ಡಿಎಂಕೆ ತೊರೆದು ವಿಜಯ್ ಜತೆ ಕೈಜೋಡಿಸಿದ್ದ ಕಾಂಗ್ರೆಸ್‌ಗೆ ಈಗ ‘ವಿಜಯ್ ಫಾರ್ ಪಿಎಂ’ ಶಾಕ್: ಸೆ. 9ರ ಸಭೆಯತ್ತ ಎಲ್ಲರ ಚಿತ್ತ!

Date:

ತಮಿಳುನಾಡು ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸ್ಥಾಪಕ ಹಾಗೂ ರಾಜ್ಯದ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ಟಿವಿಕೆ ನಾಯಕರು ಮುಂದಾಗಿದ್ದಾರೆ. ಆದರೆ, ಕೇಂದ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊರತುಪಡಿಸಿ ಬೇರೆ ಯಾರನ್ನೂ ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಈ ನಡುವೆ ಎರಡೂ ಪಕ್ಷಗಳ ನಡುವಿನ ಮೈತ್ರಿಯಲ್ಲಿ ತೀವ್ರ ಬಿರುಕು ಕಾಣಿಸಿಕೊಳ್ಳುತ್ತಿರುವಂತಿದೆ. ಈ ರಾಜಕೀಯ ಹಗ್ಗಜಗ್ಗಾಟದ ನಡುವೆಯೇ, ಸೆಪ್ಟೆಂಬರ್ 9ರಂದು ಟಿವಿಕೆ ನೇತೃತ್ವದ ಮೈತ್ರಿಕೂಟದ ಪ್ರಮುಖ ಸಭೆಯನ್ನು ಕರೆಯಲಾಗಿದೆ. ಈ ಸಭೆಯು ತಮಿಳುನಾಡು ಮಾತ್ರವಲ್ಲದೆ ದೇಶದ ರಾಜಕೀಯದಲ್ಲಿ ಅತ್ಯಂತ ನಿರ್ಣಾಯಕ ಎನಿಸಿದೆ.

- Advertisement -

ಇತ್ತೀಚೆಗೆ ತಮಿಳುನಾಡಿನ ವಿವಿಧ ಭಾಗಗಳಲ್ಲಿ ‘ನಾಳಿನ ಪ್ರಧಾನಿ ವಿಜಯ್’ ಎಂಬ ಪೋಸ್ಟರ್‌ಗಳು ಹಾಗೂ ಟಿವಿಕೆ ಶಾಸಕಿ ಕಣಿಮೊಳಿ ಸೇರಿದಂತೆ ಹಲವು ಸಚಿವರ ಹೇಳಿಕೆಗಳು ಈ ವಿವಾದಕ್ಕೆ ಕಾರಣವಾಗಿದೆ. “ದೆಹಲಿಯಲ್ಲ, ತಮಿಳುನಾಡೇ ದೇಶದ ಮುಂದಿನ ಪ್ರಧಾನಿಯನ್ನು ನಿರ್ಧರಿಸಲಿದೆ. ರಾಹುಲ್ ಗಾಂಧಿ ಅವರೇ ವಿಜಯ್ ಅವರನ್ನು ಪ್ರಧಾನಿ ಕುರ್ಚಿಯಲ್ಲಿ ಕೂರಿಸಲಿದ್ದಾರೆ” ಎಂದು ಟಿವಿಕೆ ನಾಯಕರು ವಾದಿಸಲು ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿ: ಟಿವಿಕೆ ಬೆಂಬಲಿಗರ ‘ವಿಜಯ್ ಪಿಎಂ’ ಘೋಷಣೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಎಐಸಿಸಿ: 2029ಕ್ಕೆ ರಾಹುಲ್ ನಾಯಕ ಎಂದ ಕಾಂಗ್ರೆಸ್

ಆದರೆ, ಈ ಪ್ರತಿಪಾದನೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ತಳ್ಳಿಹಾಕಿದೆ. ತಮಿಳುನಾಡು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಿ ತಾರಗೈ ಕತ್ಬರ್ಟ್ ಹಾಗೂ ರಾಜ್ಯ ಸಚಿವ ಆರ್ ರಾಜೇಶ್ ಕುಮಾರ್ ಪ್ರತಿಕ್ರಿಯಿಸಿ, “ಟಿವಿಕೆಯ ಹೊಸ ಶಾಸಕರು ಇನ್ನೂ ‘ಫ್ಯಾನ್ ಕ್ಲಬ್’ ಮನಸ್ಥಿತಿಯಲ್ಲಿದ್ದಾರೆ. ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅವರೇ ಎಂಬುದು ಮೊದಲೇ ತೀರ್ಮಾನ ಆಗಿದೆ. ಒಂದು ವೇಳೆ ಟಿವಿಕೆ ನಾಯಕರು ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳದಿದ್ದರೆ, ನಾವು ವಿಜಯ್ ಸರ್ಕಾರದಲ್ಲಿರುವ ನಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿ ಸರ್ಕಾರದಿಂದ ಹೊರಬರುತ್ತೇವೆ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಡಿಎಂಕೆಯಿಂದ ದೂರವಾಗಿ ವಿಜಯ್ ಜೊತೆ ಬಂದಿದ್ದ ಕಾಂಗ್ರೆಸ್

