ಅಜಿತ್ ನಿಧನಕ್ಕೆ ಗೌರವ; ಬಾರಾಮತಿ ಉಪಚುನಾವಣೆಯಿಂದ ಹಿಂದೆ ಸರಿದ ಕಾಂಗ್ರೆಸ್: ಸುನೇತ್ರಾ ಪವಾರ್‌ ದಾರಿ ಸುಗಮ

Date:

ನಾಮಪತ್ರ ಹಿಂಪಡೆಯಲು ಕೆಲವೇ ಗಂಟೆಗಳ ಅವಕಾಶವಿರುವಾಗ ಕಾಂಗ್ರೆಸ್ ಬಾರಾಮತಿ ಉಪಚುನಾವಣೆಯಿಂದ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಗೌರವದ ಸಂಕೇತವಾಗಿ ಚುನಾವಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಕಾಂಗ್ರೆಸ್ ಹೇಳಿದೆ. ಇದರಿಂದಾಗಿ ಅಜಿತ್ ಪತ್ನಿ ಸುನೇತ್ರಾ ಪವಾರ್‌ ದಾರಿ ಸುಗಮವಾಗಿದೆ.

- Advertisement -

ಜನವರಿ 28ರಂದು ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಅವರು ನಿಧನರಾಗಿದ್ದಾರೆ. ಅವರ ನಿಧನದಿಂದ ತೆರವಾದ ಬಾರಾಮತಿ ವಿಧಾನಸಭಾ ಕ್ಷೇತ್ರಕ್ಕೆ ಪತ್ನಿ ಸುನೇತ್ರಾ ಪವಾರ್ ಕಣಕ್ಕಿಳಿದಿದ್ದಾರೆ. ಕಳೆದ ಕೆಲವು ದಿನಗಳಿಂದ, ಎನ್‌ಸಿಪಿಯ ಎರಡೂ ಬಣಗಳ ನಾಯಕರು ಈ ಕ್ಷೇತ್ರದಲ್ಲಿ ಸುನೇತ್ರಾ ಪವಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಅವಕಾಶ ನೀಡಬೇಕು, ಅದಕ್ಕಾಗಿ ಕಾಂಗ್ರೆಸ್ ನಾಮಪತ್ರ ಹಿಂಪಡೆಯಬೇಕು ಎಂದು ಮನವಿ ಮಾಡುತ್ತಲೇ ಇತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಉಪ ಮುಖ್ಯಮಂತ್ರಿ ಹುದ್ದೆ

ಹಲವು ದಿನಗಳಿಂದ ಕಾಂಗ್ರೆಸ್ ನಾಯಕರ ಮನವೊಲಿಸುವ ಪ್ರಯತ್ನವನ್ನು ಎನ್‌ಸಿಪಿಯ ಎರಡೂ ಬಣಗಳ ನಾಯಕರು ಮಾಡಿದ್ದಾರೆ. ಇದೀಗ ಕಾಂಗ್ರೆಸ್ ನಾಮಪತ್ರ ಹಿಂಪಡೆದಿದೆ. “ಗೌರವದ ಸಂಕೇತವಾಗಿ (ಅಜಿತ್ ಪವಾರ್ ನಿಧನಕ್ಕೆ) ಕಾಂಗ್ರೆಸ್ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ. ಕಳೆದ ವಾರದಿಂದ, ಬಿಜೆಪಿ ಕೂಡ ಕಾಂಗ್ರೆಸ್ ಅನ್ನು ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಿತ್ತು.

ಗುರುವಾರ ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮಹಾರಾಷ್ಟ್ರ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್, “ಮಹಾರಾಷ್ಟ್ರದ ಸಂಪ್ರದಾಯ ಮತ್ತು ಇತರೆ ಪಕ್ಷಗಳು ನಡೆಸಿದ ಮಾತುಕತೆಯನ್ನು ಪರಿಗಣಿಸಿ ಪಕ್ಷವು ನಮ್ಮ ಅಭ್ಯರ್ಥಿ ಆಕಾಶ್ ಮೋರೆ ಅವರನ್ನು ಬಾರಾಮತಿ ಉಪಚುನಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಿದೆ” ಎಂದು ಹೇಳಿದರು.

