ಲೋಕಸಭೆ ಸ್ಪೀಕರ್ ಸ್ಥಾನ : ವಿಪಕ್ಷದಿಂದ ಕಾಂಗ್ರೆಸ್‌ನ ಕೆ ಸುರೇಶ್, ಎನ್‌ಡಿಎನಿಂದ ಓಂ ಬಿರ್ಲಾ ಪುನಃ ಕಣಕ್ಕೆ

Date:

ಲೋಕಸಭೆ ಸ್ಪೀಕರ್‌ ಸ್ಥಾನಕ್ಕೆ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್‌ ಸಂಸದ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಜೊತೆ ಮಾತುಕತೆ ಮುರಿದುಬಿದ್ದ ನಂತರ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಕಳೆದ ಎನ್‌ಡಿಎ ಸರ್ಕಾರದಲ್ಲಿ ಸ್ಫೀಕರ್‌ ಆಗಿದ್ದ ಬಿಜೆಪಿ ಸಂಸದ ಓಂ ಬಿರ್ಲಾ ಪುನಃ ನಾಮಪತ್ರ ಸಲ್ಲಿಸಿದ್ದಾರೆ.

- Advertisement -

ಸ್ಪೀಕರ್‌ ಚುನಾವಣೆಯು ಜೂ.26ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಓಂ ಬಿರ್ಲಾ ಅವರು ರಾಜಸ್ಥಾನದ ಕೋಟ ಲೋಕಸಭಾ ಕ್ಷೇತ್ರದಿಂದ 2014ರಿಂದ ಸಂಸದರಾಗಿ ಆಯ್ಕೆಯಾಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸ್ಪೀಕರ್‌ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಲು ಇಂಡಿಯಾ ಒಕ್ಕೂಟದ ಸದಸ್ಯರು ನಿರಾಕರಿಸಿದರು. ಕೇಂದ್ರ ಸಚಿವ ರಾಜ್‌ನಾಥ್ ಸಿಂಗ್‌ ಅವರ ಕಚೇರಿಗೆ ಮಾತುಕತೆಗೆ ಆಗಮಿಸಿದ್ದ ಕಾಂಗ್ರೆಸ್‌ನ ಕೆ ಸಿ ವೇಣು ಗೋಪಾಲ್‌, ಡಿಎಂಕೆಯ ಟಿ ಆರ್‌ ಬಾಲು ಒಮ್ಮತಕ್ಕೆ ಬೆಂಬಲ ವ್ಯಕ್ತಪಡಿಸಲು ನಿರಾಕರಿಸಿ ಕಚೇರಿಯಿಂದ ಹೊರನಡೆದರು.

ಭರ್ತೃಹರಿ ಮಹತಾಬ್‌ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರ ನಿಯಮಾವಳಿಗಳನ್ನು ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಒಳಗೊಂಡಂತೆ ವಿಪಕ್ಷಗಳು ನಿನ್ನೆ ವಿರೋಧ ವ್ಯಕ್ತಪಡಿಸಿದ್ದವು. ನಿಯಮಾನುಸಾರ ಅತೀ ಹೆಚ್ಚು ಅವಧಿಗೆ 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್ ಸಂಸದ ಕೆ ಸುರೇಶ್‌ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಬೇಕಿತ್ತೆಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಹಿರಿತನದ ಆಧಾರದ ಮೇಲೆ ಸುರೇಶ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್‌ ಆಗಿ ಆಯ್ಕೆ ಮಾಡಬೇಕಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆಯೇ?

ಬಿಜೆಪಿ ನೇತೃತ್ವದ ಸರ್ಕಾರ ಸ್ಪೀಕರ್‌ ಹುದ್ದೆಯ ನಿಯಮಾವಳಿಯನ್ನು ಉಲ್ಲಂಘಿಸಿ ರಾಜಕೀಯಕರಣಗೊಳಿಸಿದೆ ಎಂದು ಕಾಂಗ್ರೆಸ್ ನಾಯಕರಾದ ಜೈರಾಮ್‌ ರಮೇಶ್ ಹಾಗೂ ಕೆ ಸಿ ವೇಣುಗೋಪಾಲ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.

ಕೇರಳದ ಸಂಸದ ಕೆ ಸುರೇಶ್‌ ಅವರು ಎರಡು ಬಾರಿ ಸೋತಿದ್ದರೂ ಎರಡು ಕ್ಷೇತ್ರಗಳಾದ ಮಾವಲಿಕೇರ ಹಾಗೂ ಅಡೂರಿನಿಂದ 8 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ವಿಪಕ್ಷಗಳ ಆರೋಪವನ್ನು ಅಲ್ಲಗಳೆದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು, ಮಹತಾಬ್‌ ಅವರು ಸತತವಾಗಿ 7 ಬಾರಿ ಆಯ್ಕೆಯಾದ ಕಾರಣ ನಿಯಮಾನುಸಾರ ಅವರನ್ನು ಆಯ್ಕೆ ಮಾಡಲಾಗಿದೆ. ಸುರೇಶ್ ಅವರು 1998 ಹಾಗೂ 2004ರಲ್ಲಿ ಸೋಲು ಅನುಭವಿಸಿದ್ದರು ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ರಾಜ್ಯಸಭೆ ಚುನಾವಣೆ | ಬಿಜೆಪಿಯ 8 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್‌ ಪುರಿ ಔಟ್‌

ಮುಂದಿನ ಅಕ್ಟೋಬರ್ 16ರಂದು ನಡೆಯಲಿರುವ ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆಗೆ ಬಿಜೆಪಿ...

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...