ಇಲ್ಲಿ ಗಮನಿಸಬೇಕಾದ ಪ್ರಮುಖ ವಿಚಾರವೆಂದರೆ, ಈ ಹಿಂದೆ ತಮಿಳುನಾಡಿನಲ್ಲಿ ಸುದೀರ್ಘ ಕಾಲ ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿದ್ದ ಕಾಂಗ್ರೆಸ್, ಎಂ ಕೆ ಸ್ಟ್ಯಾಲಿನ್ ಅವರ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡು ಜೋಸೆಫ್ ವಿಜಯ್ ಅವರ ನೂತನ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿ ಅಧಿಕಾರಕ್ಕೆ ತಂದಿತ್ತು. ಹಿಂದೆ ಡಿಎಂಕೆ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರು ಬಹಿರಂಗವಾಗಿಯೇ “ರಾಹುಲ್ ಗಾಂಧಿಯೇ ದೇಶದ ಮುಂದಿನ ಪ್ರಧಾನಿಯಾಗಬೇಕು” ಎಂದು ಗಟ್ಟಿಯಾಗಿ ಧ್ವನಿ ಎತ್ತಿದ್ದರು. ಆದರೆ, ಅಂತಹ ಭರವಸೆಯ ಮಿತ್ರ ಡಿಎಂಕೆಯನ್ನು ಬಿಟ್ಟು ವಿಜಯ್ ಜೊತೆ ಕಾಂಗ್ರೆಸ್ ಕೈಜೋಡಿಸಿತ್ತು. ಟಿವಿಕೆಯನ್ನು ಬಿಜೆಪಿಯ ಕೋಮುವಾದದತ್ತ ವಾಲುವುದನ್ನು ತಡೆಯಲು ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದ್ದರೂ ಡಿಎಂಕೆಯನ್ನು ಕೈಬಿಟ್ಟಿದ್ದು ರಾಜಕೀಯವಾಗಿ ಅತಿ ದೊಡ್ಡ ನಿರ್ಧಾರ ಎನಿಸಿತು. ಇದೀಗ ಕಾಂಗ್ರೆಸ್‌ ರಾಜ್ಯದಲ್ಲೂ ಅಧಿಕಾರ ಉಳಿಸಿಕೊಳ್ಳಲಾಗದೆ, ರಾಷ್ಟ್ರಮಟ್ಟದಲ್ಲೂ ವಿಜಯ್‌ರಿಂದ ಸವಾಲು ಎದುರಿಸುವಂತಹ ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿದೆ.

ಈ ರಾಜಕೀಯ ಜಟಾಪಟಿಯ ನಡುವೆಯೇ ಸೆಪ್ಟೆಂಬರ್ 9ರಂದು ಟಿವಿಕೆ ನಾಯಕರು ತಮ್ಮ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಸಿಪಿಐ(ಎಂ), ಸಿಪಿಐ ಮತ್ತು ಎಂಡಿಎಂಕೆಯಂತಹ ಮಿತ್ರಪಕ್ಷಗಳ ತುರ್ತು ಸಭೆ ಕರೆದಿದ್ದಾರೆ. ಈ ಸಭೆಗೆ ಕಾಂಗ್ರೆಸ್‌ಗೆ ಅಧಿಕೃತ ಆಹ್ವಾನ ನೀಡಲಾಗಿದೆಯೇ ಇಲ್ಲವೇ ಎಂಬುದು ಇನ್ನು ಸ್ಪಷ್ಟವಾಗಿಲ್ಲವಾದರೂ, 9ರ ಸಭೆಯಲ್ಲಿ ಸರ್ಕಾರ ಹಾಗೂ ಮೈತ್ರಿಕೂಟದ ಭವಿಷ್ಯ ನಿರ್ಧಾರವಾಗಲಿದೆ. ವಿಜಯ್ ಅವರು ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಪುನರುಚ್ಚರಿಸಿ ವಾತಾವರಣ ತಂಪಾಗಿಸುತ್ತಾರೋ ಅಥವಾ ತಮ್ಮ ಪ್ರಧಾನಿ ಪಟ್ಟದ ಆಕಾಂಕ್ಷೆಯನ್ನು ಮುಂದುವರಿಸಿ ಕಾಂಗ್ರೆಸ್ ಮೈತ್ರಿಯಿಂದ ಹೊರನಡೆಯಲು ಹಾದಿ ಮಾಡಿಕೊಡುತ್ತಾರೋ ಎಂಬುದನ್ನು ಸೆಪ್ಟೆಂಬರ್ 9ರ ಸಭೆ ಸ್ಪಷ್ಟಪಡಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...