ಕಾಂಗ್ರೆಸ್‌ ಪ್ರತಿಭಟನೆ ಪ್ರಾಮಾಣಿಕವಲ್ಲ, ಬಿಜೆಪಿಗೆ ದೇಶಭಕ್ತಿ ಇಲ್ಲ: ಸೋನಂ ವಾಂಗ್‌ಚುಕ್ ಪತ್ನಿ ಗೀತಾಂಜಲಿ

Date:

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಪ್ರಾಮಾಣಿಕವಾಗಿರಲಿಲ್ಲ. ಬಿಜೆಪಿ ತನ್ನನ್ನು ಹಿಂದೂ ರಾಷ್ಟ್ರೀಯ ಪಕ್ಷ ಎಂದು ಕರೆಯುತ್ತದೆ. ಆದರೆ ಅವರ ನಡೆಗಳಲ್ಲಿ ಹಿಂದುತ್ವವೂ ಕಾಣುವುದಿಲ್ಲ, ರಾಷ್ಟ್ರೀಯತೆಯೂ ಕಾಣುವುದಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಟೀಕಿಸಿದ್ದಾರೆ.

- Advertisement -

ಇಂಡಿಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಗೀತಾಂಜಲಿ ಆಂಗ್ಮೋ, “ಪ್ರಧಾನಿ ನಿವಾಸದ ಎದುರು ನಡೆದ ಪ್ರತಿಭಟನೆಯಲ್ಲಿ ಪ್ರಾಮಾಣಿಕತೆ ಇರಲಿಲ್ಲ. ಇಂದಿನ ಭಾರತ ಜಾಗೃತವಾಗಿದೆ. ಜನರನ್ನು ಇನ್ನು ಮುಂದೆ ಸುಲಭವಾಗಿ ಮೋಸಗೊಳಿಸಲು ಸಾಧ್ಯವಿಲ್ಲ. ಪ್ರಾಮಾಣಿಕತೆ ಇಲ್ಲದವರನ್ನು ಯುವಜನತೆ ತಿರಸ್ಕರಿಸುತ್ತದೆ. ವಿದ್ಯಾರ್ಥಿಗಳೊಂದಿಗೆ ಜಂತರ್ ಮಂತರ್‌ನಲ್ಲಿ ನಿಲ್ಲುವ ಬದಲು ಕಾಂಗ್ರೆಸ್ ನಾಯಕರು ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದಾರೆ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಜುಲೈ 21ರಂದು ಸಂಸತ್ ಮುತ್ತಿಗೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರು ಪ್ರಧಾನಿ ನಿವಾಸದ ಸಮೀಪ ಧರಣಿ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದರು. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಆಂಗ್ಮೋ, ಪ್ರತಿಭಟನೆ ವಿದ್ಯಾರ್ಥಿಗಳ ಹೋರಾಟದ ಸ್ಥಳದಲ್ಲೇ ನಡೆಯಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಜುಲೈ 20ರಂದು ನಡೆದ ‘ಸಂಸದ್ ಚಲೋ’ ಮೆರವಣಿಗೆಯಲ್ಲಿ ಎಲ್ಲ ಧರ್ಮ, ಜಾತಿ ಮತ್ತು ಹಿನ್ನೆಲೆಯ ಜನರು ಒಂದೇ ಉದ್ದೇಶಕ್ಕಾಗಿ ಭಾಗವಹಿಸಿದ್ದು, ಅದೇ ನಿಜವಾದ ಭಾರತೀಯತೆ ಮತ್ತು ಹಿಂದೂ ಧರ್ಮದ ಒಳಗೊಳ್ಳುವಿಕೆಯ (Inclusiveness) ಪ್ರತೀಕ ಎಂದು ಅವರು ಹೇಳಿದ್ದಾರೆ.