ಆದರೆ ಸುನೇತ್ರಾ ಅವರು ಅವಿರೋಧವಾಗಿ ಆಯ್ಕೆಯಾಗುತ್ತಿಲ್ಲ. ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿರುವುದರಿಂದ, ಬಾರಾಮತಿ ಉಪಚುನಾವಣೆ ಸಂಪೂರ್ಣವಾಗಿ ಸುನೇತ್ರಾ ಅವಿರೋಧವಾಗಿ ಆಯ್ಕೆಯಾಗುವುದಿಲ್ಲ. ಸುನೇತ್ರಾ ಪವಾರ್ ಮುಂದೆ ಯಾವುದೇ ಪ್ರಮುಖ ಪಕ್ಷದ ಅಭ್ಯರ್ಥಿಗಳು ಇಲ್ಲದಿದ್ದರೂ ಸ್ವತಂತ್ರ ಅಭ್ಯರ್ಥಿಗಳ ಮುಂದೆ ಕಣಕ್ಕಿಳಿಯಬೇಕಾಗಿದೆ. ಆದರೆ ಸುನೇತ್ರಾ ಯಾವುದೇ ತೊಂದರೆಯಿಲ್ಲದೆ ಸ್ಪರ್ಧೆಯಲ್ಲಿ ಗೆಲ್ಲುವ ಸಾಧ್ಯತೆಯಿದೆ.

ಇನ್ನು ತಮ್ಮ ಈ ನಿರ್ಧಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಸಪ್ಕಲ್, “ಅಜಿತ್ ಪವಾರ್ ಅವರ ಸಾವು ಖಂಡಿತವಾಗಿಯೂ ದುರದೃಷ್ಟಕರ. ಅವರು ಹಿಂದೆಯೂ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದರು. ಸುನೇತ್ರಾ ಪವಾರ್ ಇಂದಿನವರೆಗೆ ಮೂರು ಬಾರಿ ನನಗೆ ದೂರವಾಣಿ ಕರೆ ಮಾಡಿದ್ದರು. ನಿಯೋಗವೂ ನನ್ನನ್ನು ಭೇಟಿ ಮಾಡಿತ್ತು. ಹಿರಿಯ ಎನ್‌ಸಿಪಿ ನಾಯಕರಾದ ಛಗನ್ ಭುಜಬಲ್ ಮತ್ತು ಧನಂಜಯ್ ಮುಂಡೆ ಕರೆ ಮಾಡಿ ಅಭ್ಯರ್ಥಿ ಹಿಂಪಡೆಯಲು ಮನವಿ ಮಾಡಿದ್ದಾರೆ. ಎನ್‌ಸಿಪಿ ಎಸ್‌ಪಿ ಶಾಸಕ ರೋಹಿತ್ ಪವಾರ್ ಕೂಡ ಅದೇ ಮನವಿಯನ್ನು ಮಾಡಿದ್ದಾರೆ. ಕಾಂಗ್ರೆಸ್ ವಿರುದ್ಧ ನೀಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅಜಿತ್ ಪವಾರ್ ವಿಮಾನ ಅಪಘಾತ: ಸಮಗ್ರ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ರೋಹಿತ್ ಪವಾರ್ ಪತ್ರ

ಇನ್ನು ಗುರುವಾರ ಬೆಳಿಗ್ಗೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣದ ರೋಹಿತ್ ಪವಾರ್ ಅವರು ಮುಂಬೈನ ಆಶ್ರಮದಲ್ಲಿ ಸಪ್ಕಲ್ ಅವರನ್ನು ಭೇಟಿ ಮಾಡಿ ಸಭೆ ನಡೆಸಿದ್ದಾರೆ. ನಂತರ ಕಾಂಗ್ರೆಸ್ ಈ ನಿರ್ಧಾರಕ್ಕೆ ಬಂದಿದೆ. ಕಾಂಗ್ರೆಸ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ರೋಹಿತ್ ಪವಾರ್, “ಅಜಿತ್ ಪವಾರ್ ಅವರ ದುರದೃಷ್ಟಕರ ನಿಧನದ ನಂತರ, ಬಾರಾಮತಿ ಜನರು ಚುನಾವಣೆಯು ಅವಿರೋಧವಾಗಿ ನಡೆಯುತ್ತದೆ ಎಂದು ಆಶಿಸುತ್ತಿದ್ದರು. ಅದು ಅಜಿತ್ ದಾದಾ ಅವರಿಗೆ ನಿಜವಾದ ಗೌರವ. ಅದರಂತೆ, ಕಾಂಗ್ರೆಸ್ ನಾಯಕರ ನಿರ್ಧಾರಕ್ಕಾಗಿ ನಾವು ಸ್ವಾಗತಿಸುತ್ತೇವೆ ಮತ್ತು ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ಹೇಳಿದ್ದಾರೆ.

