಿನ ಸೀಟು ಹಂಚಿಕೆಯ ಮಾತುಕತೆಗಳಿಗೆ ಸೂಕ್ತ ಸಮಯ ಬಂದಾಗ ಕಾಂಗ್ರೆಸ್ ಅತ್ಯಂತ ಸೌಹಾರ್ದಯುತವಾಗಿ ಚರ್ಚೆಗಳನ್ನು ಆರಂಭಿಸಲಿದೆ” ಎಂದು ರಾಜ್ಯ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಕನ್ನಡಿಗರೇ ಎಚ್ಚರ: ಎಸ್‌ಐಆರ್‌ – ಮತಪಟ್ಟಿ ಪರಿಶೀಲನೆಯಲ್ಲ, ಪೌರತ್ವ ಪರೀಕ್ಷೆ!

ಪಕ್ಷದ ಕಾರ್ಯತಂತ್ರಗಳ ಬಗ್ಗೆ ಹೆಚ್ಚು ಮಾಹಿತಿ ಹೊಂದಿರುವ ನಾಯಕರು ಹೇಳುವ ಪ್ರಕಾರ, ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖವಾಗಿ ಮುಸ್ಲಿಂ, ದಲಿತ ಮತ್ತು ಬ್ರಾಹ್ಮಣ ಸಮುದಾಯಗಳ ಮತದಾರರನ್ನು ಸೆಳೆಯಲು ವಿಶೇಷ ಗಮನ ಹರಿಸಲು ಯೋಜಿಸಿದೆ. ಪ್ರಸ್ತುತ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೇವಲ ಠಾಕೂರ್ (ಕ್ಷತ್ರಿಯ) ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂಬ ಅಸಮಾಧಾನವು ಬ್ರಾಹ್ಮಣ ಸಮುದಾಯದಲ್ಲಿದೆ. ಆ ಅಸಮಾಧಾನವನ್ನು ಬಳಸಿಕೊಂಡು ಬ್ರಾಹ್ಮಣ ಸಮುದಾಯವನ್ನು ತಲುಪಲು ಕಾಂಗ್ರೆಸ್‌ ಯೋಜಿಸಿದೆ. ಉತ್ತರ ಪ್ರದೇಶದಲ್ಲಿ ಹಿಂದುತ್ವ ರಾಜಕಾರಣದ ಪ್ರಭಾವದೊಂದಿಗೆ ಬ್ರಾಹ್ಮಣರು ಬಿಜೆಪಿ ಕಡೆಗೆ ವಾಲುವ ಮುನ್ನ, ಅವರು ಕಾಂಗ್ರೆಸ್‌ನ ಸಾಂಪ್ರದಾಯಿಕ ಮತದಾರರಾಗಿದ್ದರು. ಅಂತೆಯೇ, ದಲಿತ ಮತ್ತು ಮುಸ್ಲಿಂ ಮತಗಳೂ ಸಹ ನಮಗೆ ಅಷ್ಟೇ ಮುಖ್ಯವಾಗಿವೆ ಎಂದು ಹೇಳಿದ್ದಾರೆ.

ಪ್ರಸ್ತುತ ಉತ್ತರ ಪ್ರದೇಶದ ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು ಸರಿಸುಮಾರು ಶೇ20%, ಬ್ರಾಹ್ಮಣರು 7ರಿಂದ 10% ಹಾಗೂ ದಲಿತ ಸಮುದಾಯವು 20% ಪಾಲನ್ನು ಹೊಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...