“ಪ್ರತಿಭಟನೆಗಳನ್ನು ತಡೆಯುವುದು, ಯುವಕರನ್ನು ದೇಶವಿರೋಧಿಗಳು ಎಂದು ಕರೆಯುವುದು ರಾಷ್ಟ್ರೀಯತೆಯಲ್ಲ. ನ್ಯಾಯ, ಸ್ವಾತಂತ್ರ್ಯ ಮತ್ತು ಶಾಂತಿಯುತ ಪ್ರತಿಭಟನೆಯ ಹಕ್ಕಿಗೆ ಅಡ್ಡಿಪಡಿಸುವುದು ದೇಶಭಕ್ತಿಯಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ಲಿಖಿತ ಭರವಸೆ: 26 ದಿನಗಳ ಬಳಿಕ ಸೋನಮ್ ವಾಂಗ್‌ಚುಕ್ ಉಪವಾಸ ಅಂತ್ಯ

ಕೆಲವು ರಾಜಕೀಯ ನಾಯಕರು ಸೋನಂ ವಾಂಗ್‌ಚುಕ್ ಅವರ ಜನಪ್ರಿಯತೆ ಮತ್ತು ಹೋರಾಟವನ್ನು ತಮ್ಮ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಗೀತಾಂಜಲಿ ಆರೋಪಿಸಿದ್ದಾರೆ.

ಈ ಚಳವಳಿ ಯಾವುದೇ ರಾಜಕೀಯ ಪಕ್ಷದದ್ದಲ್ಲ. ಇದು ವಿದ್ಯಾರ್ಥಿಗಳ ಮತ್ತು ಶಿಕ್ಷಣದ ಪ್ರಶ್ನೆ. ತಮ್ಮದೇ ರಾಜಕೀಯ ಅಜೆಂಡಾ ಹೊತ್ತು ಬರುವವರು ಕೊನೆಗೆ ಹಿಂದೆ ಬೀಳುತ್ತಾರೆ. ಪ್ರಾಮಾಣಿಕ ಉದ್ದೇಶದಿಂದ ಬರುವವರಿಗೆ ಮಾತ್ರ ಈ ಚಳವಳಿಯಲ್ಲಿ ಸ್ವಾಗತವಿದೆ ಎಂದು ಅವರು ಹೇಳಿದ್ದಾರೆ. ಈ ವಿದ್ಯಾರ್ಥಿ ಚಳವಳಿ ಯಾವುದೇ ರಾಜಕೀಯ ಪಕ್ಷದ ಪರ ಅಥವಾ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿದ ಆಂಗ್ಮೋ, “ನಮಗೆ ಸರ್ಕಾರವೂ ಇಲ್ಲ, ಪ್ರತಿಪಕ್ಷವೂ ಇಲ್ಲ. ನಮ್ಮ ಪಾಲಿಗೆ ಸಂಸತ್ತೇ ಅತ್ಯುನ್ನತ ಸಂಸ್ಥೆ. ಶಿಕ್ಷಣವನ್ನು ರಾಷ್ಟ್ರದ ಮೂಲಭೂತ ವಿಷಯವಾಗಿ ಸಂಸತ್ತು ಪರಿಗಣಿಸಬೇಕು ಎಂಬುದಷ್ಟೇ ನಮ್ಮ ಬೇಡಿಕೆ” ಎಂದಿದ್ದಾರೆ.

ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಆಂದೋಲನಕ್ಕೆ ಬೆಂಬಲ ಸೂಚಿಸಿ, ಕಳೆದ 26 ದಿನಗಳಿಂದ ಆಮರಣಾಂತ ಉಪವಾಸ ನಡೆಸುತ್ತಿದ್ದ ಸೋನಂ ವಾಂಗ್‌ಚುಕ್ ತಮ್ಮ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಅಧಿಕೃತವಾಗಿ ಲಿಖಿತ ಭರವಸೆಗಳು ದೊರೆತ ಹಿನ್ನೆಲೆಯಲ್ಲಿ ಅವರು ಜುಲೈ 23ರ (ಗುರುವಾರ) ಮಧ್ಯರಾತ್ರಿ ತಮ್ಮ ಉಪವಾಸವನ್ನು ಹಿಂಪಡೆದಿದ್ದಾರೆ.

ಸರ್ಕಾರ ನೀಡಿರುವ ಲಿಖಿತ ಒಪ್ಪಂದದ ಪ್ರಕಾರ, ಜುಲೈ 20ರಂದು ನಡೆದ ‘ಸಂಸತ್ ಚಲೋ’ ಮೆರವಣಿಗೆ ಸೇರಿದಂತೆ ಈವರೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ನಾಯಕರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ಅಥವಾ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...