ರೋಹಿತ್ ಪವಾರ್ ಅವರಲ್ಲದೆ, ಎನ್‌ಸಿಪಿ-ಅಜಿತ್ ಪವಾರ್ ಬಣವು ಮಹಾರಾಷ್ಟ್ರ ಪರಿಹಾರ ಮತ್ತು ಪುನರ್ವಸತಿ ಸಚಿವ ಮಕರಂದ್ ಪಾಟೀಲ್ ನೇತೃತ್ವದಲ್ಲಿ ಶಾಸಕರಾದ ಸಂಜಯ್ ಖೋಡ್ಕೆ, ರಾಜೇಶ್ ವಿಟೇಕರ್, ಮನೋಜ್ ಕಾಯಂಡೆ ಮತ್ತು ಸನಾ ಮಲಿಕ್ ಸೇರಿದಂತೆ ಐದು ಸದಸ್ಯರ ನಿಯೋಗವನ್ನು ಗುರುವಾರ ಸಪ್ಕಲ್ ಅವರನ್ನು ಭೇಟಿ ಮಾಡಲು ಕಳುಹಿಸಿತ್ತು.

ಈ ಹಿಂದೆ ಬಿಜೆಪಿ ಸಚಿವ ಚಂದ್ರಶೇಖರ್ ಬವಾಂಕುಲೆ, “ಹರ್ಷವರ್ಧನ್ ಸಪ್ಕಲ್ ಅವರು ನಾಮಪತ್ರವನ್ನು ಹಿಂಪಡೆಯುವಂತೆ ನಾನು ವಿನಂತಿಸುತ್ತೇನೆ. ನಾನು ಇದನ್ನು ಮೊದಲೇ ಹೇಳಿದ್ದೇನೆ. ಇದು ಅಜಿತ್ ದಾದಾ ಅವರ ಸ್ಥಾನ. ಅವರ ನಿಧನವು ತುಂಬಾ ದುರದೃಷ್ಟಕರವಾಗಿದ್ದು. ಜನರು ಇನ್ನೂ ಆಘಾತದಲ್ಲಿದ್ದಾರೆ. ಆದ್ದರಿಂದ ಕಾಂಗ್ರೆಸ್ ಜನರ ಅಭಿಪ್ರಾಯ, ಭಾವನೆಗೆ ಗೌರವ ನೀಡಬೇಕು” ಎಂದು ಹೇಳಿದ್ದರು.

ಸದ್ಯ ಬಾರಾಮತಿಯಲ್ಲಿ ಧನಂಜಯ್ ಮುಂಡೆ ಅವರ ಎರಡನೇ ಪತ್ನಿ ಕರುಣಾ ಮುಂಡೆ ಸೇರಿದಂತೆ 23 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದ್ದರಿಂದ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ.

ಶರದ್ ಪವಾರ್ ರಾಜಕೀಯ ಪ್ರವೇಶಿಸಿದ 1960ರ ದಶಕದಿಂದ, ಬಾರಾಮತಿ ಪವಾರ್ ಅವರ ಭದ್ರಕೋಟೆಯಾಗಿತ್ತು. ಅಜಿತ್ ಪವಾರ್ ರಾಜಕೀಯಕ್ಕೆ ಪ್ರವೇಶಿಸಿದಾಗ ಬಾರಾಮತಿಯಿಂದ ಸ್ಪರ್ಧಿಸಿದ್ದರು. ಅಜಿತ್ ಒಟ್ಟು ಏಳು ಬಾರಿ ಬಾರಾಮತಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...